LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವಿದ್ಯಾರ್ಥಿಗಳಿಗೆ ಉದ್ಯೋಗವಕಾಶ ಕಲ್ಪಿಸಲು ವಿಟಿಯು, ವಿಶ್ವಭಾರತ್ ಸ್ಕಿಲ್ ಜತೆಗೆ ಒಪ್ಪಂದ

ಬೆಂಗಳೂರು: ಎಂಜಿನಿಯರಿಂಗ್ ಕೋರ್ಸ್ ಜತೆಗೆ ಅವಶ್ಯವಿರುವ ಪ್ರಾಯೋಗಿಕ ತರಬೇತಿಗಾಗಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ(ವಿಟಿಯು) ವಿಶ್ವಭಾರತ್ ಸ್ಕಿಲ್ ಇನ್‌ಸ್ಟಿಟ್ಯೂಟ್(ವಿಬಿಎಸ್‌ಐ) ಜತೆಗೆ ಒಪ್ಪಂದ ಮಾಡಿಕೊಂಡಿದೆ.

ಗುರುವಾರ ಬೆಂಗಳೂರಿನ ವಿಟಿಯು ಪ್ರಾದೇಶಿಕ ಕಚೇರಿಯಲ್ಲಿ ಈ ಒಪ್ಪಂದಕ್ಕೆ ವಿಟಿಯು ಕುಲಪತಿ ಪ್ರೊ.ಎಸ್.ವಿದ್ಯಾಶಂಕರ್ ಹಾಗೂ ವಿಶ್ವಭಾರತ್ ಸ್ಕಿಲ್ ಇನ್‌ಸ್ಟಿಟ್ಯೂಟ್‌ನ (ವಿಬಿಎಸ್‌ಐ) ನಿರ್ದೇಶಕರಾದ ಎಫ್.ಆರ್.ಸಿಂಘ್ವಿ ನಿಯೋಗ ಸಹಿ ಹಾಕಿತು.

ವಿದ್ಯಾರ್ಥಿಗಳಿಗೆ ಕೈಗಾರಿಕೆ ಬಯಸುವ ರೀತಿಯಲ್ಲಿ ಉನ್ನತ ಕೌಶಲ್ಯವನ್ನು ನೀಡುವ ಉದ್ದೇಶವನ್ನು ಹೊಂದಿದೆ. ಅಡ್ವಾನ್ಸ್ ಅನಾಲಿಟಿಕ್ಸ್, ಕೃತಕ ಬುದ್ಧಿಮತ್ತೆ(ಎಐ), ಮಷಿನ್ ಲರ್ನಿಂಗ್(ಎಂಎಲ್), ಡೇಟಾ ಅನಾಲಿಟಿಕ್ಸ್, ಕ್ಲೌಡ್ ಮತ್ತು ಮೂಲ ಸೌಕರ್ಯ, ಐಟಿ ಮೂಲ ಸೌಕರ್ಯ ನಿರ್ವಹಣೆ, ಕ್ಲೌಡ್ ಕಂಪ್ಯೂಟಿಂಗ್, ದತ್ತಾಂಶ ಕೇಂದ್ರ ತಂತ್ರಜ್ಞಾನ, ಸೈಬರ್ ಸೆಕ್ಯೂರಿಟಿ, ಹೆಲ್ತ್ ಕೇರ್ ಮತ್ತು ಮೆಡಿಕಲ್ ಟೆಕ್ನಾಲಜಿ, ಇಂಡಸ್ಟ್ರಿ, ಆಟೋಮಿಷನ್ ಮತ್ತು ಮೆಕಟ್ರಾನಿಕ್ಸ್, ಡಿಜಿಟಲ್ ಮೀಡಿಯಾ ಮತ್ತು ಫುಲ್ ಸ್ಟಾಕ್ ಡೆವಲೆಪ್‌ಮೆಂಟ್, ಆನಿಮೇಷನ್, ಗೇಮ್ ಡೆವಲಪರ್, ಜಿಐಎಸ್ ಡ್ರೋನ್ಸ್, ನವೀಕರಿಸಬಹುದಾದ ಇಂಧನ, ಎಲೆಟ್ರಿಕ್ ವೆಹಿಕಲ್ ಹೀಗೆ ಹಲವು ಕ್ಷೇತ್ರಗಳಲ್ಲಿ ವಿದ್ಯಾರ್ಥಿಗಳಿಗೆ ತರಬೇತಿಯನ್ನು ನೀಡಲಿದೆ.

ಈ ಕುರಿತು ಮಾತನಾಡಿದ ವಿಟಿಯು ಕುಲಪತಿ ಪ್ರೊ.ಎಸ್.ವಿದ್ಯಾಶಂಕರ್, "ವಿದ್ಯಾರ್ಥಿಗಳಿಗೆ ಕೈಗಾರಿಕೆಗಳು ಬಯಸುವ ರೀತಿಯಲ್ಲಿ ತರಬೇತಿ ನೀಡುವ ಉದ್ದೇಶದಿಂದ ವಿಶ್ವಭಾರತ್ ಕಂಪನಿಯ ಜತೆಗೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಮುಂದಿನ ಮೂರು ವರ್ಷದಲ್ಲಿ ಮೂರು ಸಾವಿರ ವಿದ್ಯಾರ್ಥಿಗಳಿಗೆ ಹ್ಯಾಂಡ್ಸ್ ಆನ್ ಎಕ್ಸ್ ಪಿರಿಯನ್ಸ್ ನೀಡುತ್ತೇವೆ. 100ಕ್ಕೂ ಹೆಚ್ಚಿನ ಉದ್ಯಮ ತಜ್ಞರು ಸ್ವಯಂ ಪ್ರೇರಿತವಾಗಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಲಿದ್ದಾರೆ. ಪ್ರಮುಖವಾಗಿ ಉದ್ಯೋಗ ಭರವಸೆಯನ್ನು ಕಂಪನಿಯು ನೀಡಿದೆ." ಎಂದರು.

ಈ ವೇಳೆ ವಿಟಿಯು ಕುಲಸಚಿವರಾದ ಪ್ರೊ.ಪ್ರಸಾದ ಬಿ.ರಾಂಪುರೆ, ಪ್ರೊ.ಯು.ಜೆ.ಉಜ್ವಲ್, ಉದ್ಯಮಿ ಎಂ.ಆರ್.ನರಸಿಂಹಮೂರ್ತಿ, ವಿಟಿಯು ಬೆಂಗಳೂರು ಪ್ರಾದೇಶಿಕ ಕಚೇರಿಯ ನಿರ್ದೇಶಕರಾದ ಡಾ.ಅಜಿತ್ ಪದ್ಯಾಣ ಇತರರು ಇದ್ದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸೇವೆಯಲ್ಲಿರುವ ಅಗ್ನಿವೀರರಿಗೆ ಮಾತ್ರ ಹೊಸ ಬದಲಾವಣೆ‘ರಾಮಾಯಣ’ ಸಿನಿಮಾ ನೋಡಿ ಭಾವುಕರಾದ ಅನುಪಮ್ ಖೇರ್: ಭಾರತೀಯ ಚಿತ್ರರಂಗದ ಸರ್ವಶ್ರೇಷ್ಠ ಸಿನಿಮಾ ಎಂದ ನಟ!ಮುಂಬೈ ಅಂತರ ಶಾಲಾ ಬಾಸ್ಕೆಟ್‌ಬಾಲ್ ಧಮಾಕಾ: ಡಾನ್ ಬೊಸ್ಕೊ ಮಣಿಸಿ ಟ್ರೋಫಿ ಎತ್ತಿಹಿಡಿದ ಅಂಡೇರಿಯಾ ಎಂಪಿಎಸ್!Motorola Signature 27 Snapdragon 8 Elite Extreme Gen 6 ಮತ್ತು 200MP ಟೆಲಿಫೋಟೋ ಲೆನ್ಸ್‌ನೊಂದಿಗೆ ಅನಾವರಣಬಾಲಿವುಡ್ ಅಂಗಳದಲ್ಲಿ ಹೊಸ ಲವ್ ಸ್ಟೋರಿ: ಗೆಳತಿ ಜೊತೆ ಮನೀಶ್ ಮಲ್ಹೋತ್ರಾ ಪಾರ್ಟಿಯಲ್ಲಿ ಮಾಧುರಿ ದೀಕ್ಷಿತ್ ಮಗ!ಬ್ಯಾಂಕ್ ಲಾಕರ್’ ನಲ್ಲಿ ಇಟ್ಟಿದ್ದ ₹47 ಲಕ್ಷದ ಚಿನ್ನಾಭರಣ ನಾಪತ್ತೆ! ಮಹಿಳೆಯ ಹೋರಾಟಕ್ಕೆ ಕೊನೆಗೂ ಸಿಕ್ತು ಜಯ!ರಾಮಾಯಣ’ದಲ್ಲಿ ರಾಮನಾಗಿ ರಣಬೀರ್, ರಾವಣನಾಗಿ ಯಶ್; ಇಬ್ಬರಲ್ಲಿ ಶ್ರೀಮಂತ ನಟ ಯಾರು?ಕೈ ಕೈ ಹಿಡಿದು ಬಂದ ಐಶ್ವರ್ಯಾ ರೈ–ಅಭಿಷೇಕ್ ಜೋಡಿ; ರೊಮ್ಯಾಂಟಿಕ್ ಕ್ಷಣ ವೈರಲ್! ವಿಚ್ಛೇದನದ ವದಂತಿಗಳಿಗೆ ಬ್ರೇಕ್?ಆಸೀಸ್ ಕ್ರಿಕೆಟರ್ ಗೆ ಕೊಕೇನ್ ಶಾಕ್: ತಪ್ಪು ಒಪ್ಪಿಕೊಂಡು ನಿಷೇಧ ಪೂರ್ಣಗೊಳಿಸಿದ ಕ್ರಿಸ್ ಲಿನ್!ಧನ್ತೇರಸ್ 2026: ಚಿನ್ನ ಖರೀದಿಗೆ ಶುಭ ಮುಹೂರ್ತ ಯಾವಾಗ? ಬೆಂಗಳೂರು ಸೇರಿ ಪ್ರಮುಖ ನಗರಗಳ ಪೂಜಾ ಸಮಯ ಇಲ್ಲಿದೆ