LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ದಲಿತರಿಗೆ ನೀಡಲಾಗಿರುವ ಮೀಸಲಾತಿ ರದ್ದು ಮಾಡಿದರೆ ಬಿಜೆಪಿ ತೊರೆಯುತ್ತೇವೆ: ರಮೇಶ್ ಜಿಗಜಿಣಗಿ ಸ್ಪೋಟಕ ಹೇಳಿಕೆ!

ವಿಜಯಪುರ: ದಲಿತರಿಗೆ ನೀಡಲಾಗಿರುವ ಮೀಸಲಾತಿಯನ್ನು ಯಾರೂ ಸಹ ಕಸಿದುಕೊಳ್ಳಲು ಸಾಧ್ಯವಿಲ್ಲ. ಒಂದು ವೇಳೆ ಅಕಸ್ಮಾತ್ ಮೀಸಲಾತಿ ರದ್ದುಗೊಳಿಸಿದರೆ ನಾವು ಬಿಜೆಪಿಯೊಂದಿಗೆ ಇರುವುದಿಲ್ಲ. ಪಕ್ಷ ತೊರೆದು ಮನೆಯಲ್ಲಿ ಇರುತ್ತೇವೆ ಹೊರತು ಬಿಜೆಪಿ ಜೊತೆ ಇರುವುದಿಲ್ಲ ಎಂದು ಬಿಜೆಪಿ ಸಂಸದ ರಮೇಶ್ ಜಿಗಜಿಣಗಿ ಸ್ಪೋಟಕ ಹೇಳಿಕೆ ನೀಡಿದ್ದಾರೆ. ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ವಿಚಾರವನ್ನು ಪಕ್ಷದ ಸಭೆಯಲ್ಲೇ ಹೈಕಮಾಂಡ್‌ಗೆ ಅತ್ಯಂತ ಸ್ಪಷ್ಟವಾಗಿ ತಿಳಿಸಿದ್ದೇವೆ, ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದು ಭರವಸೆ ನೀಡಿದರು.

ಕಾಂಗ್ರೆಸ್ ಪಕ್ಷವು ದಲಿತರ ವಿಷಯದಲ್ಲಿ ಮೊದಲಿನಿಂದಲೂ ಅನ್ಯಾಯ ಮಾಡುತ್ತಾ ಬಂದಿದ್ದು, ಈಗ ಕೇವಲ ಮೊಸಳೆ ಕಣ್ಣೀರು ಸುರಿಸುತ್ತಿದೆ ಎಂದು ವಾಗ್ದಾಳಿ ನಡೆಸಿದರು. ಮುಂದಿನ ದಿನಗಳಲ್ಲಿ ದಲಿತ ಸಮುದಾಯಗಳು (ಎಡ-ಬಲ) ಕಾಂಗ್ರೆಸ್ ಬೆಂಬಲಿಸುವುದಿಲ್ಲ, ಬದಲಾಗಿ ಬಿಜೆಪಿ ಜೊತೆಯೇ ಇರಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. 2022ರಲ್ಲಿ ಬಿಜೆಪಿ ಸರ್ಕಾರವು ಪರಿಶಿಷ್ಟ ಜಾತಿ (ಎಸ್ಸಿ) ಮೀಸಲಾತಿಯನ್ನು ಶೇ. 15 ರಿಂದ ಶೇ. 17ಕ್ಕೆ ಹಾಗೂ ಪರಿಶಿಷ್ಟ ಪಂಗಡ (ಎಸ್ಟಿ) ಮೀಸಲಾತಿಯನ್ನು ಶೇ. 3 ರಿಂದ ಶೇ. 7ಕ್ಕೆ ಹೆಚ್ಚಿಸುವ ಮೂಲಕ ತನ್ನ ಬದ್ಧತೆ ಪ್ರದರ್ಶಿಸಿತ್ತು ಎಂದು ಅವರು ನೆನಪಿಸಿಕೊಂಡರು.

ಆದರೆ, ಪ್ರಸ್ತುತ ಇರುವ ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯ ಹಾಗೂ ಅವೈಜ್ಞಾನಿಕ ಧೋರಣೆಯಿಂದಾಗಿ ಹೈಕೋರ್ಟ್‌ನಲ್ಲಿ ಈ ಕಾಯ್ದೆಯನ್ನು ಸೂಕ್ತವಾಗಿ ಸಮರ್ಥಿಸಿಕೊಳ್ಳಲು ಸಾಧ್ಯವಾಗಿಲ್ಲ. ಈ ಕುರಿತು ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಎದುರಿಸುವಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲವಾದ ಕಾರಣ, ಹೈಕೋರ್ಟ್ ಮೀಸಲಾತಿ ಹೆಚ್ಚಳದ ಆದೇಶವನ್ನು ಅಸಾಂವಿಧಾನಿಕ ಎಂದು ರದ್ದುಗೊಳಿಸಿದೆ ಎಂದು ಸಂಸದ ಜಿಗಜಿಣಗಿ ಆಕ್ರೋಶ ವ್ಯಕ್ತಪಡಿಸಿದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸೇವೆಯಲ್ಲಿರುವ ಅಗ್ನಿವೀರರಿಗೆ ಮಾತ್ರ ಹೊಸ ಬದಲಾವಣೆ‘ರಾಮಾಯಣ’ ಸಿನಿಮಾ ನೋಡಿ ಭಾವುಕರಾದ ಅನುಪಮ್ ಖೇರ್: ಭಾರತೀಯ ಚಿತ್ರರಂಗದ ಸರ್ವಶ್ರೇಷ್ಠ ಸಿನಿಮಾ ಎಂದ ನಟ!ಮುಂಬೈ ಅಂತರ ಶಾಲಾ ಬಾಸ್ಕೆಟ್‌ಬಾಲ್ ಧಮಾಕಾ: ಡಾನ್ ಬೊಸ್ಕೊ ಮಣಿಸಿ ಟ್ರೋಫಿ ಎತ್ತಿಹಿಡಿದ ಅಂಡೇರಿಯಾ ಎಂಪಿಎಸ್!Motorola Signature 27 Snapdragon 8 Elite Extreme Gen 6 ಮತ್ತು 200MP ಟೆಲಿಫೋಟೋ ಲೆನ್ಸ್‌ನೊಂದಿಗೆ ಅನಾವರಣಬಾಲಿವುಡ್ ಅಂಗಳದಲ್ಲಿ ಹೊಸ ಲವ್ ಸ್ಟೋರಿ: ಗೆಳತಿ ಜೊತೆ ಮನೀಶ್ ಮಲ್ಹೋತ್ರಾ ಪಾರ್ಟಿಯಲ್ಲಿ ಮಾಧುರಿ ದೀಕ್ಷಿತ್ ಮಗ!ಬ್ಯಾಂಕ್ ಲಾಕರ್’ ನಲ್ಲಿ ಇಟ್ಟಿದ್ದ ₹47 ಲಕ್ಷದ ಚಿನ್ನಾಭರಣ ನಾಪತ್ತೆ! ಮಹಿಳೆಯ ಹೋರಾಟಕ್ಕೆ ಕೊನೆಗೂ ಸಿಕ್ತು ಜಯ!ರಾಮಾಯಣ’ದಲ್ಲಿ ರಾಮನಾಗಿ ರಣಬೀರ್, ರಾವಣನಾಗಿ ಯಶ್; ಇಬ್ಬರಲ್ಲಿ ಶ್ರೀಮಂತ ನಟ ಯಾರು?ಕೈ ಕೈ ಹಿಡಿದು ಬಂದ ಐಶ್ವರ್ಯಾ ರೈ–ಅಭಿಷೇಕ್ ಜೋಡಿ; ರೊಮ್ಯಾಂಟಿಕ್ ಕ್ಷಣ ವೈರಲ್! ವಿಚ್ಛೇದನದ ವದಂತಿಗಳಿಗೆ ಬ್ರೇಕ್?ಆಸೀಸ್ ಕ್ರಿಕೆಟರ್ ಗೆ ಕೊಕೇನ್ ಶಾಕ್: ತಪ್ಪು ಒಪ್ಪಿಕೊಂಡು ನಿಷೇಧ ಪೂರ್ಣಗೊಳಿಸಿದ ಕ್ರಿಸ್ ಲಿನ್!ಧನ್ತೇರಸ್ 2026: ಚಿನ್ನ ಖರೀದಿಗೆ ಶುಭ ಮುಹೂರ್ತ ಯಾವಾಗ? ಬೆಂಗಳೂರು ಸೇರಿ ಪ್ರಮುಖ ನಗರಗಳ ಪೂಜಾ ಸಮಯ ಇಲ್ಲಿದೆ