LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬಂಟ್ವಾಳದ ಅಬ್ದುಲ್ ರೆಹಮಾನ್ ಕೊಲೆ ಪ್ರಕರಣ: ಆರೋಪಿಗಳ ಜಾಮೀನು ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ

ದಕ್ಷಿಣ ಕನ್ನಡ : ಜಿಲ್ಲೆಯ ಬಂಟ್ವಾಳ ತಾಲೂಕಿನ ಬಡಗ ಬೆಳ್ಳೂರು ಗ್ರಾಮದಲ್ಲಿ ನಡೆದಿದ್ದ ಕುಖ್ಯಾತ ಅಬ್ದುಲ್ ರೆಹಮಾನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ವಿಚಾರಣಾ ನ್ಯಾಯಾಲಯವು ಆರೋಪಿಗಳಿಗೆ ನೀಡಿದ್ದ ಜಾಮೀನು ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆ ನೀಡಿ ಆದೇಶ ಹೊರಡಿಸಿದೆ. ಆರೋಪಿಗಳ ವಿರುದ್ಧ ಕಠಿಣವಾದ ಕರ್ನಾಟಕ ನಿಯಂತ್ರಣ ಕಾಯ್ದೆ (COCOA - ಕೋಕಾ) ಅಡಿಯಲ್ಲಿ ಮೊಕದ್ದಮೆ ದಾಖಲಾಗಿದ್ದರೂ ಸಹ ಕೆಳಹಂತದ ನ್ಯಾಯಾಲಯದಿಂದ ಜಾಮೀನು ದೊರೆತಿತ್ತು. ಈ ಆದೇಶದ ವಿರುದ್ಧ ಸಾರ್ವಜನಿಕವಾಗಿ ಮತ್ತು ವಿವಿಧ ವಲಯಗಳಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ, ರಾಜ್ಯ ಸರ್ಕಾರವು ತಕ್ಷಣವೇ ಹೈಕೋರ್ಟ್ ಮೆಟ್ಟಿಲೇರಿ ಜಾಮೀನು ರದ್ದುಪಡಿಸುವಂತೆ ಕೋರಿ ಅರ್ಜಿ ಸಲ್ಲಿಸಿತ್ತು.

ಈ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ವಿಶ್ವಾಜಿತ ಶೆಟ್ಟಿ ಅವರ ನೇತೃತ್ವದ ನ್ಯಾಯಪೀಠವು, ಪ್ರಕರಣದ ಪ್ರಮುಖ ಆರೋಪಿಗಳಾದ ಭರತ್ ಕುಮ್ಡೆಲು, ಪ್ರದೀಪ್, ರಂಜಿತ್, ಶಿವಪ್ರಸಾದ್, ಅಭಿನ್ ರೈ, ಸಾಹಿತ್, ಸಚಿನ್ ಹಾಗೂ ತೇಜಕ್ಷ ಅವರಿಗೆ ಮೈಸೂರಿನ ಕೋಕಾ ವಿಶೇಷ ನ್ಯಾಯಾಲಯ ನೀಡಿದ್ದ ಜಾಮೀನು ಆದೇಶಕ್ಕೆ ತಡೆಯಾಜ್ಞೆ ನೀಡಿದೆ. ಸರ್ಕಾರದ ವಾದವನ್ನು ಪರಿಗಣಿಸಿರುವ ನ್ಯಾಯಾಲಯವು, ಆರೋಪಿಗಳಿಗೆ ನೋಟಿಸ್ ಜಾರಿಗೊಳಿಸಿದ್ದು, ಮುಂದಿನ ವಿಚಾರಣೆಯನ್ನು ಮುಂದೂಡಿದೆ. ಮೈಸೂರಿನ ಕೋಕಾ ನ್ಯಾಯಾಲಯವು ಈ ಹಿಂದೆ ಇವರಿಗೆ ಜಾಮೀನು ಮಂಜೂರು ಮಾಡಿತ್ತು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸೇವೆಯಲ್ಲಿರುವ ಅಗ್ನಿವೀರರಿಗೆ ಮಾತ್ರ ಹೊಸ ಬದಲಾವಣೆ‘ರಾಮಾಯಣ’ ಸಿನಿಮಾ ನೋಡಿ ಭಾವುಕರಾದ ಅನುಪಮ್ ಖೇರ್: ಭಾರತೀಯ ಚಿತ್ರರಂಗದ ಸರ್ವಶ್ರೇಷ್ಠ ಸಿನಿಮಾ ಎಂದ ನಟ!ಮುಂಬೈ ಅಂತರ ಶಾಲಾ ಬಾಸ್ಕೆಟ್‌ಬಾಲ್ ಧಮಾಕಾ: ಡಾನ್ ಬೊಸ್ಕೊ ಮಣಿಸಿ ಟ್ರೋಫಿ ಎತ್ತಿಹಿಡಿದ ಅಂಡೇರಿಯಾ ಎಂಪಿಎಸ್!Motorola Signature 27 Snapdragon 8 Elite Extreme Gen 6 ಮತ್ತು 200MP ಟೆಲಿಫೋಟೋ ಲೆನ್ಸ್‌ನೊಂದಿಗೆ ಅನಾವರಣಬಾಲಿವುಡ್ ಅಂಗಳದಲ್ಲಿ ಹೊಸ ಲವ್ ಸ್ಟೋರಿ: ಗೆಳತಿ ಜೊತೆ ಮನೀಶ್ ಮಲ್ಹೋತ್ರಾ ಪಾರ್ಟಿಯಲ್ಲಿ ಮಾಧುರಿ ದೀಕ್ಷಿತ್ ಮಗ!ಬ್ಯಾಂಕ್ ಲಾಕರ್’ ನಲ್ಲಿ ಇಟ್ಟಿದ್ದ ₹47 ಲಕ್ಷದ ಚಿನ್ನಾಭರಣ ನಾಪತ್ತೆ! ಮಹಿಳೆಯ ಹೋರಾಟಕ್ಕೆ ಕೊನೆಗೂ ಸಿಕ್ತು ಜಯ!ರಾಮಾಯಣ’ದಲ್ಲಿ ರಾಮನಾಗಿ ರಣಬೀರ್, ರಾವಣನಾಗಿ ಯಶ್; ಇಬ್ಬರಲ್ಲಿ ಶ್ರೀಮಂತ ನಟ ಯಾರು?ಕೈ ಕೈ ಹಿಡಿದು ಬಂದ ಐಶ್ವರ್ಯಾ ರೈ–ಅಭಿಷೇಕ್ ಜೋಡಿ; ರೊಮ್ಯಾಂಟಿಕ್ ಕ್ಷಣ ವೈರಲ್! ವಿಚ್ಛೇದನದ ವದಂತಿಗಳಿಗೆ ಬ್ರೇಕ್?ಆಸೀಸ್ ಕ್ರಿಕೆಟರ್ ಗೆ ಕೊಕೇನ್ ಶಾಕ್: ತಪ್ಪು ಒಪ್ಪಿಕೊಂಡು ನಿಷೇಧ ಪೂರ್ಣಗೊಳಿಸಿದ ಕ್ರಿಸ್ ಲಿನ್!ಧನ್ತೇರಸ್ 2026: ಚಿನ್ನ ಖರೀದಿಗೆ ಶುಭ ಮುಹೂರ್ತ ಯಾವಾಗ? ಬೆಂಗಳೂರು ಸೇರಿ ಪ್ರಮುಖ ನಗರಗಳ ಪೂಜಾ ಸಮಯ ಇಲ್ಲಿದೆ