LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಆಡಳಿತವನ್ನು ಜನರ ಮನೆಬಾಗಿಲಿಗೆ ಕೊಂಡೊಯ್ಯುವುದೇ ಸರ್ಕಾರದ ಗುರಿ: ಶಾಸಕ ಬೇಳೂರು ಗೋಪಾಲಕೃಷ್ಣ

ಆನಂದಪುರ: "ಜನರು ತಮ್ಮ ಕೆಲಸ-ಕಾರ್ಯಗಳಿಗಾಗಿ ಸರ್ಕಾರಿ ಕಚೇರಿಗಳು ಹಾಗೂ ಅಧಿಕಾರಿಗಳ ಹಿಂದೆ ಅಲೆಯುವುದನ್ನು ತಪ್ಪಿಸಿ, ಆಡಳಿತವನ್ನು ನೇರವಾಗಿ ಜನರ ಮನೆಬಾಗಿಲಿಗೇ ತಲುಪಿಸುವುದೇ ಸರ್ಕಾರದ ಮುಖ್ಯ ಉದ್ದೇಶವಾಗಿದೆ," ಎಂದು ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ತಿಳಿಸಿದರು.

ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಆನಂದಪುರ ಹೋಬಳಿ ಕೇಂದ್ರದಲ್ಲಿ ತಾಲೂಕು ಮಟ್ಟದ ‘ಪ್ರಜಾಸೇವಾ ಆಂದೋಲನಾ ಸಭೆ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

news_1792238680_1_479.webp

ಜನರ ಬಳಿಗೇ ಬಂದ ಜಿಲ್ಲಾ-ತಾಲೂಕು ಆಡಳಿತ

ತಾವೊಬ್ಬ ಮುಖ್ಯಮಂತ್ರಿಯಲ್ಲ, ರಾಜ್ಯದ ಜನಸೇವಕ ಎಂದು ಸ್ವತಃ ಮುಖ್ಯಮಂತ್ರಿಗಳೇ ಹೇಳಿದ್ದಾರೆ. ಅವರ ಆಶಯದಂತೆ ಆಡಳಿತ ಯಂತ್ರವನ್ನು ಜನರ ಬಳಿಗೆ ತರಲಾಗುತ್ತಿದೆ. ಇಂದು ಆನಂದಪುರದಲ್ಲಿ ಆರಂಭವಾಗಿರುವ ಈ ಪ್ರಜಾಸೇವಾ ಆಂದೋಲನವು ಮುಂದೆ ಕಸಬಾ, ಆವಿನಹಳ್ಳಿ ಹಾಗೂ ಕೋಗರ ಹೋಬಳಿಗಳಲ್ಲೂ ಮುಂದುವರಿಯಲಿದೆ ಎಂದರು.

news_1792237846_0_343.webp

ಜನರು ಕಚೇರಿಗಳಿಗೆ ಹೋದಾಗ ಅಧಿಕಾರಿಗಳು ಸಿಗದೆ ಅಲೆದಾಡುವ ಪರಿಸ್ಥಿತಿ ಇರಬಾರದು ಎಂಬ ಕಾರಣಕ್ಕೇ ಜಿಲ್ಲಾಧಿಕಾರಿ, ಸಿಇಒ, ಉಪವಿಭಾಗಾಧಿಕಾರಿ (ಎಸಿ) ಹಾಗೂ ತಹಶೀಲ್ದಾರ್ ಸೇರಿದಂತೆ ಇಡೀ ಆಡಳಿತವೇ ಇಲ್ಲಿಗೆ ಬಂದಿದೆ. ಸಾಗರದಲ್ಲಿ ಇತ್ತೀಚೆಗೆ ಸ್ವೀಕರಿಸಲಾದ 450 ಅರ್ಜಿಗಳ ವಿಲೇವಾರಿ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಇಂದಿನ ಸಭೆಯಲ್ಲಿ ಬರುವ ಪ್ರತಿಯೊಂದು ಅಹವಾಲನ್ನು ಅಧಿಕಾರಿಗಳು ಶೀಘ್ರವಾಗಿ ಬಗೆಹರಿಸಲಿದ್ದಾರೆ ಎಂದು ಭರವಸೆ ನೀಡಿದರು.

ಮಲೆನಾಡಿನಲ್ಲಿ ಬರಗಾಲ: ಅರಣ್ಯ ಸಂರಕ್ಷಣೆಗೆ ಕರೆ

ಮಲೆನಾಡು ಭಾಗದಲ್ಲಿ ಎದುರಾಗಿರುವ ಪರಿಸರ ಅಸಮತೋಲನದ ಬಗ್ಗೆ ಕಳವಳ ವ್ಯಕ್ತಪಡಿಸಿದ ಶಾಸಕರು, "ಕಾಗೋಡು ತಿಮ್ಮಪ್ಪನವರ ಕಾಲದಲ್ಲಿ ಸುಮಾರು 30 ವರ್ಷಗಳ ಹಿಂದೆ ಬರಗಾಲ ಘೋಷಣೆಯಾಗಿದ್ದನ್ನು ಕಂಡಿದ್ದೆವು. ಆದರೆ ಮಲೆನಾಡಿನ ಇತಿಹಾಸದಲ್ಲೇ ಈ ಬಾರಿ ಮತ್ತೆ ಬರಗಾಲ ಘೋಷಣೆಯಾಗುವಂತಹ ದುಸ್ಥಿತಿ ಬಂದಿರುವುದು ಅತ್ಯಂತ ನೋವಿನ ಸಂಗತಿ. ಜನರು ಮರಗಿಡಗಳನ್ನು ಕಡಿದು ಜಮೀನು ಮಾಡುವುದನ್ನು ಬಿಟ್ಟು ಪರಿಸರ ಬೆಳೆಸುವುದಕ್ಕೆ ಆದ್ಯತೆ ನೀಡಬೇಕು. ಈ ಹಿಂದೆ ಬಂಗಾರಪ್ಪನವರು ಹೇಳುತ್ತಿದ್ದಂತೆ ಮರಗಳಿಗೆ ‘ಉಡಿದಾರ’ ಕೊರೆದು ಒಣಗಿಸಿ ತೆಗೆಯುವ ಪರಿಪಾಠ ನಿಲ್ಲಬೇಕು," ಎಂದು ಎಚ್ಚರಿಸಿದರು.

news_1792238679_0_232.webp

ಬಗರ್ ಹುಕುಂ ಜಮೀನಿನಲ್ಲಿ ಕಾಡು ಬೆಳೆಸಲು ಸಲಹೆ

"ಬಗರ್ ಹುಕುಂ ಯೋಜನೆಯಡಿ ನಾಲ್ಕು ಎಕರೆ ಸಾಗುವಳಿ ಭೂಮಿ ಮಂಜೂರಾದಲ್ಲಿ, ಅದರಲ್ಲಿ ಕನಿಷ್ಠ ಅರ್ಧ ಎಕರೆಯಷ್ಟಾದರೂ ಕಾಡು ಬೆಳೆಸಿ ರಕ್ಷಿಸಬೇಕೆಂಬ ನಿಯಮ ಜಾರಿಗೆ ತರುವಂತೆ ಈ ಹಿಂದೆ ವಿಧಾನಸಭೆಯಲ್ಲಿ ಪ್ರಸ್ತಾಪಿಸಿ ವಾದ ಮಂಡಿಸಿದ್ದೆ. 20-25 ಸಾವಿರ ಫಲಾನುಭವಿಗಳು ತಲಾ ಅರ್ಧ ಎಕರೆ ಕಾಡು ಉಳಿಸಿಕೊಂಡಿದ್ದರೆ ಸಾವಿರಾರು ಎಕರೆ ಅರಣ್ಯ ಸಂಪತ್ತು ಸೃಷ್ಟಿಯಾಗುತ್ತಿತ್ತು. ಆದರೆ ಈ ಬಗ್ಗೆ ಸರ್ಕಾರ ಕಟ್ಟುನಿಟ್ಟಿನ ಆದೇಶ ಮಾಡದಿರುವುದು ಬೇಸರದ ಸಂಗತಿ," ಎಂದು ತಮ್ಮ ಕನಸನ್ನು ಹಂಚಿಕೊಂಡರು.

ಕಸ್ತೂರಿ ರಂಗನ್ ವರದಿ ಹಾಗೂ ಅರಣ್ಯ ಕಾಯ್ದೆ ಆತಂಕ

"ಕಸ್ತೂರಿ ರಂಗನ್ ವರದಿಯಿಂದಾಗಿ ನಮ್ಮ ಭಾಗದ 447 ಗ್ರಾಮಗಳ ರೈತರಲ್ಲಿ ಆತಂಕ ಮನೆಮಾಡಿದೆ. ಇದರೊಂದಿಗೆ ಅರಣ್ಯ ಕಾಯ್ದೆಯ ಕಠಿಣ ನಿಯಮಗಳಿಂದಲೂ ಜನರು ಸಮಸ್ಯೆ ಎದುರಿಸುತ್ತಿದ್ದಾರೆ. ಇಂತಹ ಪ್ರತಿಯೊಂದು ಸಮಸ್ಯೆಯನ್ನು ಸರ್ಕಾರದ ಮಟ್ಟದಲ್ಲಿ ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಮುಂದಿನ ದಿನಗಳಲ್ಲಿ ಗ್ರಾಮ ಪಂಚಾಯತ್ ಮಟ್ಟದಲ್ಲೂ ಅಧಿಕಾರಿಗಳು ಗ್ರಾಮಗಳಿಗೆ ಭೇಟಿ ನೀಡಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಲಿದ್ದಾರೆ. ಸಾರ್ವಜನಿಕರು ಮತ್ತು ರೈತರು ಯಾವುದೇ ಹಿಂಜರಿಕೆಯಿಲ್ಲದೆ ತಮ್ಮ ಅಹವಾಲುಗಳನ್ನು ಸಲ್ಲಿಸಿ ಪರಿಹಾರ ಪಡೆದುಕೊಳ್ಳಬೇಕು," ಎಂದು ಕರೆ ನೀಡಿದರು.

news_1792237846_1_696.webp

ಅಧಿಕಾರಿಗಳು ಉಪಸ್ಥಿತಿ

ಈ ವೇಳೆ ಶಿವಮೊಗ್ಗ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ,ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಸಾಗರ ಉಪ ವಿಭಾಗಾಧಿಕಾರಿ ವೀರೇಶ್ ಕುಮಾರ್, ಜಿಲ್ಲಾಧಿಕಾರಿಗಳ ಕಚೇರಿಯ ಯೋಜನಾ ನಿರ್ದೇಶಕರಾದಂತ ನಂದಿನಿ, ಸಾಗರ ಎಎಸ್ಪಿ ಡಾ.ಬೆನಕ ಪ್ರಸಾದ್, ತಹಶೀಲ್ದಾರ್ ಡಾ.ಪ್ರತಿಭಾ.ಆರ್, ಕಾರ್ಯನಿರ್ವಾಧಿಕಾರಿ ಮೌನೇಶ್, ಸಾಗರ ತಾಲ್ಲೂಕು ಸರ್ಕಾರಿ ನೌಕರರ ಸಂಘ ಅಧ್ಯಕ್ಷ ಸಂತೋಷ್ ಕುಮಾರ್.ಎನ್ ಹಾಗೂ ಜಿಲ್ಲಾ ಹಾಗೂ ತಾಲ್ಲೂಕು, ಹೋಬಳಿ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು..

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಕ್ಲ್ಯಾಂಡ್ ಆಯ್ತು, ಈಗ ವೆಲ್ಲಿಂಗ್ಟನ್‌ನಲ್ಲೂ ವರುಣನದ್ದೇ ಆರ್ಭಟ: ಎರಡನೇ ಏಕದಿನ ಪಂದ್ಯಕ್ಕೆ ಕಂಟಕವಾದ ಹವಾಮಾನ!ಸೇವೆಯಲ್ಲಿರುವ ಅಗ್ನಿವೀರರಿಗೆ ಮಾತ್ರ ಹೊಸ ಬದಲಾವಣೆ‘ರಾಮಾಯಣ’ ಸಿನಿಮಾ ನೋಡಿ ಭಾವುಕರಾದ ಅನುಪಮ್ ಖೇರ್: ಭಾರತೀಯ ಚಿತ್ರರಂಗದ ಸರ್ವಶ್ರೇಷ್ಠ ಸಿನಿಮಾ ಎಂದ ನಟ!ಮುಂಬೈ ಅಂತರ ಶಾಲಾ ಬಾಸ್ಕೆಟ್‌ಬಾಲ್ ಧಮಾಕಾ: ಡಾನ್ ಬೊಸ್ಕೊ ಮಣಿಸಿ ಟ್ರೋಫಿ ಎತ್ತಿಹಿಡಿದ ಅಂಡೇರಿಯಾ ಎಂಪಿಎಸ್!Motorola Signature 27 Snapdragon 8 Elite Extreme Gen 6 ಮತ್ತು 200MP ಟೆಲಿಫೋಟೋ ಲೆನ್ಸ್‌ನೊಂದಿಗೆ ಅನಾವರಣಬಾಲಿವುಡ್ ಅಂಗಳದಲ್ಲಿ ಹೊಸ ಲವ್ ಸ್ಟೋರಿ: ಗೆಳತಿ ಜೊತೆ ಮನೀಶ್ ಮಲ್ಹೋತ್ರಾ ಪಾರ್ಟಿಯಲ್ಲಿ ಮಾಧುರಿ ದೀಕ್ಷಿತ್ ಮಗ!ಬ್ಯಾಂಕ್ ಲಾಕರ್’ ನಲ್ಲಿ ಇಟ್ಟಿದ್ದ ₹47 ಲಕ್ಷದ ಚಿನ್ನಾಭರಣ ನಾಪತ್ತೆ! ಮಹಿಳೆಯ ಹೋರಾಟಕ್ಕೆ ಕೊನೆಗೂ ಸಿಕ್ತು ಜಯ!ರಾಮಾಯಣ’ದಲ್ಲಿ ರಾಮನಾಗಿ ರಣಬೀರ್, ರಾವಣನಾಗಿ ಯಶ್; ಇಬ್ಬರಲ್ಲಿ ಶ್ರೀಮಂತ ನಟ ಯಾರು?ಕೈ ಕೈ ಹಿಡಿದು ಬಂದ ಐಶ್ವರ್ಯಾ ರೈ–ಅಭಿಷೇಕ್ ಜೋಡಿ; ರೊಮ್ಯಾಂಟಿಕ್ ಕ್ಷಣ ವೈರಲ್! ವಿಚ್ಛೇದನದ ವದಂತಿಗಳಿಗೆ ಬ್ರೇಕ್?ಆಸೀಸ್ ಕ್ರಿಕೆಟರ್ ಗೆ ಕೊಕೇನ್ ಶಾಕ್: ತಪ್ಪು ಒಪ್ಪಿಕೊಂಡು ನಿಷೇಧ ಪೂರ್ಣಗೊಳಿಸಿದ ಕ್ರಿಸ್ ಲಿನ್!