LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬೆಂಗಳೂರಿನ ಮೆಜೆಸ್ಟಿಕ್‌ನಲ್ಲಿ ಸಿಲಿಂಡರ್ ಸ್ಫೋಟ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಭಾನುವಾರ ಎರಡು ಪ್ರತ್ಯೇಕ ಅಗ್ನಿ ದುರಂತಗಳು ಸಂಭವಿಸಿದ್ದು, ಜನರಲ್ಲಿ ತೀವ್ರ ಆತಂಕ ಮೂಡಿಸಿವೆ. ನಗರದ ಹೃದಯಭಾಗ ಮೆಜೆಸ್ಟಿಕ್‌ನಲ್ಲಿ ಸಿಲಿಂಡರ್ ಸ್ಫೋಟಗೊಂಡಿದ್ದರೆ, ಇತ್ತ ಕನಕಪುರ ಸಮೀಪದ ನೈಸ್ ರಸ್ತೆಯಲ್ಲಿ ಡೀಸೆಲ್ ಹೊತ್ತೊಯ್ಯುತ್ತಿದ್ದ ಟ್ಯಾಂಕರ್ ಪಲ್ಟಿಯಾಗಿ ಬೆಂಕಿಗಾಹುತಿಯಾಗಿದೆ. ಅದೃಷ್ಟವಶಾತ್ ಎರಡೂ ಘಟನೆಗಳಲ್ಲಿ ಯಾವುದೇ ಜೀವಹಾನಿ ಸಂಭವಿಸಿಲ್ಲ.

ಮೆಜೆಸ್ಟಿಕ್‌ನಲ್ಲಿ ಏಕಾಏಕಿ ಸಿಲಿಂಡರ್ ಬ್ಲಾಸ್ಟ್: ಜನರ ಆತಂಕ

ವಾಣಿಜ್ಯ ಚಟುವಟಿಕೆಗಳಿಂದ ಸದಾ ಗಿಜಿಗುಡುವ ಮೆಜೆಸ್ಟಿಕ್‌ನ ಅಮರ ಹೋಟೆಲ್ ಪಕ್ಕದಲ್ಲಿ ಭಾನುವಾರ ಹಠಾತ್ತನೆ ಸಿಲಿಂಡರ್ ಸ್ಫೋಟಗೊಂಡಿದೆ. ಪ್ರಚಂಡ ಶಬ್ದದೊಂದಿಗೆ ಸಂಭವಿಸಿದ ಸ್ಫೋಟದಿಂದ ಸುತ್ತಮುತ್ತಲಿನ ವ್ಯಾಪಾರಿಗಳು ಹಾಗೂ ಸಾರ್ವಜನಿಕರು ಬೆಚ್ಚಿಬಿದ್ದಿದ್ದು, ಕೆಲಕಾಲ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ, ಕ್ಷಿಪ್ರ ಕಾರ್ಯಾಚರಣೆ ನಡೆಸಿ ಬೆಂಕಿ ವ್ಯಾಪಿಸುವುದನ್ನು ತಡೆದು ಪರಿಸ್ಥಿತಿ ನಿಯಂತ್ರಣಕ್ಕೆ ತಂದಿದ್ದಾರೆ. ಸಕಾಲಿಕ ಕಾರ್ಯಾಚರಣೆಯಿಂದಾಗಿ ಸಂಭವಿಸಬಹುದಾಗಿದ್ದ ಭಾರೀ ಅನಾಹುತ ಹಾಗೂ ಪ್ರಾಣಾಪಾಯ ತಪ್ಪಿದೆ.

ನೈಸ್ ರಸ್ತೆಯಲ್ಲಿ ಡೀಸೆಲ್ ಟ್ಯಾಂಕರ್ ಪಲ್ಟಿ: ಸಂಪೂರ್ಣ ಸುಟ್ಟು ಭಸ್ಮ, ಟ್ರಾಫಿಕ್ ಜಾಮ್

ಮತ್ತೊಂದೆಡೆ, ಕನಕಪುರ ರಸ್ತೆಯಿಂದ ಅಂಜನಾಪುರದ ಕಡೆಗೆ ಚಲಿಸುತ್ತಿದ್ದ ಡೀಸೆಲ್ ಟ್ಯಾಂಕರ್ ನಿಯಂತ್ರಣ ತಪ್ಪಿ ನೈಸ್ ರಸ್ತೆಯಲ್ಲಿ ಪಲ್ಟಿಯಾಗಿದೆ. ಪರಿಣಾಮವಾಗಿ ಕ್ಷಣಮಾತ್ರದಲ್ಲಿ ಟ್ಯಾಂಕರ್‌ಗೆ ಬೆಂಕಿ ಹೊತ್ತಿಕೊಂಡಿದ್ದು, ಧಗಧಗನೆ ಹೊತ್ತಿ ಉರಿದ ವಾಹನ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ರಸ್ತೆಯುದ್ದಕ್ಕೂ ದಟ್ಟ ಕಪ್ಪು ಹೊಗೆ ಆವರಿಸಿದ್ದರಿಂದ ವಾಹನ ಸವಾರರು ಕಂಗಾಲಾಗಿದ್ದರು.

ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ದೌಡಾಯಿಸಿದ ತಲಘಟ್ಟಪುರ ಠಾಣಾ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ಸಂಪೂರ್ಣವಾಗಿ ನಂದಿಸಿದ್ದಾರೆ. ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ವಾಹನ ಸಂಚಾರ ಅಸ್ತವ್ಯಸ್ತ:

ಟ್ಯಾಂಕರ್‌ಗೆ ಬೆಂಕಿ ಬಿದ್ದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಒಂದು ಬದಿಯ ರಸ್ತೆ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಯಿತು. ಇದರಿಂದಾಗಿ ನೈಸ್ ರಸ್ತೆಯಲ್ಲಿ ವಾಹನಗಳು ಸಾಲುಗಟ್ಟಿ ನಿಂತು ಭಾರೀ ಟ್ರಾಫಿಕ್ ಜಾಮ್ ಉಂಟಾಗಿತ್ತು. ಅಗ್ನಿಶಾಮಕ ಕಾರ್ಯಾಚರಣೆ ಮುಗಿದ ಬಳಿಕ ಪೊಲೀಸರು ವಾಹನ ಸಂಚಾರವನ್ನು ಸುಗಮಗೊಳಿಸಿದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಕ್ಲ್ಯಾಂಡ್ ಆಯ್ತು, ಈಗ ವೆಲ್ಲಿಂಗ್ಟನ್‌ನಲ್ಲೂ ವರುಣನದ್ದೇ ಆರ್ಭಟ: ಎರಡನೇ ಏಕದಿನ ಪಂದ್ಯಕ್ಕೆ ಕಂಟಕವಾದ ಹವಾಮಾನ!ಸೇವೆಯಲ್ಲಿರುವ ಅಗ್ನಿವೀರರಿಗೆ ಮಾತ್ರ ಹೊಸ ಬದಲಾವಣೆ‘ರಾಮಾಯಣ’ ಸಿನಿಮಾ ನೋಡಿ ಭಾವುಕರಾದ ಅನುಪಮ್ ಖೇರ್: ಭಾರತೀಯ ಚಿತ್ರರಂಗದ ಸರ್ವಶ್ರೇಷ್ಠ ಸಿನಿಮಾ ಎಂದ ನಟ!ಮುಂಬೈ ಅಂತರ ಶಾಲಾ ಬಾಸ್ಕೆಟ್‌ಬಾಲ್ ಧಮಾಕಾ: ಡಾನ್ ಬೊಸ್ಕೊ ಮಣಿಸಿ ಟ್ರೋಫಿ ಎತ್ತಿಹಿಡಿದ ಅಂಡೇರಿಯಾ ಎಂಪಿಎಸ್!Motorola Signature 27 Snapdragon 8 Elite Extreme Gen 6 ಮತ್ತು 200MP ಟೆಲಿಫೋಟೋ ಲೆನ್ಸ್‌ನೊಂದಿಗೆ ಅನಾವರಣಬಾಲಿವುಡ್ ಅಂಗಳದಲ್ಲಿ ಹೊಸ ಲವ್ ಸ್ಟೋರಿ: ಗೆಳತಿ ಜೊತೆ ಮನೀಶ್ ಮಲ್ಹೋತ್ರಾ ಪಾರ್ಟಿಯಲ್ಲಿ ಮಾಧುರಿ ದೀಕ್ಷಿತ್ ಮಗ!ಬ್ಯಾಂಕ್ ಲಾಕರ್’ ನಲ್ಲಿ ಇಟ್ಟಿದ್ದ ₹47 ಲಕ್ಷದ ಚಿನ್ನಾಭರಣ ನಾಪತ್ತೆ! ಮಹಿಳೆಯ ಹೋರಾಟಕ್ಕೆ ಕೊನೆಗೂ ಸಿಕ್ತು ಜಯ!ರಾಮಾಯಣ’ದಲ್ಲಿ ರಾಮನಾಗಿ ರಣಬೀರ್, ರಾವಣನಾಗಿ ಯಶ್; ಇಬ್ಬರಲ್ಲಿ ಶ್ರೀಮಂತ ನಟ ಯಾರು?ಕೈ ಕೈ ಹಿಡಿದು ಬಂದ ಐಶ್ವರ್ಯಾ ರೈ–ಅಭಿಷೇಕ್ ಜೋಡಿ; ರೊಮ್ಯಾಂಟಿಕ್ ಕ್ಷಣ ವೈರಲ್! ವಿಚ್ಛೇದನದ ವದಂತಿಗಳಿಗೆ ಬ್ರೇಕ್?ಆಸೀಸ್ ಕ್ರಿಕೆಟರ್ ಗೆ ಕೊಕೇನ್ ಶಾಕ್: ತಪ್ಪು ಒಪ್ಪಿಕೊಂಡು ನಿಷೇಧ ಪೂರ್ಣಗೊಳಿಸಿದ ಕ್ರಿಸ್ ಲಿನ್!