LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕ್ಯಾನ್ಸರ್ ರೋಗದ ಔಷಧಿಗಳ ಬೆಲೆ ಇಳಿಸಿದ ಕೇಂದ್ರ ಸರ್ಕಾರಕ್ಕೆ ರಾಜಕುಮಾರ ಪಾಟೀಲ್ ತೇಲ್ಕೂರ್ ಅಭಿನಂದನೆ

ಕಲಬುರಗಿ: ಕ್ಯಾನ್ಸರ್ನಂತಹ ಮಾರಕ ರೋಗದಿಂದ ಬಳಲುತ್ತಿರುವ ಬಡ ಮತ್ತು ಮಧ್ಯಮ ವರ್ಗದ ರೋಗಿಗಳಿಗೆ ದೊಡ್ಡ ರಿಲೀಫ್ ನೀಡಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ ಎಂದು ಸೇಡಂ ಮತಕ್ಷೇತ್ರದ ಮಾಜಿ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ್ ಹೇಳಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ, ರಾಷ್ಟ್ರೀಯ ಔಷಧ ಬೆಲೆ ನಿಯಂತ್ರಣ ಪ್ರಾಧಿಕಾರ (NPPA) ಮೂಲಕ 137 ಕ್ಯಾನ್ಸರ್ ಔಷಧಿಗಳ ಮೇಲಿನ ವ್ಯಾಪಾರ ಲಾಭಾಂಶವನ್ನು ಶೇ.30ಕ್ಕೆ ಮಿತಿಗೊಳಿಸಿ, ಔಷಧಿಗಳ ಬೆಲೆಯನ್ನು ಶೇ.70ರವರೆಗೆ ಇಳಿಕೆ ಮಾಡಿದೆ. ನವೆಂಬರ್ 9, 2026 ರಿಂದ ಹೊಸ ಪರಿಷ್ಕೃತ ದರಗಳು ಜಾರಿಗೆ ಬರಲಿವೆ.

"ಕ್ಯಾನ್ಸರ್ ಚಿಕಿತ್ಸೆ ಎಂದರೆ ಲಕ್ಷಾಂತರ ರೂಪಾಯಿ ಖರ್ಚು. Pembrolizumab, Bevacizumab, Osimertinib ನಂತಹ ದುಬಾರಿ ಇಮ್ಯುನೋಥೆರಪಿ ಔಷಧಿಗಳು ಬಡವರ ಕೈಗೆಟುಕುತ್ತಿರಲಿಲ್ಲ. ಈಗ ಮೋದಿ ಸರ್ಕಾರದ ಈ ಕ್ರಾಂತಿಕಾರಿ ಮತ್ತು ಮಾನವೀಯ ನಿರ್ಧಾರದಿಂದ ಕೋಟ್ಯಂತರ ರೋಗಿಗಳಿಗೆ ಜೀವದಾನ ಸಿಕ್ಕಂತಾಗಿದೆ. ಇದು ಕೇವಲ ಬೆಲೆ ಇಳಿಕೆಯಲ್ಲ, ಬಡವರ ಬದುಕಿನ ಜೊತೆಗಿನ ಬದ್ಧತೆ" ಎಂದು ತೇಲ್ಕೂರ್ ಬಣ್ಣಿಸಿದ್ದಾರೆ.

"ಕಾಂಗ್ರೆಸ್ ಆಡಳಿತದಲ್ಲಿ ಔಷಧ ಕಂಪನಿಗಳು ಮನಬಂದಂತೆ ಬೆಲೆ ನಿಗದಿ ಮಾಡಿ ಲೂಟಿ ಮಾಡುತ್ತಿದ್ದವು. ಆದರೆ ಮೋದಿಜೀ ಅವರು ಜನೌಷಧಿ ಕೇಂದ್ರ, ಆಯುಷ್ಮಾನ್ ಭಾರತ್ ಮೂಲಕ ಬಡವರ ಆರೋಗ್ಯಕ್ಕೆ ಭದ್ರತೆ ನೀಡಿದ್ದಾರೆ. ಈಗ ಕ್ಯಾನ್ಸರ್ ಔಷಧಿಗಳ ಬೆಲೆ ಇಳಿಕೆ ಮೂಲಕ ಮತ್ತೊಮ್ಮೆ ಬಡವರ ಪರ ಸರ್ಕಾರ ಎಂಬುದನ್ನು ಸಾಬೀತುಪಡಿಸಿದ್ದಾರೆ. ಕಾಂಗ್ರೆಸ್ ಅವಧಿಯಲ್ಲಿ ಲೂಟಿ ಇತ್ತು, ಮೋದಿ ಅವಧಿಯಲ್ಲಿ ರಿಯಾಯಿತಿ ಸಿಗುತ್ತಿದೆ" ಎಂದು ಹೇಳಿದರು.

ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವರಿಗೆ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸೇಡಂ ಕ್ಷೇತ್ರದ ಜನತೆಯ ಪರವಾಗಿ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುವುದಾಗಿ ತೇಲ್ಕೂರ್ ತಿಳಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಕ್ಲ್ಯಾಂಡ್ ಆಯ್ತು, ಈಗ ವೆಲ್ಲಿಂಗ್ಟನ್‌ನಲ್ಲೂ ವರುಣನದ್ದೇ ಆರ್ಭಟ: ಎರಡನೇ ಏಕದಿನ ಪಂದ್ಯಕ್ಕೆ ಕಂಟಕವಾದ ಹವಾಮಾನ!ಸೇವೆಯಲ್ಲಿರುವ ಅಗ್ನಿವೀರರಿಗೆ ಮಾತ್ರ ಹೊಸ ಬದಲಾವಣೆ‘ರಾಮಾಯಣ’ ಸಿನಿಮಾ ನೋಡಿ ಭಾವುಕರಾದ ಅನುಪಮ್ ಖೇರ್: ಭಾರತೀಯ ಚಿತ್ರರಂಗದ ಸರ್ವಶ್ರೇಷ್ಠ ಸಿನಿಮಾ ಎಂದ ನಟ!ಮುಂಬೈ ಅಂತರ ಶಾಲಾ ಬಾಸ್ಕೆಟ್‌ಬಾಲ್ ಧಮಾಕಾ: ಡಾನ್ ಬೊಸ್ಕೊ ಮಣಿಸಿ ಟ್ರೋಫಿ ಎತ್ತಿಹಿಡಿದ ಅಂಡೇರಿಯಾ ಎಂಪಿಎಸ್!Motorola Signature 27 Snapdragon 8 Elite Extreme Gen 6 ಮತ್ತು 200MP ಟೆಲಿಫೋಟೋ ಲೆನ್ಸ್‌ನೊಂದಿಗೆ ಅನಾವರಣಬಾಲಿವುಡ್ ಅಂಗಳದಲ್ಲಿ ಹೊಸ ಲವ್ ಸ್ಟೋರಿ: ಗೆಳತಿ ಜೊತೆ ಮನೀಶ್ ಮಲ್ಹೋತ್ರಾ ಪಾರ್ಟಿಯಲ್ಲಿ ಮಾಧುರಿ ದೀಕ್ಷಿತ್ ಮಗ!ಬ್ಯಾಂಕ್ ಲಾಕರ್’ ನಲ್ಲಿ ಇಟ್ಟಿದ್ದ ₹47 ಲಕ್ಷದ ಚಿನ್ನಾಭರಣ ನಾಪತ್ತೆ! ಮಹಿಳೆಯ ಹೋರಾಟಕ್ಕೆ ಕೊನೆಗೂ ಸಿಕ್ತು ಜಯ!ರಾಮಾಯಣ’ದಲ್ಲಿ ರಾಮನಾಗಿ ರಣಬೀರ್, ರಾವಣನಾಗಿ ಯಶ್; ಇಬ್ಬರಲ್ಲಿ ಶ್ರೀಮಂತ ನಟ ಯಾರು?ಕೈ ಕೈ ಹಿಡಿದು ಬಂದ ಐಶ್ವರ್ಯಾ ರೈ–ಅಭಿಷೇಕ್ ಜೋಡಿ; ರೊಮ್ಯಾಂಟಿಕ್ ಕ್ಷಣ ವೈರಲ್! ವಿಚ್ಛೇದನದ ವದಂತಿಗಳಿಗೆ ಬ್ರೇಕ್?ಆಸೀಸ್ ಕ್ರಿಕೆಟರ್ ಗೆ ಕೊಕೇನ್ ಶಾಕ್: ತಪ್ಪು ಒಪ್ಪಿಕೊಂಡು ನಿಷೇಧ ಪೂರ್ಣಗೊಳಿಸಿದ ಕ್ರಿಸ್ ಲಿನ್!