LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ನಾಗರಿಕ ಸೇವೆಗೆ ಬೃಹತ್ ಕಾಯಕಲ್ಪ: ಎಲ್ಲಾ ಸರ್ಕಾರಿ ಸೇವೆಗಳು ಆನ್‌ಲೈನ್, 'ಸಕಾಲ' ವ್ಯಾಪ್ತಿಗೆ ತರಲು ಮಾದರಿ ಮಾರ್ಗದರ್ಶಿ ಸೂತ್ರ ಬಿಡುಗಡೆ!

ಬೆಂಗಳೂರು: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳು ಸಾರ್ವಜನಿಕರಿಗೆ ನೀಡುವ ನಾಗರಿಕ ಸೇವೆಗಳನ್ನು ಮತ್ತಷ್ಟು ಕಡ್ಡಾಯವಾಗಿ, ಪಾರದರ್ಶಕವಾಗಿ ಹಾಗೂ ಚುರುಕಾಗಿ ತಲುಪಿಸುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ರಾಜ್ಯದ ಎಲ್ಲಾ ನಾಗರಿಕ ಸೇವೆಗಳನ್ನು ಕಡ್ಡಾಯವಾಗಿ ಆನ್‌ಲೈನ್ ವ್ಯವಸ್ಥೆಗೆ ತರುವುದು ಮತ್ತು ‘ಸಕಾಲ’ ಯೋಜನೆಯ ವ್ಯಾಪ್ತಿಗೆ ಅಳವಡಿಸುವುದು ಸೇರಿದಂತೆ ಗಮನಾರ್ಹ ಸುಧಾರಣೆಗಳನ್ನು ತರಲು ಹೊಸ ಪ್ರಮಾಣಿತ ಮಾರ್ಗದರ್ಶಿ ಸೂತ್ರಗಳನ್ನು (SOP) ಬಿಡುಗಡೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಕರ್ನಾಟಕ ಆಡಳಿತ ಸುಧಾರಣಾ ಆಯೋಗ-2 ನೀಡಿದ್ದ ಪ್ರಮುಖ ಶಿಫಾರಸುಗಳ ಆಧಾರದ ಮೇಲೆ ಪ್ರಜಾ ಸೇವಾ ಇಲಾಖೆಯು ಈ ನೂತನ ನಿಯಮಗಳನ್ನು ಜಾರಿಗೆ ತಂದಿದೆ.

ಹೊಸ ಮಾರ್ಗದರ್ಶಿ ಸೂತ್ರಗಳ ಪ್ರಕಾರ, ಪ್ರಸ್ತುತ ಲಭ್ಯವಿರುವ ಸೇವೆಗಳನ್ನು ಪಡೆಯಲು ನಿಗದಿಪಡಿಸಲಾದ ಕಾಲಮಿತಿಯನ್ನು ಗಣನೀಯವಾಗಿ ಕಡಿಮೆ ಮಾಡಲಾಗುವುದು. ಅಲ್ಲದೆ, ಸಾಧ್ಯವಿರುವ ಎಲ್ಲಾ ಸೇವೆಗಳಿಗೆ ಕೌಂಟರ್‌ಗಳಲ್ಲಿ ಅರ್ಜಿ ಸಲ್ಲಿಸಿದ ತಕ್ಷಣವೇ ಪ್ರಮಾಣಪತ್ರಗಳನ್ನು ನೀಡಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಜಾ ಸೇವಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹರ್ಷ ಗುಪ್ತ ತಿಳಿಸಿದ್ದಾರೆ. ಇದರಿಂದಾಗಿ ಸಾರ್ವಜನಿಕರು ಸರ್ಕಾರಿ ಕಚೇರಿಗಳಿಗೆ ಅಲೆದಾಡುವುದು ತಪ್ಪಲಿದ್ದು, ಕಾಲಮಿತಿಯಲ್ಲಿ ಸೇವೆಗಳು ಲಭ್ಯವಾಗಲಿವೆ.

ಆನ್‌ಲೈನ್ ವ್ಯವಸ್ಥೆಯಲ್ಲಿ ಪ್ರಮುಖ ಸುಧಾರಣೆ ತರಲು ನಿರ್ಧರಿಸಲಾಗಿದ್ದು, ಬಳಕೆದಾರರ ಭದ್ರತೆಗಾಗಿ ಆಧಾರ್ ಮತ್ತು ಮೊಬೈಲ್ ಆಧಾರಿತ ಪರಿಶೀಲನಾ ವ್ಯವಸ್ಥೆ ಇರಲಿದೆ. ವಿತರಿಸಲಾಗುವ ಎಲ್ಲಾ ಪ್ರಮಾಣಪತ್ರಗಳನ್ನು ಸಾರ್ವಜನಿಕರು ‘ಡಿಜಿಲಾಕರ್’ನಲ್ಲಿ ಸುರಕ್ಷಿತವಾಗಿ ಸಂಗ್ರಹಿಸಿಟ್ಟುಕೊಳ್ಳಲು ಅವಕಾಶ ನೀಡಲಾಗುತ್ತದೆ. ತಾಂತ್ರಿಕ ಅಥವಾ ಇತರೆ ಕಾರಣಗಳಿಂದ ಅರ್ಜಿ ನಿರಾಕರಣೆಯಾದರೆ, ನಾಗರಿಕರು ಪಾವತಿಸಿದ ಶುಲ್ಕವು ಸ್ವಯಂಚಾಲಿತವಾಗಿ (ಆಟೋಮ್ಯಾಟಿಕ್) ಅವರ ಖಾತೆಗೆ ಮರುಪಾವತಿಯಾಗಲಿದೆ. ಇದರ ಜೊತೆಗೆ ಯುಪಿಐ ಸೇರಿದಂತೆ ಡಿಜಿಟಲ್ ಪಾವತಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದ್ದು, ಇದುವರೆಗೆ ಇಂಗ್ಲಿಷ್‌ನಲ್ಲಿ ಮಾತ್ರ ಲಭ್ಯವಿದ್ದ ಎಲ್ಲಾ ಅರ್ಜಿ ನಮೂನೆಗಳನ್ನು ಕಡ್ಡಾಯವಾಗಿ ಕನ್ನಡದಲ್ಲೂ ಲಭ್ಯಗೊಳಿಸಲಾಗುತ್ತದೆ. ಅರ್ಜಿಯ ಪ್ರಸ್ತುತ ಸ್ಥಿತಿಗತಿಯನ್ನು (Status) ಸಾರ್ವಜನಿಕರು ಎಸ್‌ಎಂಎಸ್ ಹಾಗೂ ವಾಟ್ಸ್‌ಆ್ಯಪ್ ಮೂಲಕವೇ ತಿಳಿದುಕೊಳ್ಳುವ ಸೌಲಭ್ಯವನ್ನೂ ಕಲ್ಪಿಸಲಾಗುತ್ತಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸೇವೆಯಲ್ಲಿರುವ ಅಗ್ನಿವೀರರಿಗೆ ಮಾತ್ರ ಹೊಸ ಬದಲಾವಣೆ‘ರಾಮಾಯಣ’ ಸಿನಿಮಾ ನೋಡಿ ಭಾವುಕರಾದ ಅನುಪಮ್ ಖೇರ್: ಭಾರತೀಯ ಚಿತ್ರರಂಗದ ಸರ್ವಶ್ರೇಷ್ಠ ಸಿನಿಮಾ ಎಂದ ನಟ!ಮುಂಬೈ ಅಂತರ ಶಾಲಾ ಬಾಸ್ಕೆಟ್‌ಬಾಲ್ ಧಮಾಕಾ: ಡಾನ್ ಬೊಸ್ಕೊ ಮಣಿಸಿ ಟ್ರೋಫಿ ಎತ್ತಿಹಿಡಿದ ಅಂಡೇರಿಯಾ ಎಂಪಿಎಸ್!Motorola Signature 27 Snapdragon 8 Elite Extreme Gen 6 ಮತ್ತು 200MP ಟೆಲಿಫೋಟೋ ಲೆನ್ಸ್‌ನೊಂದಿಗೆ ಅನಾವರಣಬಾಲಿವುಡ್ ಅಂಗಳದಲ್ಲಿ ಹೊಸ ಲವ್ ಸ್ಟೋರಿ: ಗೆಳತಿ ಜೊತೆ ಮನೀಶ್ ಮಲ್ಹೋತ್ರಾ ಪಾರ್ಟಿಯಲ್ಲಿ ಮಾಧುರಿ ದೀಕ್ಷಿತ್ ಮಗ!ಬ್ಯಾಂಕ್ ಲಾಕರ್’ ನಲ್ಲಿ ಇಟ್ಟಿದ್ದ ₹47 ಲಕ್ಷದ ಚಿನ್ನಾಭರಣ ನಾಪತ್ತೆ! ಮಹಿಳೆಯ ಹೋರಾಟಕ್ಕೆ ಕೊನೆಗೂ ಸಿಕ್ತು ಜಯ!ರಾಮಾಯಣ’ದಲ್ಲಿ ರಾಮನಾಗಿ ರಣಬೀರ್, ರಾವಣನಾಗಿ ಯಶ್; ಇಬ್ಬರಲ್ಲಿ ಶ್ರೀಮಂತ ನಟ ಯಾರು?ಕೈ ಕೈ ಹಿಡಿದು ಬಂದ ಐಶ್ವರ್ಯಾ ರೈ–ಅಭಿಷೇಕ್ ಜೋಡಿ; ರೊಮ್ಯಾಂಟಿಕ್ ಕ್ಷಣ ವೈರಲ್! ವಿಚ್ಛೇದನದ ವದಂತಿಗಳಿಗೆ ಬ್ರೇಕ್?ಆಸೀಸ್ ಕ್ರಿಕೆಟರ್ ಗೆ ಕೊಕೇನ್ ಶಾಕ್: ತಪ್ಪು ಒಪ್ಪಿಕೊಂಡು ನಿಷೇಧ ಪೂರ್ಣಗೊಳಿಸಿದ ಕ್ರಿಸ್ ಲಿನ್!ಧನ್ತೇರಸ್ 2026: ಚಿನ್ನ ಖರೀದಿಗೆ ಶುಭ ಮುಹೂರ್ತ ಯಾವಾಗ? ಬೆಂಗಳೂರು ಸೇರಿ ಪ್ರಮುಖ ನಗರಗಳ ಪೂಜಾ ಸಮಯ ಇಲ್ಲಿದೆ