LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮೈಸೂರು ದಸರಾ ಕಂಬಳದ ಸೆಲ್ಫಿ ವಿಡಿಯೋ ಮಾಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್ : 'ಸಿಎಂ ವ್ಲೊಗ್ ಸೋ ಕ್ಯೂಟ್' ಎಂದ ಅಭಿಮಾನಿ!

ಮೈಸೂರು : ಮೈಸೂರು ದಸರಾ ಮಹೋತ್ಸವದಲ್ಲಿ ಈ ಬಾರಿ ಕರಾವಳಿ ಭಾಗದ ಐತಿಹಾಸಿಕ ಕಂಬಳ ಓಟಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧಿಕೃತ ಚಾಲನೆ ನೀಡಿದರು. ಈ ವಿಶೇಷ ಕ್ಷಣದಲ್ಲಿ ಕಂಬಳದ ರೋಮಾಂಚನಕಾರಿ ದೃಶ್ಯಗಳನ್ನು ತಾವೇ ಸ್ವತಃ ತಮ್ಮ ಮೊಬೈಲ್‌ನಲ್ಲಿ ಸೆಲ್ಫಿ ವಿಡಿಯೋ ಮೂಲಕ ಸೆರೆಹಿಡಿದು ಗಮನ ಸೆಳೆದರು. ನಂತರ ಈ ವಿಡಿಯೋವನ್ನು ತಮ್ಮ ಅಧಿಕೃತ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದು, "ಓಟದ ಭರದಲ್ಲಿ ಸಿಡಿದೇಳುವ ಮಣ್ಣಿನ ಕಂಪು, ದಿಗ್ವಿಜಯದತ್ತ ಮುನ್ನುಗ್ಗುವ ಕೋಣಗಳ ವೀರಾವೇಶ! ನಮ್ಮ ಅಪ್ಪಟ ದೇಸಿ ಸೊಗಡನ್ನು ಕಣ್ತುಂಬಿಕೊಳ್ಳುವಾಗ ಸಿಕ್ಕ ಆನಂದವೇ ಅನನ್ಯ" ಎಂದು ಬಣ್ಣಿಸಿದ್ದಾರೆ.

ಮುಖ್ಯಮಂತ್ರಿಗಳ ಈ ಸರಳತೆ ಹಾಗೂ ಕಂಬಳದ ಪ್ರೀತಿಗೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ಇನ್‌ಸ್ಟಾಗ್ರಾಮ್‌ನಲ್ಲಿ ಈ ವಿಡಿಯೋಗೆ ನೆಟ್ಟಿಗರು ವಿವಿಧ ರೀತಿಯಲ್ಲಿ ಕಾಮೆಂಟ್ ಮಾಡಿದ್ದು, "ಸಿಎಂ ಅವರ ವ್ಲೋಗಿಂಗ್ ಸೋ ಕ್ಯೂಟ್" ಎಂದು ಒಬ್ಬರು ಪ್ರಶಂಸಿಸಿದರೆ, ಮತ್ತೊಬ್ಬರು "ಭಾರತದಲ್ಲಿ ಬೆಸ್ಟ್ ಸಿಎಂ" ಎಂದು ಕಮೆಂಟ್ ಮಾಡುವ ಮೂಲಕ ತಮ್ಮ ಒಲವನ್ನು ವ್ಯಕ್ತಪಡಿಸಿದ್ದಾರೆ. ಸಾಂಸ್ಕೃತಿಕ ಕ್ರೀಡೆಯನ್ನು ಹತ್ತಿರದಿಂದ ಅನುಭವಿಸಿ, ಅದನ್ನು ಸಾರ್ವಜನಿಕರೊಂದಿಗೆ ಹಂಚಿಕೊಂಡಿರುವ ಡಿಕೆಶಿ ಅವರ ಈ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

https://twitter.com/i/status/2111898305693393272

 

 

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಕ್ಲ್ಯಾಂಡ್ ಆಯ್ತು, ಈಗ ವೆಲ್ಲಿಂಗ್ಟನ್‌ನಲ್ಲೂ ವರುಣನದ್ದೇ ಆರ್ಭಟ: ಎರಡನೇ ಏಕದಿನ ಪಂದ್ಯಕ್ಕೆ ಕಂಟಕವಾದ ಹವಾಮಾನ!ಸೇವೆಯಲ್ಲಿರುವ ಅಗ್ನಿವೀರರಿಗೆ ಮಾತ್ರ ಹೊಸ ಬದಲಾವಣೆ‘ರಾಮಾಯಣ’ ಸಿನಿಮಾ ನೋಡಿ ಭಾವುಕರಾದ ಅನುಪಮ್ ಖೇರ್: ಭಾರತೀಯ ಚಿತ್ರರಂಗದ ಸರ್ವಶ್ರೇಷ್ಠ ಸಿನಿಮಾ ಎಂದ ನಟ!ಮುಂಬೈ ಅಂತರ ಶಾಲಾ ಬಾಸ್ಕೆಟ್‌ಬಾಲ್ ಧಮಾಕಾ: ಡಾನ್ ಬೊಸ್ಕೊ ಮಣಿಸಿ ಟ್ರೋಫಿ ಎತ್ತಿಹಿಡಿದ ಅಂಡೇರಿಯಾ ಎಂಪಿಎಸ್!Motorola Signature 27 Snapdragon 8 Elite Extreme Gen 6 ಮತ್ತು 200MP ಟೆಲಿಫೋಟೋ ಲೆನ್ಸ್‌ನೊಂದಿಗೆ ಅನಾವರಣಬಾಲಿವುಡ್ ಅಂಗಳದಲ್ಲಿ ಹೊಸ ಲವ್ ಸ್ಟೋರಿ: ಗೆಳತಿ ಜೊತೆ ಮನೀಶ್ ಮಲ್ಹೋತ್ರಾ ಪಾರ್ಟಿಯಲ್ಲಿ ಮಾಧುರಿ ದೀಕ್ಷಿತ್ ಮಗ!ಬ್ಯಾಂಕ್ ಲಾಕರ್’ ನಲ್ಲಿ ಇಟ್ಟಿದ್ದ ₹47 ಲಕ್ಷದ ಚಿನ್ನಾಭರಣ ನಾಪತ್ತೆ! ಮಹಿಳೆಯ ಹೋರಾಟಕ್ಕೆ ಕೊನೆಗೂ ಸಿಕ್ತು ಜಯ!ರಾಮಾಯಣ’ದಲ್ಲಿ ರಾಮನಾಗಿ ರಣಬೀರ್, ರಾವಣನಾಗಿ ಯಶ್; ಇಬ್ಬರಲ್ಲಿ ಶ್ರೀಮಂತ ನಟ ಯಾರು?ಕೈ ಕೈ ಹಿಡಿದು ಬಂದ ಐಶ್ವರ್ಯಾ ರೈ–ಅಭಿಷೇಕ್ ಜೋಡಿ; ರೊಮ್ಯಾಂಟಿಕ್ ಕ್ಷಣ ವೈರಲ್! ವಿಚ್ಛೇದನದ ವದಂತಿಗಳಿಗೆ ಬ್ರೇಕ್?ಆಸೀಸ್ ಕ್ರಿಕೆಟರ್ ಗೆ ಕೊಕೇನ್ ಶಾಕ್: ತಪ್ಪು ಒಪ್ಪಿಕೊಂಡು ನಿಷೇಧ ಪೂರ್ಣಗೊಳಿಸಿದ ಕ್ರಿಸ್ ಲಿನ್!