LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಒಳ ಉಡುಪಿನಲ್ಲಿ ಚಿನ್ನದ ಪೌಡರ್ ಇಟ್ಟುಕೊಂಡು ಅಕ್ರಮ ಸಾಗಾಟ: ಮೆಟ್ರೋ ಸ್ಟೇಷನ್ ನಲ್ಲಿ ತಪಾಸಣೆ ವೇಳೆ ಎಸ್ಕೇಪ್ ಆಗಲು ಯತ್ನಿಸಿದ ಆರೋಪಿಯನ್ನು ಬೆನ್ನಟ್ಟಿ ಹಿಡಿದ ಭದ್ರತಾ ಸಿಬ್ಬಂದಿ

ನವದೆಹಲಿ: ವ್ಯಕ್ತಿಯೊಬ್ಬ ತನ್ನ ಒಳೌಡುಪಿನಲ್ಲಿ ಚಿನ್ನದ ಪೌಡರ್ ಇಟ್ಟುಕೊಂಡು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವೇಳೆ ಮೆಟ್ರೋ ನಿಲ್ದಾಣದಲ್ಲಿ ಭದ್ರತಾ ಸಿಬ್ಬಂದಿ ಕೈಗೆ ಸಿಕ್ಕಿ ಬಿದ್ದಿರುವ ಘಟನೆ ನಡೆದಿದೆ.

ದೆಹಲಿಯ ಜಾಮಾ ಮಸೀದಿ ಮೆಟ್ರೋ ನಿಲ್ದಾಣದಲ್ಲಿ ತಪಾಸಣೆ ವೇಳೆ ವ್ಯಕ್ತಿಯೊಬ್ಬ ಪರಾರಿಯಾಗಲು ಯತ್ನಿಸಿದ್ದಾನೆ. ಈ ವೇಳೆ ಆತನನ್ನು ಭದ್ರತಾ ಸಿಬ್ಬಂದಿ ಬೆನ್ನಟ್ಟಿ ಹಿಡಿದಿದ್ದಾರೆ. ಪರಿಶೀಲಿಸಿದಾಗ ಒಳ ಉಡುಪಿನಲ್ಲಿ 155 ಗ್ರಾಂ ಚಿನ್ನದ ಪುಡಿ ಇರುವುದು ಪತ್ತೆಯಾಗಿದೆ.

ತಪಾಸಣೆ ವೇಳೆ ಸ್ಕ್ಯಾನರ್‌ನಲ್ಲಿ ಅನುಮಾನಾಸ್ಪದ ವಸ್ತುವೊಂದು ಕಂಡುಬಂದಾಗ ಆರೋಪಿ ಅಲ್ಲಿಂದ ಓಡಿಹೋಗಲು ಯತ್ನಿಸಿದ್ದ. ಆದರೆ, ನಿರ್ಗಮನ ದ್ವಾರದ ಬಳಿ ಸಿಐಎಸ್‌ಎಫ್ ಸಿಬ್ಬಂದಿ ಆತನನ್ನು ಹಿಡಿದಿದ್ದರು. ಬಳಿಕ ಪರಿಶೀಲನೆ ನಡೆಸಿದಾಗ ಚಿನ್ನದ ಪುಡಿ ಪತ್ತೆಯಾಗಿದೆ.

ಆರೋಪಿಯನ್ನು ಬಂಧಿಸಲಾಗಿದೆ. ಬಂಧಿತನನ್ನು ಮೊಹಮ್ಮದ್ ಶೋಯೆಬ್ ಎಂದು ಗುರುತಿಸಲಾಗಿದೆ. ಈತ ಉತ್ತರ ಪ್ರದೇಶದ ಮುಜಾಫರ್‌ನಗರದವನೆಂದು ತಿಳಿದುಬಂದಿದೆ. ಅಲ್ಲದೇ ಮಲೇಷ್ಯಾದ ಕೌಲಾಲಂಪುರದಲ್ಲಿಯೂ ಮನೆ ಇರುವುದಾಗಿ ಆತ ಹೇಳಿಕೊಂಡಿದ್ದಾನೆ. ಆತನನ್ನು ಪೊಲೀಸರಿಗೆ ಒಪ್ಪಿಸಲಾಗಿದೆ.

ಆರಂಭದಲ್ಲಿ ಇದು ಮಾದಕ ವಸ್ತುವಿರಬಹುದೆಂದು ಶಂಕಿಸಿದ ಪೊಲೀಸರು, ಮಾದಕ ದ್ರವ್ಯ ನಿಯಂತ್ರಣ ಅಧಿಕಾರಿಗಳನ್ನು ಸಂಪರ್ಕಿಸಿದರು. ಅಧಿಕಾರಿಗಳ ಪರಿಶೀಲನೆ ಬಳಿಕ ಅದು ಮಾದಕ ವಸ್ತುವಲ್ಲ ಎಂಬುದು ತಿಳಿದು ಬಂದಿದೆ.

ವಿಚಾರಣೆ ವೇಳೆ ಶೋಯೆಬ್‌, ತಾನು ಮಲೇಷ್ಯಾದ ಜವಳಿ ವಲಯದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಲ್ಲಿ ಮಲೇಷ್ಯಾ ಮೂಲದ ಪತ್ನಿ ಮತ್ತು ಇಬ್ಬರು ಮಕ್ಕಳೊಂದಿಗೆ ವಾಸಿಸುತ್ತಿರುವುದಾಗಿ ತಿಳಿಸಿದ್ದಾನೆ.

ಅ.16 ರಂದು ಚಿನ್ನವನ್ನು ದೆಹಲಿಗೆ ತಂದಿದ್ದು, ಜಾಮಾ ಮಸೀದಿ ಪ್ರದೇಶದ ಹೋಟೆಲ್ ಒಂದರಲ್ಲಿ ತಂಗಿದ್ದೆ. ಲಜಪತ್ ನಗರಕ್ಕೆ ಹೋಗಲು ಮೆಟ್ರೋ ನಿಲ್ದಾಣಕ್ಕೆ ಬಂದಿದ್ದೆ ಎಂದು ತಿಳಿಸಿದ್ದಾನೆ. ಈ ಬಗ್ಗೆ ಪೊಲೀಸರು ಕಸ್ಟಮ್ಸ್ ಅಧಿಕಾರಿಗಳನ್ನು ಸಂಪರ್ಕಿಸಿದಾಗ, ಈ ಪ್ರಕರಣವು ತಮ್ಮ ವ್ಯಾಪ್ತಿಗೆ ಬರುವುದಿಲ್ಲ ಎಂದು ಕ್ರಮ ಕೈಗೊಳ್ಳಲು ನಿರಾಕರಿಸಿದ್ದಾರೆ.

ಪತ್ತೆಯಾದ ವಸ್ತುವಿಗೆ ಸಂಬಂಧಿಸಿದ ದಾಖಲೆಗಳನ್ನು ಒದಗಿಸಲು ಅಥವಾ ಅದನ್ನು ಏಕೆ ಸಾಗಿಸುತ್ತಿದ್ದೆ ಎಂಬುದಕ್ಕೆ ಸಮರ್ಪಕವಾದ ವಿವರಣೆ ನೀಡಲು ಶೋಯೆಬ್ ವಿಫಲನಾಗಿದ್ದಾನೆ. ಆರೋಪಿ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ರೋ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಕ್ಲ್ಯಾಂಡ್ ಆಯ್ತು, ಈಗ ವೆಲ್ಲಿಂಗ್ಟನ್‌ನಲ್ಲೂ ವರುಣನದ್ದೇ ಆರ್ಭಟ: ಎರಡನೇ ಏಕದಿನ ಪಂದ್ಯಕ್ಕೆ ಕಂಟಕವಾದ ಹವಾಮಾನ!ಸೇವೆಯಲ್ಲಿರುವ ಅಗ್ನಿವೀರರಿಗೆ ಮಾತ್ರ ಹೊಸ ಬದಲಾವಣೆ‘ರಾಮಾಯಣ’ ಸಿನಿಮಾ ನೋಡಿ ಭಾವುಕರಾದ ಅನುಪಮ್ ಖೇರ್: ಭಾರತೀಯ ಚಿತ್ರರಂಗದ ಸರ್ವಶ್ರೇಷ್ಠ ಸಿನಿಮಾ ಎಂದ ನಟ!ಮುಂಬೈ ಅಂತರ ಶಾಲಾ ಬಾಸ್ಕೆಟ್‌ಬಾಲ್ ಧಮಾಕಾ: ಡಾನ್ ಬೊಸ್ಕೊ ಮಣಿಸಿ ಟ್ರೋಫಿ ಎತ್ತಿಹಿಡಿದ ಅಂಡೇರಿಯಾ ಎಂಪಿಎಸ್!Motorola Signature 27 Snapdragon 8 Elite Extreme Gen 6 ಮತ್ತು 200MP ಟೆಲಿಫೋಟೋ ಲೆನ್ಸ್‌ನೊಂದಿಗೆ ಅನಾವರಣಬಾಲಿವುಡ್ ಅಂಗಳದಲ್ಲಿ ಹೊಸ ಲವ್ ಸ್ಟೋರಿ: ಗೆಳತಿ ಜೊತೆ ಮನೀಶ್ ಮಲ್ಹೋತ್ರಾ ಪಾರ್ಟಿಯಲ್ಲಿ ಮಾಧುರಿ ದೀಕ್ಷಿತ್ ಮಗ!ಬ್ಯಾಂಕ್ ಲಾಕರ್’ ನಲ್ಲಿ ಇಟ್ಟಿದ್ದ ₹47 ಲಕ್ಷದ ಚಿನ್ನಾಭರಣ ನಾಪತ್ತೆ! ಮಹಿಳೆಯ ಹೋರಾಟಕ್ಕೆ ಕೊನೆಗೂ ಸಿಕ್ತು ಜಯ!ರಾಮಾಯಣ’ದಲ್ಲಿ ರಾಮನಾಗಿ ರಣಬೀರ್, ರಾವಣನಾಗಿ ಯಶ್; ಇಬ್ಬರಲ್ಲಿ ಶ್ರೀಮಂತ ನಟ ಯಾರು?ಕೈ ಕೈ ಹಿಡಿದು ಬಂದ ಐಶ್ವರ್ಯಾ ರೈ–ಅಭಿಷೇಕ್ ಜೋಡಿ; ರೊಮ್ಯಾಂಟಿಕ್ ಕ್ಷಣ ವೈರಲ್! ವಿಚ್ಛೇದನದ ವದಂತಿಗಳಿಗೆ ಬ್ರೇಕ್?ಆಸೀಸ್ ಕ್ರಿಕೆಟರ್ ಗೆ ಕೊಕೇನ್ ಶಾಕ್: ತಪ್ಪು ಒಪ್ಪಿಕೊಂಡು ನಿಷೇಧ ಪೂರ್ಣಗೊಳಿಸಿದ ಕ್ರಿಸ್ ಲಿನ್!