LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮಂಡ್ಯ: ಕಬ್ಬಿನ ಬೆಲೆ ಏರಿಕೆ ಹಾಗೂ ಸಾಲ ಮನ್ನಾ ಮಾಡುವಂತೆ ಗಣಂಗೂರು ಟೋಲ್ ಬಳಿ ರೈತರ ಉಗ್ರ ಪ್ರತಿಭಟನೆ; ಹೆದ್ದಾರಿ ಬಂದ್!

ಮಂಡ್ಯ : ಶ್ರೀರಂಗಪಟ್ಟಣ ತಾಲ್ಲೂಕಿನ ಗಣಂಗೂರು ಟೋಲ್ ಬಳಿ ಕಬ್ಬಿಗೆ ಸೂಕ್ತ ಬೆಲೆ ನಿಗದಿಪಡಿಸುವುದು ಹಾಗೂ ಕೃಷಿ ಸಾಲ ಮನ್ನಾ ಮಾಡುವಂತೆ ಆಗ್ರಹಿಸಿ ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ರೈತರು ರಸ್ತೆಗಿಳಿದು ಉಗ್ರ ಪ್ರತಿಭಟನೆ ನಡೆಸಿದ್ದಾರೆ. ಮೇಲುಕೋಟೆ ಕ್ಷೇತ್ರದ ಶಾಸಕ ಹಾಗೂ ರೈತ ನಾಯಕ ದರ್ಶನ್ ಪುಟ್ಟಣ್ಣಯ್ಯ ಅವರ ನೇತೃತ್ವದಲ್ಲಿ ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಹೆದ್ದಾರಿಯನ್ನು ತಡೆದು ಆಕ್ರೋಶ ವ್ಯಕ್ತಪಡಿಸಲಾಗಿದೆ.

ಪ್ರತಿ ಟನ್ ಕಬ್ಬಿಗೆ ಕನಿಷ್ಠ 5,500 ರೂಪಾಯಿ ದರವನ್ನು ಕಡ್ಡಾಯವಾಗಿ ನಿಗದಿಪಡಿಸಬೇಕು ಮತ್ತು ಸಕ್ಕರೆ ಕಾರ್ಖಾನೆಗಳು ರೈತರಿಗೆ ಬಾಕಿ ಉಳಿಸಿಕೊಂಡಿರುವ ಪ್ರತಿಯೊಂದು ರೂಪಾಯಿಯನ್ನೂ ಕೂಡಲೇ ರೈತರ ಖಾತೆಗೆ ಜಮೆ ಮಾಡಬೇಕು ಎಂದು ರೈತರು ಪಟ್ಟು ಹಿಡಿದರು. ಇದರೊಂದಿಗೆ ತೀವ್ರ ಸಂಕಷ್ಟದಲ್ಲಿರುವ ರಾಜ್ಯದ ರೈತರ ಸಂಪೂರ್ಣ ಕೃಷಿ ಸಾಲವನ್ನು ಕೂಡಲೇ ಮನ್ನಾ ಮಾಡಬೇಕೆಂದು ಆಗ್ರಹಿಸಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

ಪ್ರತಿಭಟನೆಯ ತೀವ್ರತೆಯನ್ನು ಗಮನಿಸಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಗಣಂಗೂರು ಟೋಲ್ ಸುತ್ತಮುತ್ತ ಬಿಗಿ ಪೊಲೀಸ್ ಭದ್ರತೆಯನ್ನು ನಿಯೋಜಿಸಲಾಗಿತ್ತು. ಬೆಳಗ್ಗೆಯೇ ಟೋಲ್ ಮುತ್ತಿಗೆ ಹಾಕಲು ಮುಂದಾದ ರೈತರನ್ನು ತಡೆಯಲು ಪೊಲೀಸರು ಹರಸಾಹಸ ಪಟ್ಟರು. ಸ್ಥಳಕ್ಕೆ ಭೇಟಿ ನೀಡಿದ ಐಜಿಪಿ ಬೋರಲಿಂಗಯ್ಯ ಅವರು ರೈತರೊಂದಿಗೆ ಮಾತುಕತೆ ನಡೆಸಿ, ಹೆದ್ದಾರಿ ತಡೆಯದಂತೆ ಮನವೋಲಿಸಲು ಪ್ರಯತ್ನಿಸಿದರು.

ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿದ್ದಂತೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರು ತಮ್ಮ ವಾಹನದ ಮೇಲೆ ನಿಂತು ಧ್ವನಿವರ್ಧಕದ ಮೂಲಕ ರೈತರನ್ನು ಸಮಾಧಾನಪಡಿಸಲು ಮುಂದಾದರು. ಸಚಿವರು ಸ್ಥಳಕ್ಕೆ ಬರುತ್ತಿದ್ದು, ಅವರ ಮಾತುಗಳನ್ನು ಆಲಿಸಿ ಪರಿಹಾರವೇನು ಎಂಬುದನ್ನು ನೋಡೋಣ, ಅಲ್ಲಿಯವರೆಗೆ ಶಾಂತಿಯುತ ಹೋರಾಟ ನಡೆಸೋಣ ಎಂದು ಮನವಿ ಮಾಡಿದರು. ಆದರೆ, ಆಕ್ರೋಶಗೊಂಡ ರೈತರು ಪೊಲೀಸರ ಮನವಿಯನ್ನು ಲೆಕ್ಕಿಸದೆ ಬ್ಯಾರಿಕೇಡ್ ಹಾಗೂ ತಂತಿ ಬೇಲಿಗಳನ್ನು ಮುರಿದುಕೊಂಡು ಏಕಾಏಕಿ ಹೆದ್ದಾರಿಗೆ ನುಗ್ಗಿ ಟೋಲ್ ಮಧ್ಯೆ ಕುಳಿತು ಪ್ರತಿಭಟನೆ ನಡೆಸಿದರು. ಇದರಿಂದ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಸಂಪೂರ್ಣ ಸ್ತಬ್ಧಗೊಂಡಿತು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಂಗಳೂರಲ್ಲಿ ವಾಣಿವಿಲಾಸ್ ಆಸ್ಪತ್ರೆ ವೈದ್ಯರ ಯಡವಟ್ಟು : 57 ದಿನದ ಹೆಣ್ಣು ಮಗುವಿನ ಕಾಲು ಬೆರಳುಗಳೆ ಕಟ್!ದೆಹಲಿಯ ವಾಯುಮಾಲಿನ್ಯ ನಿಯಂತ್ರಣದಲ್ಲಿ GRAP ವಿಫಲವೇ? ಶಾಶ್ವತ ಪರಿಹಾರಕ್ಕೆ ವರ್ಷವಿಡೀ ಕ್ರಮ ಅಗತ್ಯಪಂಜಾಬ್ ಚುನಾವಣೆಗೆ ಮುನ್ನ ಬಿಜೆಪಿ ಜೊತೆ ಮೈತ್ರಿ ಸುಳಿವು ನೀಡಿದ ಸುಖ್‌ಬೀರ್ ಬಾದಲ್; ಎಎಪಿ, ಕಾಂಗ್ರೆಸ್ ವಿರುದ್ಧ ವಾಗ್ದಾಳಿBREAKING : ಸ್ಟಿಂಗ್ ಆಪರೇಷನ್ ನಲ್ಲಿ ನಮ್ಮ ಪಕ್ಷದವರೆ ಇದ್ದಾರೆ : ಯತೀಂದ್ರ ಸಿದ್ದರಾಮಯ್ಯ ಹೊಸ ಬಾಂಬ್!BREAKING : ಬೆಂಗಳೂರಲ್ಲಿ ಭೂಕಂಪ : ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 3.0 ರಷ್ಟು ದಾಖಲು, ಬೆಚ್ಚಿಬಿದ್ದ ಜನತೆ!BREAKING : 109 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ ; ತುರ್ತು ಭೂ ಸ್ಪರ್ಶವಿಶ್ವದ ನಂ.1 ಸ್ಕಾಚ್ ವಿಸ್ಕಿ ಮಾರುಕಟ್ಟೆಯಾಗಲು ಭಾರತ ಸಜ್ಜು! ಮದ್ಯದ ಬೆಲೆ ಕಡಿಮೆಯಾಗುತ್ತಾ?ಮಂಡ್ಯ: ಕಬ್ಬಿನ ಬೆಲೆ ಏರಿಕೆ ಹಾಗೂ ಸಾಲ ಮನ್ನಾ ಮಾಡುವಂತೆ ಗಣಂಗೂರು ಟೋಲ್ ಬಳಿ ರೈತರ ಉಗ್ರ ಪ್ರತಿಭಟನೆ; ಹೆದ್ದಾರಿ ಬಂದ್!Gold Price : ಚಿನ್ನ ಪ್ರೀಯರಿಗೆ ಭರ್ಜರಿ ಗುಡ್ ನ್ಯೂಸ್ : ಬಂಗಾರದ ಬೆಲೆಯಲ್ಲಿ ₹1900 ಭಾರಿ ಕುಸಿತ, 5 ತಿಂಗಳ ಕನಿಷ್ಠ ಮಟ್ಟಕ್ಕೆ ಇಳಿಕೆ!BIG NEWS : ವಿಧಾನ ಪರಿಷತ್ ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆ : ಬಿಜೆಪಿ ಶಾಸಕ ಮುನಿರತ್ನ ಮೇಲೆ ಹಲ್ಲೆಗೆ ಯತ್ನ!