LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕೋಲ್ಕತ್ತಾ ವಿಮಾನ ನಿಲ್ದಾಣದಲ್ಲಿ ಮತ್ತೆ ಬಾಂಬ್ ಭೀತಿ; ಮಹಿಳೆಯರ ಶೌಚಾಲಯದಲ್ಲಿ ಬೆದರಿಕೆ ಪತ್ರ ಪತ್ತೆ!

ಕೋಲ್ಕತ್ತಾ: ಕೋಲ್ಕತ್ತಾ ವಿಮಾನ ನಿಲ್ದಾಣದಲ್ಲಿ ಮತ್ತೆ ಬಾಂಬ್ ಭೀತಿ ಎದುರಾಗಿದೆ. ಶುಕ್ರವಾರ ಬೆಳಗ್ಗೆ ಮಹಿಳೆಯರ ಶೌಚಾಲಯದಲ್ಲಿ ಸ್ವಚ್ಛತಾ ಸಿಬ್ಬಂದಿಗೆ ಒಂದು ಚೀಟಿ ಪತ್ತೆಯಾಗಿದೆ. ಅದರಲ್ಲಿ “30ನೇ ಗೇಟ್‌ನಲ್ಲಿ ಬಾಂಬ್ ಇಡಲಾಗಿದೆ” ಎಂದು ಬರೆಯಲಾಗಿತ್ತು. ಇದರಿಂದ ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿ ತಕ್ಷಣ ಕಾರ್ಯಪ್ರವೃತ್ತರಾಗಿದ್ದಾರೆ.

ಹೌದು.ಕೋಲ್ಕತ್ತಾ ವಿಮಾನ ನಿಲ್ದಾಣದಲ್ಲಿ ಮತ್ತೆ ಬಾಂಬ್ ಭೀತಿ ಎದುರಾಗಿದೆ. ಶುಕ್ರವಾರ ಬೆಳಗ್ಗೆ ಮಹಿಳೆಯರ ಶೌಚಾಲಯದಲ್ಲಿ ಪತ್ತೆಯಾದ ಚೀಟಿಯಲ್ಲಿ, “30ನೇ ಗೇಟ್‌ನಲ್ಲಿ ಬಾಂಬ್ ಇಡಲಾಗಿದೆ” ಎಂದು ಬರೆಯಲಾಗಿತ್ತು. ಮಾಹಿತಿ ತಿಳಿಯುತ್ತಿದ್ದಂತೆ ವಿಮಾನ ನಿಲ್ದಾಣದ ಪೊಲೀಸರು, ಸಿಐಎಸ್‌ಎಫ್ ಹಾಗೂ ಬಾಂಬ್ ನಿಷ್ಕ್ರಿಯ ದಳ ಕಾರ್ಯಪ್ರವೃತ್ತರಾಗಿದ್ದು, ಇಡೀ ಆವರಣದಲ್ಲಿ ತೀವ್ರ ತಪಾಸಣೆ ನಡೆಸಿದ್ದಾರೆ.

ಚೀಟಿ ಪತ್ತೆಯಾದ ಕೂಡಲೇ ವಿಮಾನ ನಿಲ್ದಾಣದ ಪೊಲೀಸ್ ಠಾಣೆ, ಕೇಂದ್ರ ಕೈಗಾರಿಕಾ ಭದ್ರತಾ ಪಡೆ (CISF) ಹಾಗೂ ಬಾಂಬ್ ನಿಷ್ಕ್ರಿಯ ದಳಕ್ಕೆ ಮಾಹಿತಿ ನೀಡಲಾಗಿದೆ. ಬಳಿಕ 30ನೇ ಗೇಟ್ ಸೇರಿದಂತೆ ಇಡೀ ವಿಮಾನ ನಿಲ್ದಾಣದ ಆವರಣದಲ್ಲಿ ತಪಾಸಣೆ ನಡೆಸಲಾಗಿದೆ. ಆದರೆ, ಈವರೆಗೆ ಯಾವುದೇ ಅನುಮಾನಾಸ್ಪದ ವಸ್ತು ಪತ್ತೆಯಾಗಿಲ್ಲ ಎಂದು ವಿಮಾನ ನಿಲ್ದಾಣದ ಮೂಲಗಳು ತಿಳಿಸಿವೆ.

ಅಕ್ಟೋಬರ್ 8ರಂದು ಕೂಡ ಬಾಂಬ್ ಬೆದರಿಕೆ ಇ-ಮೇಲ್

ಇದಕ್ಕೂ ಮೊದಲು ಅಕ್ಟೋಬರ್ 8ರಂದು ಕೋಲ್ಕತ್ತಾ ವಿಮಾನ ನಿಲ್ದಾಣಕ್ಕೆ ಬಂದಿದ್ದ ಬೆದರಿಕೆ ಇ-ಮೇಲ್‌ನಿಂದ ಆತಂಕ ಸೃಷ್ಟಿಯಾಗಿತ್ತು. ವಿಮಾನ ನಿಲ್ದಾಣದ ಒಳಗೆ ಬಾಂಬ್ ಇಡಲಾಗಿದೆ ಮತ್ತು ಯಾವುದೇ ಕ್ಷಣದಲ್ಲಾದರೂ ಸ್ಫೋಟ ಸಂಭವಿಸಬಹುದು ಎಂದು ಇ-ಮೇಲ್‌ನಲ್ಲಿ ಎಚ್ಚರಿಕೆ ನೀಡಲಾಗಿತ್ತು ಎನ್ನಲಾಗಿದೆ.

ಕೂಡಲೇ ಪ್ರಯಾಣಿಕರಿಗೆ ಎಚ್ಚರಿಕೆ ನೀಡಲಾಗಿತ್ತು. ವಿಮಾನ ನಿಲ್ದಾಣದ ಆವರಣವನ್ನು ಸಾಧ್ಯವಾದಷ್ಟು ಖಾಲಿ ಮಾಡಿಸಿ, CISF ಸಿಬ್ಬಂದಿ ತಪಾಸಣೆ ಆರಂಭಿಸಿದ್ದರು. ಆದರೆ, ಕೊನೆಗೆ ಯಾವುದೇ ಸ್ಫೋಟಕ ವಸ್ತು ಪತ್ತೆಯಾಗಿರಲಿಲ್ಲ. ಜನರಲ್ಲಿ ಭೀತಿ ಮೂಡಿಸುವ ಉದ್ದೇಶದಿಂದಲೇ ಈ ಬೆದರಿಕೆ ಇ-ಮೇಲ್ ಕಳುಹಿಸಿರಬಹುದು ಎಂಬ ಶಂಕೆಯೂ ವ್ಯಕ್ತವಾಗಿತ್ತು.

ಸುಮಾರು 15 ದಿನಗಳ ಹಿಂದಷ್ಟೇ ಕೋಲ್ಕತ್ತಾ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿದ್ದ ಘಟನೆ ನಡೆದಿತ್ತು. ಇದೀಗ ಮತ್ತೆ ಬೆದರಿಕೆ ಚೀಟಿ ಪತ್ತೆಯಾಗಿರುವುದು ಭದ್ರತಾ ಆತಂಕವನ್ನು ಹೆಚ್ಚಿಸಿದೆ. ಚೀಟಿಯನ್ನು ಯಾರು ಬರೆದಿಟ್ಟಿದ್ದಾರೆ ಮತ್ತು ಇದರ ಹಿಂದಿನ ಉದ್ದೇಶವೇನು ಎಂಬುದರ ಕುರಿತು ತನಿಖೆ ಮುಂದುವರಿದಿದೆ. ಮುನ್ನೆಚ್ಚರಿಕೆ ಕ್ರಮವಾಗಿ ವಿಮಾನ ನಿಲ್ದಾಣದಲ್ಲಿ ಭದ್ರತೆಯನ್ನು ಮತ್ತಷ್ಟು ಬಿಗಿಗೊಳಿಸಲಾಗಿದೆ.

ಬೆದರಿಕೆ ಪತ್ರದ ಹಿಂದೆ ಯಾರಿದ್ದಾರೆ?

ಹಿಂದಿನ ಘಟನೆಯ ಸುಮಾರು 15 ದಿನಗಳ ಬಳಿಕ ಮತ್ತೆ ಬೆದರಿಕೆ ಪತ್ರ ಪತ್ತೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ. ಈ ಚೀಟಿಯನ್ನು ಯಾರು ಬರೆದಿಟ್ಟಿದ್ದಾರೆ ಮತ್ತು ಅದರ ಹಿಂದಿನ ಉದ್ದೇಶವೇನು ಎಂಬುದು ಇನ್ನೂ ತಿಳಿದುಬಂದಿಲ್ಲ.

ಪ್ರಕರಣದ ಕುರಿತು ತನಿಖೆ ನಡೆಯುತ್ತಿದೆ. ಚೀಟಿಯನ್ನು ಪತ್ತೆಹಚ್ಚಿದ ಸ್ವಚ್ಛತಾ ಸಿಬ್ಬಂದಿಯನ್ನೂ ವಿಚಾರಣೆ ನಡೆಸಲಾಗುತ್ತಿದೆ ಎಂದು ವರದಿಯಾಗಿದೆ. ಘಟನೆಯ ಬಳಿಕ ವಿಮಾನ ನಿಲ್ದಾಣದಲ್ಲಿ ಭದ್ರತೆಯನ್ನು ಮತ್ತಷ್ಟು ಬಿಗಿಗೊಳಿಸಲಾಗಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮದ್ಯವರ್ಜನ ಶಿಬಿರಗಳಿಂದ ನೂರಾರು ಕುಟುಂಬಗಳಿಗೆ ನೆಮ್ಮದಿ: ಸಾಗರದ ತುಮರಿಯಲ್ಲಿ ಮಲ್ಲಿಕಾರ್ಜುನ ಹಕ್ರೆ ಅಭಿಪ್ರಾಯಟೋಲ್ ಕಲೆಕ್ಷನ್ ನಲ್ಲಿ ನೈಸ್ ಭಾರೀ ಅಕ್ರಮ; ಪಾಸ್ ಟ್ಯಾಗ್ ಅಳವಡಿಕೆಗೆ ಮುನ್ನ ಲೂಟಿ - HDKರಾಜಕೀಯಕ್ಕೆ ಸ್ಟಿಂಗ್‌ ಬಳಕೆ; ಸಿಎಂ ವರದಿಗೆ ಹೆಚ್.ಡಿ.ಕುಮಾರಸ್ವಾಮಿ ಕೆಂಡಾಮಂಡಲಕೋಲ್ಕತ್ತಾ ವಿಮಾನ ನಿಲ್ದಾಣದಲ್ಲಿ ಮತ್ತೆ ಬಾಂಬ್ ಭೀತಿ; ಮಹಿಳೆಯರ ಶೌಚಾಲಯದಲ್ಲಿ ಬೆದರಿಕೆ ಪತ್ರ ಪತ್ತೆ!ಶೇ.98.49ರಷ್ಟು ಗೃಹ ಜ್ಯೋತಿ ಸಮೀಕ್ಷೆ ಪೂರ್ಣ: ಅ.31ಕ್ಕೆ ಮುಕ್ತಾಯ, ಗಡುವು ವಿಸ್ತರಣೆ ಇಲ್ಲ'ಗ್ಲೋಬಲ್ ಇನ್ವೆಸ್ಟರ್ಸ್ ಮೀಟ್ 2027' ನಲ್ಲಿ ಭಾಗವಹಿಸಿ: ಪೋಲೆಂಡ್ ಗೆ ಸಿಎಂ ಡಿ ಕೆ ಶಿವಕುಮಾರ್ ಆಹ್ವಾನಶಿವಮೊಗ್ಗ ದಸರಾ ಆನೆ ಘಟನೆ: ವೈಜ್ಞಾನಿಕ ವರದಿ ಬಳಿಕ ಮುಂದಿನ ಕ್ರಮ: ಸಚಿವ ಮಧು ಬಂಗಾರಪ್ಪಬೆಂಗಳೂರಲ್ಲಿ ಕಲಾಸಾಗರ ಉತ್ಸವ: 'ಚಂದ್ರಗುತ್ತಿಯ ಚೆಲುವಾಂಬೆ' ಆಡಿಯೋ ಬಿಡುಗಡೆ!ಭಾರತ-ಚೀನಾ ಗಡಿಯಲ್ಲಿ ಉದ್ವಿಗ್ನತೆ: ‘ಶೌರ್ಯ’ ಕಮಾಂಡೋಗಳನ್ನು ನಿಯೋಜಿಸಲು ಕೇಂದ್ರದ ಸಿದ್ಧತೆ!ನಿಗಮ-ಮಂಡಳಿ ಸ್ಥಾನ ನಿರೀಕ್ಷೆಯಲ್ಲಿದ್ದವರಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಗುಡ್ ನ್ಯೂಸ್