ಬೆಂಗಳೂರು : ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿ ತೆರಳುತ್ತಿದ್ದ ದಂಪತಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ನಾಗಸಂದ್ರ ಸಮೀಪದ ಸ್ಟ್ರೈರ್ ಹೆದ್ದಾರಿಯಲ್ಲಿ ಈ ಒಂದು ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ರೇಣುಕಾ (35) ಮುನಿರಾಜು (40) ದಂಪತಿಗಳು ಎಂದು ತಿಳಿದುಬಂದಿದೆ.
ದಂಪತಿಗಳು ದೇವನಹಳ್ಳಿಯಲ್ಲಿ ವಾಸವಾಗಿದ್ದರು ತವರು ಮನೆ ಅಂಬಲಗೆರೆಗೆ ಹೋಗಿ ಬೈಕ್ ನಲ್ಲಿ ದಂಪತಿಗಳು ವಾಪಸ್ ಆಗುತ್ತಿರುವ ಸಂದರ್ಭದಲ್ಲಿ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಪತ್ನಿ ರೇಣುಕಾ ಸ್ಥಳದಲ್ಲಿ ಸಾವನ್ನಪ್ಪಿದ್ದು ಇನ್ನೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಪತಿ ಮುನಿರಾಜು ಸಾವನಪ್ಪಿದ್ದಾರೆ. ದೊಡ್ಡಬಳ್ಳಾಪುರದ ಶವಾಗಾರಕ್ಕೆ ಮೃತದೇಹಗಳನ್ನು ರವಾನಿಸಲಾಗಿದೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.