ಬೆಂಗಳೂರು : ಬೆಂಗಳೂರಿನ ಆರ್.ಆರ್. ನಗರದ ಪಟ್ಟಣಗೆರೆ ಬಳಿಯ ಅಂಗಡಿಯೊಂದರಲ್ಲಿ ಅನಿರೀಕ್ಷಿತವಾಗಿ ಸಿಲಿಂಡರ್ ಸ್ಫೋಟಗೊಂಡಿರುವ ದಾರುಣ ಘಟನೆ ವರದಿಯಾಗಿದೆ. ಈ ಭೀಕರ ದುರ್ಘಟನೆಯಲ್ಲಿ ಲಕ್ಷ್ಮಮ್ಮ ಮತ್ತು 9 ವರ್ಷದ ಬಾಲಕ ಸೇರಿದಂತೆ ಮೂವರಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗೆ ದಾಖಲಿಸಿ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ.
ಘಟನಾ ಸ್ಥಳಕ್ಕೆ ಆರ್.ಆರ್. ನಗರ ಠಾಣೆಯ ಪೊಲೀಸರು ಹಾಗೂ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಸಿಲಿಂಡರ್ ಸ್ಫೋಟಕ್ಕೆ ನಿಖರವಾದ ಕಾರಣವೇನು ಎಂಬ ಬಗ್ಗೆ ತನಿಖೆ ಮುಂದುವರಿದಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಸಹ ಸ್ಥಳದಲ್ಲಿದ್ದು ಸುರಕ್ಷತಾ ಕ್ರಮಗಳನ್ನು ಕೈಗೊಂಡಿದ್ದಾರೆ.