LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ತುಳಜಾಪುರ ಭವಾನಿ ದರ್ಶನಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ: ದಂಪತಿ ಸಾವು, ಮಗ-ಸೊಸೆ ಪ್ರಾಣಾಪಾಯದಿಂದ ಪಾರು!

ಬೀದರ್ : ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಮೂಡಬಿ ಕ್ರಾಸ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ತೆಲಂಗಾಣ ಮೂಲದ ದಂಪತಿಗಳು ಸ್ಥಳದಲ್ಲೇ ಸಾವನಪ್ಪಿರುವ ದಾರುಣ ಘಟನೆ ವರದಿಯಾಗಿದೆ. ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ನಾರಾಯಣಖೇಡ್ ಮೂಲದ ಶಿವಕುಮಾರ್ ಸಂಗಯ್ಯ (58) ಹಾಗೂ ಅವರ ಪತ್ನಿ ಸಂಗಮ್ಮ (50) ಮೃತ ದುರ್ದೈವಿಗಳಾಗಿದ್ದಾರೆ. ಈ ಕುಟುಂಬವು ತಮ್ಮ ಇಬ್ಬರು ಪುತ್ರರು, ಸೊಸೆ ಹಾಗೂ ಮೊಮ್ಮಗನೊಂದಿಗೆ ಕಾರಿನಲ್ಲಿ ಮಹಾರಾಷ್ಟ್ರದ ತುಳಜಾಪುರದ ಅಂಬಾಭವಾನಿ ದರ್ಶನಕ್ಕೆ ಹೊರಟಿದ್ದ ವೇಳೆ ಈ ಅಪಘಾತ ಸಂಭವಿಸಿದೆ.

ಮೂಡಬಿ ಕ್ರಾಸ್ ಬಳಿ ಬರುತ್ತಿದ್ದಂತೆ ಕಾರಿಗೆ ಸಾರಿಗೆ ಬಸ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ದಂಪತಿಗಳು ಸ್ಥಳದಲ್ಲೇ ಪ್ರಾಣಬಿಟ್ಟಿದ್ದಾರೆ. ಅಪಘಾತದ ತೀವ್ರತೆಗೆ ಕಾರಿನಲ್ಲಿದ್ದ ಇತರ ನಾಲ್ವರಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ. ಸ್ಥಳದಲ್ಲಿದ್ದವರು ಗಾಯಾಳುಗಳಿಗೆ ಪ್ರಥಮ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ತೆಲಂಗಾಣದ ಸಂಗಾರೆಡ್ಡಿ ಆಸ್ಪತ್ರೆಗೆ ರವಾನಿಸಿದ್ದಾರೆ. ಘಟನೆಯ ಸುದ್ದಿ ತಿಳಿದ ಕೂಡಲೇ ಶಾಸಕ ಶರಣು ಸಲಾರ್ ಅವರು ಆಸ್ಪತ್ರೆಗೆ ಭೇಟಿ ನೀಡಿ, ಗಾಯಾಳುಗಳ ಆರೋಗ್ಯ ವಿಚಾರಿಸಿ ಸಾಂತ್ವನ ಹೇಳಿದ್ದಾರೆ. ಈ ಸಂಬಂಧ ಬಸವಕಲ್ಯಾಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಕ್ಲ್ಯಾಂಡ್ ಆಯ್ತು, ಈಗ ವೆಲ್ಲಿಂಗ್ಟನ್‌ನಲ್ಲೂ ವರುಣನದ್ದೇ ಆರ್ಭಟ: ಎರಡನೇ ಏಕದಿನ ಪಂದ್ಯಕ್ಕೆ ಕಂಟಕವಾದ ಹವಾಮಾನ!ಸೇವೆಯಲ್ಲಿರುವ ಅಗ್ನಿವೀರರಿಗೆ ಮಾತ್ರ ಹೊಸ ಬದಲಾವಣೆ‘ರಾಮಾಯಣ’ ಸಿನಿಮಾ ನೋಡಿ ಭಾವುಕರಾದ ಅನುಪಮ್ ಖೇರ್: ಭಾರತೀಯ ಚಿತ್ರರಂಗದ ಸರ್ವಶ್ರೇಷ್ಠ ಸಿನಿಮಾ ಎಂದ ನಟ!ಮುಂಬೈ ಅಂತರ ಶಾಲಾ ಬಾಸ್ಕೆಟ್‌ಬಾಲ್ ಧಮಾಕಾ: ಡಾನ್ ಬೊಸ್ಕೊ ಮಣಿಸಿ ಟ್ರೋಫಿ ಎತ್ತಿಹಿಡಿದ ಅಂಡೇರಿಯಾ ಎಂಪಿಎಸ್!Motorola Signature 27 Snapdragon 8 Elite Extreme Gen 6 ಮತ್ತು 200MP ಟೆಲಿಫೋಟೋ ಲೆನ್ಸ್‌ನೊಂದಿಗೆ ಅನಾವರಣಬಾಲಿವುಡ್ ಅಂಗಳದಲ್ಲಿ ಹೊಸ ಲವ್ ಸ್ಟೋರಿ: ಗೆಳತಿ ಜೊತೆ ಮನೀಶ್ ಮಲ್ಹೋತ್ರಾ ಪಾರ್ಟಿಯಲ್ಲಿ ಮಾಧುರಿ ದೀಕ್ಷಿತ್ ಮಗ!ಬ್ಯಾಂಕ್ ಲಾಕರ್’ ನಲ್ಲಿ ಇಟ್ಟಿದ್ದ ₹47 ಲಕ್ಷದ ಚಿನ್ನಾಭರಣ ನಾಪತ್ತೆ! ಮಹಿಳೆಯ ಹೋರಾಟಕ್ಕೆ ಕೊನೆಗೂ ಸಿಕ್ತು ಜಯ!ರಾಮಾಯಣ’ದಲ್ಲಿ ರಾಮನಾಗಿ ರಣಬೀರ್, ರಾವಣನಾಗಿ ಯಶ್; ಇಬ್ಬರಲ್ಲಿ ಶ್ರೀಮಂತ ನಟ ಯಾರು?ಕೈ ಕೈ ಹಿಡಿದು ಬಂದ ಐಶ್ವರ್ಯಾ ರೈ–ಅಭಿಷೇಕ್ ಜೋಡಿ; ರೊಮ್ಯಾಂಟಿಕ್ ಕ್ಷಣ ವೈರಲ್! ವಿಚ್ಛೇದನದ ವದಂತಿಗಳಿಗೆ ಬ್ರೇಕ್?ಆಸೀಸ್ ಕ್ರಿಕೆಟರ್ ಗೆ ಕೊಕೇನ್ ಶಾಕ್: ತಪ್ಪು ಒಪ್ಪಿಕೊಂಡು ನಿಷೇಧ ಪೂರ್ಣಗೊಳಿಸಿದ ಕ್ರಿಸ್ ಲಿನ್!