LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಆಸ್ಪತ್ರೆಗಳಲ್ಲಿ ಸಿಂಗಲ್-ಯೂಸ್ ವೈದ್ಯಕೀಯ ಉಪಕರಣಗಳ ಮರುಬಳಕೆ ಸಂಪೂರ್ಣ ನಿಷೇಧ: ನಿಯಮ ಮೀರಿದ ಆಸ್ಪತ್ರೆಗಳ ಲೈಸನ್ಸ್ ರದ್ದು: ಕೇಂದ್ರ ಆರೋಗ್ಯ ಸಚಿವಾಲಯ ಆದೇಶ

ನವದೆಹಲಿ: ಕೇಂದ್ರ ಆರೋಗ್ಯ ಸಚಿವಾಲಯ ದೇಶಾದ್ಯಂತ ಎಲ್ಲ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಿಗೆ ಮಹತ್ವದ ಆದೇಶ ಹೊರಡಿಸಿದೆ. ಆಸ್ಪತ್ರೆಗಳಲ್ಲಿ ಸಿಂಗಲ್-ಯೂಸ್ ವೈದ್ಯಕೀಯ ಉಪಕರಣಗಳ ಮರುಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಿದೆ.

ಸರ್ಕಾರಿ, ಖಾಸಗಿ ಮತ್ತು ಕಾರ್ಪೊರೇಟ್ ಆಸ್ಪತ್ರೆಗಳಲ್ಲಿ ಏಕ-ಬಳಕೆಯ ವೈದ್ಯಕೀಯ ಸಾಧನಗಳು ಮತ್ತು ಬಿಸಾಡಬಹುದಾದ ಶಸ್ತ್ರಚಿಕಿತ್ಸಾ ಪರಿಕರಗಳನ್ನು ಕ್ರಿಮಿನಾಶಕಗೊಳಿಸಿ ಮರುಬಳಕೆ ಮಾಡುವುದನ್ನು ಕೇಂದ್ರ ಸರ್ಕಾರ ನಿಷೇಧಿಸಿದೆ. ರೋಗಿಗಳಿಗೆ ಮಾರಣಾಂತಿಕ ಸೋಂಕುಗಳು ಹರಡುವುದನ್ನು ತಡೆಯುವುದು ಹಾಗೂ ಸಾಧನ ವೈಫಲ್ಯ, ಆರ್ಥಿಕ ವಂಚನೆಯಂತಹ ಅಪಾಯಗಳನ್ನು ನಿವಾರಿಸುವುದು ಇದರ ಮುಖ್ಯ ಉದ್ದೇಶ. ನಿಯಮ ಮೀರಿದ ಆಸ್ಪತ್ರೆಗಳ ವಿರುದ್ಧ ಪರವಾನಗಿ ರದ್ದುಪಡಿಸುವುದು ಸೇರಿದಂತೆ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಕೇಂದ್ರ ಸರ್ಕಾರ ಸೂಚಿಸಿದೆ.

ಒಮ್ಮೆ ಮಾತ್ರ ಬಳಸಬೇಕಾದ ಅತ್ಯಂತ ಸೂಕ್ಷ್ಮ ವೈದ್ಯಕೀಯ ಉಪಕರಣಗಳನ್ನು ಪದೇ ಪದೇ ಬಳಸುವುದರಿಂದ ರೋಗಿಗಳಿಗೆ ಮಾರಣಾಂತಿಕ ಸೋಂಕುಗಳು ಹರಡುವ ಅಪಾಯವಿದೆ ಎಂದು ಕೇಂದ್ರ ಆರೋಗ್ಯ ಸೇವೆಗಳ ಮಹಾನಿರ್ದೇಶನಾಲಯ (DGHS) ಗಂಭೀರ ಎಚ್ಚರಿಕೆ ನೀಡಿದೆ.

ಡಿಜಿಎಚ್​ಎಸ್ ಮುಖ್ಯಸ್ಥ ಡಾ. ಲವನೀಶ್ ಜಿ. ಕೃಷ್ಣ ಅವರು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಆರೋಗ್ಯ ಇಲಾಖೆ ಕಾರ್ಯದರ್ಶಿಗಳು ಹಾಗೂ ಡ್ರಗ್ ಕಂಟ್ರೋಲರ್‌ಗಳಿಗೆ ಅಕ್ಟೋಬರ್ 16 ರಂದು ಈ ಸಂಬಂಧ ಕಟ್ಟುನಿಟ್ಟಿನ ಸುತ್ತೋಲೆ ಕಳುಹಿಸಿದ್ದಾರೆ.

ಕೇಂದ್ರ ಸರ್ಕಾರದ ತಪಾಸಣೆಯಲ್ಲಿ ಅತ್ಯಂತ ನಿರ್ಣಾಯಕ ವಿಭಾಗಗಳಲ್ಲೇ ಇಂತಹ ಅಪಾಯಕಾರಿ ಸಂಗತಿ ನಡೆಯುತ್ತಿರುವುದು ಬೆಳಕಿಗೆ ಬಂದಿದೆ.

ಹೃದಯಶಾಸ್ತ್ರ ಆಂಜಿಯೋಗ್ರಫಿ ಮತ್ತು ಆಂಜಿಯೋಪ್ಲ್ಯಾಸ್ಟಿ ಚಿಕಿತ್ಸೆಗಳಲ್ಲಿ ಬಳಸಲಾಗುವ ಅತ್ಯಂತ ಸೂಕ್ಷ್ಮವಾದ ಕ್ಯಾತಿಟರ್‌ಗಳು (Catheters) ಮತ್ತು ಗೈಡ್‌ವೈರ್‌ಗಳು . ಕಿಡ್ನಿ ವೈಫಲ್ಯದ ರೋಗಿಗಳಿಗೆ ಡಯಾಲಿಸಿಸ್ ಮಾಡುವಾಗ ಬಳಸುವ ಡಯಾಲಿಸರ್ ಮತ್ತು ಸಂಬಂಧಿತ ಟ್ಯೂಬ್‌ಗಳು.

ಇತರ ಶಸ್ತ್ರಚಿಕಿತ್ಸೆಗಳು: ನ್ಯೂರೋಸರ್ಜರಿ, ಆಂಕೊಲಾಜಿ (ಕ್ಯಾನ್ಸರ್), ಹೃದಯ ಮತ್ತು ನಾಳೀಯ ಶಸ್ತ್ರಚಿಕಿತ್ಸೆಗಳಲ್ಲಿ (CTVS) ಬಳಸುವ ಸರ್ಜಿಕಲ್ ಉಪಕರಣಗಳು ಹಾಗೂ ಸಾಮಾನ್ಯ ಸಿರಿಂಜ್‌ಗಳು,ಸೂಜಿಗಳು ಮರುಬಳಕೆಯಗೌತ್ತಿರುವುದು ಗಮನಕ್ಕೆ ಬಂದಿತ್ತು.

ಏಕ-ಬಳಕೆಯ ಸಾಧನಗಳನ್ನು ಎಷ್ಟೇ ಕ್ಲೀನ್ ಮಾಡಿದರೂ ಅವುಗಳಲ್ಲಿ ಸೂಕ್ಷ್ಮ ಬ್ಯಾಕ್ಟೀರಿಯಾ ಅಥವಾ ವೈರಸ್‌ಗಳು ಉಳಿದುಕೊಂಡು ಹೆಪಟೈಟಿಸ್ ಬಿ, ಸಿ ಅಥವಾ ಎಚ್‌ಐವಿಯಂತಹ ಗಂಭೀರ ರಕ್ತ ಸಂಬಂಧಿತ ರೋಗಗಳು ಒಬ್ಬರಿಂದ ಒಬ್ಬರಿಗೆ ಹರಡುವ ಸಾಧ್ಯತೆ ಹೆಚ್ಚಿರುತ್ತದೆ.

ಈ ಉಪಕರಣಗಳನ್ನು ಕೇವಲ ಒಂದು ಬಾರಿ ಮಾತ್ರ ಬಳಸಲು ವಿನ್ಯಾಸಗೊಳಿಸಲಾಗಿರುತ್ತದೆ. ಇವುಗಳನ್ನು ಪುನಃ ಬಿಸಿಮಾಡಿ ಕ್ರಿಮಿನಾಶಕಗೊಳಿಸಿದಾಗ ಅವುಗಳ ರಚನೆ ದುರ್ಬಲಗೊಂಡು ಶಸ್ತ್ರಚಿಕಿತ್ಸೆಯ ಸಮಯದಲ್ಲಿ ಮುರಿದುಬೀಳುವ ಅಥವಾ ಸರಿಯಾಗಿ ಕೆಲಸ ಮಾಡದಿರುವ ಅಪಾಯವಿರುತ್ತದೆ.

ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮದ ಎಚ್ಚರಿಕೆಯನ್ನು ನೀಡಲಾಗಿದೆ. ಈ ರೀತಿಯ ಮರುಬಳಕೆಯು ಈ ಕೆಳಗಿನ ಪ್ರಮುಖ ಕಾನೂನುಗಳ ನೇರ ಉಲ್ಲಂಘನೆಯಾಗಿದೆ ಎಂದು ಡಿಜಿಎಚ್‌ಎಸ್ ಸ್ಪಷ್ಟಪಡಿಸಿದೆ:

ಔಷಧಗಳು ಮತ್ತು ಸೌಂದರ್ಯವರ್ಧಕಗಳ ಕಾಯ್ದೆ, 1940 (Drugs and Cosmetics Act)

ವೈದ್ಯಕೀಯ ಸಾಧನಗಳ ನಿಯಮಗಳು, 2017 (Medical Devices Rules)

ಕ್ಲಿನಿಕಲ್ ಸಂಸ್ಥೆಗಳ ಕಾಯ್ದೆ, 2010 (Clinical Establishments Act)

ಜೈವಿಕ ವೈದ್ಯಕೀಯ ತ್ಯಾಜ್ಯ ನಿರ್ವಹಣಾ ನಿಯಮಗಳು (Biomedical Waste Management Rules) ಅಡಿಯಲ್ಲಿ ಕಠಿಣ ಕಾಅನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಲಾಗಿದೆ. ಭಾರತೀಯ ವೈದ್ಯಕೀಯ ಸಾಧನ ಉದ್ಯಮ ಸಂಘಟನೆ ಕೇಂದ್ರದ ಈ ನಿರ್ಧಾರವನ್ನು ಸ್ವಾಗತಿಸಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಕ್ಲ್ಯಾಂಡ್ ಆಯ್ತು, ಈಗ ವೆಲ್ಲಿಂಗ್ಟನ್‌ನಲ್ಲೂ ವರುಣನದ್ದೇ ಆರ್ಭಟ: ಎರಡನೇ ಏಕದಿನ ಪಂದ್ಯಕ್ಕೆ ಕಂಟಕವಾದ ಹವಾಮಾನ!ಸೇವೆಯಲ್ಲಿರುವ ಅಗ್ನಿವೀರರಿಗೆ ಮಾತ್ರ ಹೊಸ ಬದಲಾವಣೆ‘ರಾಮಾಯಣ’ ಸಿನಿಮಾ ನೋಡಿ ಭಾವುಕರಾದ ಅನುಪಮ್ ಖೇರ್: ಭಾರತೀಯ ಚಿತ್ರರಂಗದ ಸರ್ವಶ್ರೇಷ್ಠ ಸಿನಿಮಾ ಎಂದ ನಟ!ಮುಂಬೈ ಅಂತರ ಶಾಲಾ ಬಾಸ್ಕೆಟ್‌ಬಾಲ್ ಧಮಾಕಾ: ಡಾನ್ ಬೊಸ್ಕೊ ಮಣಿಸಿ ಟ್ರೋಫಿ ಎತ್ತಿಹಿಡಿದ ಅಂಡೇರಿಯಾ ಎಂಪಿಎಸ್!Motorola Signature 27 Snapdragon 8 Elite Extreme Gen 6 ಮತ್ತು 200MP ಟೆಲಿಫೋಟೋ ಲೆನ್ಸ್‌ನೊಂದಿಗೆ ಅನಾವರಣಬಾಲಿವುಡ್ ಅಂಗಳದಲ್ಲಿ ಹೊಸ ಲವ್ ಸ್ಟೋರಿ: ಗೆಳತಿ ಜೊತೆ ಮನೀಶ್ ಮಲ್ಹೋತ್ರಾ ಪಾರ್ಟಿಯಲ್ಲಿ ಮಾಧುರಿ ದೀಕ್ಷಿತ್ ಮಗ!ಬ್ಯಾಂಕ್ ಲಾಕರ್’ ನಲ್ಲಿ ಇಟ್ಟಿದ್ದ ₹47 ಲಕ್ಷದ ಚಿನ್ನಾಭರಣ ನಾಪತ್ತೆ! ಮಹಿಳೆಯ ಹೋರಾಟಕ್ಕೆ ಕೊನೆಗೂ ಸಿಕ್ತು ಜಯ!ರಾಮಾಯಣ’ದಲ್ಲಿ ರಾಮನಾಗಿ ರಣಬೀರ್, ರಾವಣನಾಗಿ ಯಶ್; ಇಬ್ಬರಲ್ಲಿ ಶ್ರೀಮಂತ ನಟ ಯಾರು?ಕೈ ಕೈ ಹಿಡಿದು ಬಂದ ಐಶ್ವರ್ಯಾ ರೈ–ಅಭಿಷೇಕ್ ಜೋಡಿ; ರೊಮ್ಯಾಂಟಿಕ್ ಕ್ಷಣ ವೈರಲ್! ವಿಚ್ಛೇದನದ ವದಂತಿಗಳಿಗೆ ಬ್ರೇಕ್?ಆಸೀಸ್ ಕ್ರಿಕೆಟರ್ ಗೆ ಕೊಕೇನ್ ಶಾಕ್: ತಪ್ಪು ಒಪ್ಪಿಕೊಂಡು ನಿಷೇಧ ಪೂರ್ಣಗೊಳಿಸಿದ ಕ್ರಿಸ್ ಲಿನ್!