ಚಿಕ್ಕಬಳ್ಳಾಪುರ : ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಚನ್ನರಾಯಪಲ್ಲಿ ಗ್ರಾಮದಲ್ಲಿ ನಡೆದ ಭೀಕರ ರಸ್ತೆ ಅಪಘಾತವೊಂದರಲ್ಲಿ ಸ್ಕೂಟಿಯಲ್ಲಿ ತೆರಳುತ್ತಿದ್ದ ಇಬ್ಬರು ಬಾಲಕರು ಲಾರಿ ಹರಿದು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ. ಚನ್ನರಾಯನಪಲ್ಲಿಯ ಅಂಜಿ ಹಾಗೂ ಗೌರಮ್ಮ ದಂಪತಿಯ ಮಗ ವಿಷ್ಣು (16) ಮತ್ತು ಪಟ್ರೆವಾರಪಲ್ಲಿಯ ಶ್ರೀನಾಥ ಹಾಗೂ ಪದ್ಮ ದಂಪತಿಯ ಮಗ ವಿಜಯ ರಾಜಕುಮಾರ (4) ಮೃತಪಟ್ಟ ದುರ್ದೈವಿಗಳಾಗಿದ್ದಾರೆ.
ಬಾಲಕರು ಸ್ಕೂಟಿಯಲ್ಲಿ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದ್ದು, ಲಾರಿ ಹರಿದ ರಭಸಕ್ಕೆ ಇಬ್ಬರೂ ಸ್ಥಳದಲ್ಲೇ ಪ್ರಾಣಬಿಟ್ಟಿದ್ದಾರೆ. ಈ ಘಟನೆಯಿಂದಾಗಿ ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದ್ದು, ಗ್ರಾಮದಲ್ಲಿ ತೀವ್ರ ಶೋಕಮೂಡಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.