LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಗ್ರಾಮೀಣ ಕ್ರೀಡೆಗಳು ನಮ್ಮ ಭಾರತೀಯ ಸಂಸ್ಕೃತಿ ಮತ್ತು ಪರಂಪರೆಯ ಜೀವನಾಡಿ: ಡಾ.ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಬಣ್ಣನೆ

ಮಂಡ್ಯ :  ಗ್ರಾಮೀಣ ಕ್ರೀಡೆಗಳು ನಮ್ಮ ಭಾರತೀಯ ಸಂಸ್ಕೃತಿ ಮತ್ತು ಪರಂಪರೆಯನ್ನು ಜೀವನಾಡಿಯಾಗಿದ್ದು, ಇವು ಕೇವಲ ಮನರಂಜನೆಯ ಸಾಧನಗಳಲ್ಲ. ಬದಲಿಗೆ ನಮ್ಮ ಹಿರಿಯರಿಂದ ಬಂದ ಅಮೂಲ್ಯ ಕೊಡುಗೆಗಳಾಗಿವೆ ಎಂದು ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಬಣ್ಣಿಸಿದರು.

ಮದ್ದೂರು ನಗರದ ತಾಲೂಕು ಕ್ರೀಡಾಂಗಣದ ಆವರಣದಲ್ಲಿ ಸ್ವಾಮಿ ವಿವೇಕಾನಂದ ಯುವ ಸಾಂಸ್ಕೃತಿಕ ಮತ್ತು ಕ್ರೀಡಾ ಸಂಘ, ಮನುಜ ಮತ ಸೇವಾ ಟ್ರಸ್ಟ್ ಹಾಗೂ ಕರ್ನಾಟಕ ಜಾನಪದ ಪರಿಷತ್ ಮದ್ದೂರು ಘಟಕದ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಲಗೋರಿ ಪಂದ್ಯಾವಳಿ-2026ಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಆಧುನಿಕತೆಯ ಭರಾಟೆಯಲ್ಲಿ ಇಂದಿನ ಯುವ ಜನತೆ ಮೊಬೈಲ್ ಮತ್ತು ವಿಡಿಯೋ ಗೇಮ್ಗಳತ್ತ ವಾಲುತ್ತಿರುವುದರಿಂದ ಅಪ್ಪಟ ಗ್ರಾಮೀಣ ಕ್ರೀಡೆಗಳು ನಶಿಸುವ ಹಂತ ತಲುಪುತ್ತಿರುವುದು ಕಳವಳಕಾರಿ ಸಂಗತಿ ಎಂದು ಬೇಸರ ವ್ಯಕ್ತಪಡಿಸಿದರು.

ಹಿಂದೆ ಗ್ರಾಮೀಣ ಭಾಗದಲ್ಲಿ ಮರಕೋತಿ ಆಟ, ಚೌಕಾಬಾರ, ಗಿಲ್ಲಿ-ದಾಂಡು, ಬುಗುರಿ, ಕುಂಟೆಬೆಲ್ಲೆ, ಅಳ್ಳಿಗುಳ್ಳಿ, ಮಲ್ಲಕಂಬ, ಕೆಸರಗದ್ದೆ ಓಟ ಮತ್ತು ಕಲ್ಲಾಟ ಸೇರಿದಂತೆ ಹಲವು ಸಾಂಪ್ರದಾಯಿಕ ಆಟಗಳು ಜನಪ್ರಿಯವಾಗಿದ್ದವು. ಈ ಗ್ರಾಮೀಣ ಕೀಡೆಗಳಿಗೆ ಹೆಚ್ಚಿನ ಹಣ ವ್ಯಯಿಸುವ ಅಗತ್ಯವಿಲ್ಲ. ಸ್ಥಳಿಯವಾಗಿ ಸಿಗುವ ವಸ್ತುಗಳಿಂದಲ್ಲೇ ಈ ಆಟಗಳನ್ನು ಆಡಬಹುದು.
ಗ್ರಾಮೀಣ ಕ್ರೀಡೆಗಳನ್ನು ಆಡುವುದರಿಂದ ಮಾನಸಿಕವಾಗಿ ದೈಹಿಕವಾಗಿ ಸದೃಢರಾಗುವ ಜತೆಗೆ ಮನಸ್ಸಿಗೆ ನೆಮ್ಮದಿ ಮತ್ತು ಉಲ್ಲಾಸ ನೀಡುತ್ತದೆ ಎಂದರು.

ಜಾತಿ ಮತಗಳ ಭೇಧವಿಲ್ಲದೆ ಗ್ರಾಮದ ಎಲ್ಲರೂ ಒಟ್ಟಾಗಿ ಸೇರಿ ಆಡುವುದರಿಂದ ಪರಸ್ಪರ ಪ್ರೀತಿ, ವಿಶ್ವಾಸ ಮತ್ತು ತಂಡದ ಮನೋಭಾವ ವೃದ್ಧಿಸುತ್ತದೆ ಎಂದರು.
ವಿದ್ಯಾರ್ಥಿಗಳು ಹಾಗೂ ಯುವಜನರು ಮೊಬೈಲ್, ಕಂಪ್ಯೂಟರ್ ಗಳಿಗೆ ಮಾರು ಹೋಗದೆ ಗ್ರಾಮೀಣ ಕ್ರೀಡೆಗಳನ್ನು ಉಳಿಸಿ ಬೆಳಸಲು ಮುಂದಾಗಬೇಕು. ಈ ನಿಟ್ಟಿನಲ್ಲಿ ಸ್ವಾಮಿ ವಿವೇಕಾನಂದ ಯುವ ಸಾಂಸ್ಕೃತಿಕ ಮತ್ತು ಕ್ರೀಡಾ ಸಂಘ, ಮನುಜ ಮತ ಸೇವಾ ಟ್ರಸ್ಟ್ ಹಾಗೂ ಕರ್ನಾಟಕ ಜಾನಪದ ಪರಿಷತ್ ಮುಂದಾಗಿರುವುದು ಪ್ರಶಂಸನೀಯ ಸಂಗತಿ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಪಂದ್ಯಾವಳಿಯಲ್ಲಿ 35 ವರ್ಷ ಮೇಲ್ಪಟ್ಟವರ ವಿಭಾಗದ ಎಂಟು ತಂಡಗಳು ಹಾಗೂ ಪ್ರೌಢಶಾಲಾ ವಿಭಾಗದ ಎಂಟು ತಂಡಗಳು ಸೇರಿದಂತೆ ಒಟ್ಟು 16 ತಂಡಗಳಿಂದ ಸುಮಾರು 150 ಕ್ಕೂ ಹೆಚ್ಚು ಮಂದಿ ಬಾಗವಹಿಸಿದ್ದರು.

ಸ್ವಾಮಿ ವಿವೇಕಾನಂದ ಯುವ ಸಾಂಸ್ಕೃತಿಕ ಮತ್ತು ಕ್ರೀಡಾ ಸಂಘದ ಅಧ್ಯಕ್ಷ ಎನ್.ಪ್ರಸನ್ನ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕುಮಾರ್ ಕೊಪ್ಪ, ತಾಲೂಕು ಪಂಚಾಯಿತಿ ನರೇಗಾ ಸಹಾಯಕ ನಿರ್ದೇಶಕ ಮಂಜುನಾಥ್, ಜಿಲ್ಲಾ ಕನ್ನಡ ಜಾನಪದ ಪರಿಷತ್ ಅಧ್ಯಕ್ಷ ಡಿ.ಪಿ. ಸ್ವಾಮಿ, ಸುಮುಖ ಸೇವಾ ಟ್ರಸ್ಟ್ ಉಪಾಧ್ಯಕ್ಷ ಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಧನಂಜಯ್, ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವನಂಜಯ್ಯ, ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀಕಂಠ, ನಂದೀಶ್, ಮೋಹನ್, ಸುಧೀರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಮಾಯಣ: ಯಶ್ ಅವರ ರಾವಣ ಹಾಗೂ ರಣಬೀರ್ ಕಪೂರ್ ಅವರ ರಾಮನ ಪಾತ್ರಗಳು ಭಾರತೀಯ ಚಿತ್ರರಂಗದಲ್ಲಿಯೇ ಅತ್ಯಂತ ದುಬಾರಿ ಪಾತ್ರಗಳೇ?8 ಮಂದಿ ಮೃತಪಟ್ಟ ಜೋರ್ಡಾನ್ ಚರ್ಚ್ ಗುಂಡಿನ ದಾಳಿಗೆ ಭಾರತ ತೀವ್ರ ಖಂಡನೆ, ಉಗ್ರವಾದದ ವಿರುದ್ಧ ಹೋರಾಟಕ್ಕೆ ಬದ್ಧತೆ ಪುನರುಚ್ಚಾರಶಾಂತಿ ಭಂಗ ಪ್ರಕರಣದಲ್ಲಿ AISA ಅಧ್ಯಕ್ಷೆ ನೇಹಾ ಬೋರಾಗೆ ಹೈಕೋರ್ಟ್ ನಲ್ಲಿ ಹಿನ್ನಡೆ: ಅ.29ಕ್ಕೆ ಮುಂದಿನ ವಿಚಾರಣೆಶೀಗಿ ಹುಣ್ಣಿಮೆಯಂದು ಇವುಗಳಲ್ಲಿ ಒಂದನ್ನು ಖರೀದಿಸಿ ಮನೆಯಲ್ಲಿಟ್ಟರೆ ಬಡತನ ನಿವಾರಣೆಅರುಣಾಚಲದ ಅಸಾಫಿಲಾ, ಲಾಂಗ್ಜು ಗಡಿ ಪ್ರದೇಶಗಳು ಸೂಕ್ಷ್ಮ; ಪರಿಸ್ಥಿತಿ ನಿಯಂತ್ರಣದಲ್ಲಿದೆ: ರಕ್ಷಣಾ ಮೂಲಗಳುಕೇರಳ ಲೋಕಭವನದ ಅಡುಗೆಮನೆಯಲ್ಲಿ ಸಸ್ಯಾಹಾರಿ ಆಹಾರಕ್ಕೆ ಮಾತ್ರ ಅವಕಾಶ? ರಾಜ್ಯಪಾಲರ ಆದೇಶ ವಿವಾದಕ್ಕೆ ಕಾರಣ10 ಸಾವಿರ ಕೋಟಿ ನಷ್ಟ ಭೀತಿ: ನವೆಂಬರ್​ 1 ರಂದು ಘೋಷಿಸಿರುವ ಪ್ರತಿಭಟನೆ ಮುಂದೂಡುವಂತೆ ರಾಹುಲ್ ಗಾಂಧಿಗೆ ಪತ್ರ ಬರೆದ CTI2028ರ ವೇಳೆಗೆ ಭಾರತೀಯ ವಿನ್ಯಾಸದ ಸ್ವದೇಶಿ ಮೊಬೈಲ್ ಫೋನ್‌ಗಳು: ಅಶ್ವಿನಿ ವೈಷ್ಣವ್ ಭರವಸೆನಾಳೆ ಪರಮ್ ವಿಹಾರದಲ್ಲಿ ಶಾಸ್ತ್ರೀಯ ಸಂಗೀತ, ಭರತನಾಟ್ಯದ ಸೊಬಗು ಅನಾವರಣಗ್ರಾಮೀಣ ಕ್ರೀಡೆಗಳು ನಮ್ಮ ಭಾರತೀಯ ಸಂಸ್ಕೃತಿ ಮತ್ತು ಪರಂಪರೆಯ ಜೀವನಾಡಿ: ಡಾ.ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಬಣ್ಣನೆ