LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸಕಾಲದಲ್ಲಿ ಚಿಕಿತ್ಸೆ ದೊರೆಯದೇ ನರಳಿ ನರಳಿ ಪ್ರಾಣಬಿಟ್ಟ ಕಾಡುಕೋಣ

ಶಿವಮೊಗ್ಗ: ಮುಂಜಾನೇ ಆಹಾರ ಅರಸುತ್ತಾ ರಸ್ತೆಗೆ ಬಂದಿದ್ದಂತ ಕಾಡುಕೋಣಕ್ಕೆ ವಾಹನವೊಂದು ಡಿಕ್ಕಿಯಾಗಿದೆ. ಈ ಪರಿಣಾಮ ಕಾಡುಕೋಣದ ಕಾಲು ಮುರಿದು ಏಳಲು ಸಾಧ್ಯವಾಗದೇ ಕಾಸ್ಪಾಡಿಯ ಏರಿಯ ಬಳಿಯಲ್ಲಿ ಒದ್ದಾಡುತ್ತಿತ್ತು. ಈ ವಿಷಯ ಅರಣ್ಯ ಇಲಾಖೆಗೆ ತಿಳಿಸಿದರೂ ಸಕಾಲದಲ್ಲಿ ವೈದ್ಯರಿಂದ ಚಿಕಿತ್ಸೆ ದೊರೆಯದ ಪರಿಣಾಮ, ನರಳಿ ನರಳಿ ಸ್ಥಳದಲ್ಲೇ ಪ್ರಾಣಬಿಟ್ಟಿರುವಂತ ಘಟನೆ ಚೋರಡಿ ಅರಣ್ಯ ವ್ಯಾಪ್ತಿಯಲ್ಲಿ ನಡೆದಿದೆ.

ಶಿವಮೊಗ್ಗ ಜಿಲ್ಲೆಯ ಆನಂದಪುರದ ಚೋರಡಿ ವಲಯ ಅರಣ್ಯ ವ್ಯಾಪ್ತಿಯ ಕಾಸ್ಪಾಡಿ ಬಳಿಯಲ್ಲಿ ಕಾಡುಕೋಣವೊಂದಕ್ಕೆ ಮುಂಜಾನೆ ವಾಹನವೊಂದು ಡಿಕ್ಕಿಯಾಗಿದೆ. ಇದರಿಂದಾಗಿ ಕಾಡುಕೋಣದ ಕಾಲು ಮುರಿದಿವೆ. ಮುಂಜಾನೆ ನಡೆದಂತ ಈ ಘಟನೆಯಿಂದ ನಡೆದಾಡೋದಕ್ಕೂ ಸಾಧ್ಯವಾಗಿಲ್ಲ. ಸ್ಥಳೀಯರು ಕಾಡುಕೋಣದ ಸ್ಥಿತಿಯನ್ನು ಕಂಡು ಅರಣ್ಯ ಇಲಾಖೆಯವರಿಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ, ಪರಿಶೀಲನೆ

ಕೂಡಲೇ ಚೋರಡಿ ವಲಯ ಅರಣ್ಯಾಧಿಕಾರಿಗಳು, ಡಿಆರ್ ಎಫ್ ಓ ಸೇರಿದಂತೆ ಇತರೆ ಸಿಬ್ಬಂದಿ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಅಪರಿಚಿತ ವಾಹನ ಡಿಕ್ಕಿಯಿಂದ ಗಾಯಗೊಂಡಿದ್ದಂತ ಕಾಡುಕೋಣವನ್ನು ಆರೈಕೆ ಮಾಡಿದ್ದಾರೆ. ಜೊತೆಗೆ ತುರ್ತು ಚಿಕಿತ್ಸೆಯ ಅವಶ್ಯಕತೆ ಇದ್ದದ್ದನ್ನು ಮನಗಂಡು ಪಶುವೈದ್ಯರಿಗೆ ಮಾಹಿತಿ ನೀಡಿದ್ದಾರೆ.

ಪ್ರಾಣ ಬಿಡುವವರೆಗೂ ಸ್ಥಳಕ್ಕೆ ಬಾರದ ಪಶು ವೈದ್ಯ

ಅರಣ್ಯ ಇಲಾಖೆಯಿಂದ ಮುಂಜಾನೆ ಕಾಡು ಕೋಣಕ್ಕೆ ವಾಹನ ಡಿಕ್ಕಿಯಾಗಿ ಕಾಲು ಮುರಿತಕ್ಕೆ ಒಳಗಾದಂತ ಮಾಹಿತಿಯನ್ನು ಸಂಬಂಧ ಪಟ್ಟ ಪಶು ವೈದ್ಯರಿಗೆ ಮಾಹಿತಿ ನೀಡಿದ್ದಾರೆ. ಸಂಜೆಯವರೆಗೂ ಕಾದರೂ ಸ್ಥಳಕ್ಕೆ ಸಕಾಲಕ್ಕೆ ಪಶುವೈದ್ಯರು ಬಾರದ ಪರಿಣಾಮ ಕಾಡುಕೋಣ ನರಳಿ ನರಳಿ, ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಪ್ರಾಣಬಿಟ್ಟಿರುವುದಾಗಿ ಸಾರ್ವಜನಿಕರು ಆರೋಪಿಸಿದ್ದಾರೆ.

ಒಂದು ವೇಳೆ ಪಶು ವೈದ್ಯರು ಅರಣ್ಯ ಇಲಾಖೆಯಿಂದ ಮಾಹಿತಿ ನೀಡಿದ ತಕ್ಷಣ ಕಾಸ್ವಾಡಿಯ ಏರಿಯ ಮೇಲೆ ನರಳುತ್ತಿದ್ದ ಕಾಡು ಕೋಣದ ಬಳಿಗೆ ಆಗಮಿಸಿ, ಚಿಕಿತ್ಸೆ ನೀಡಿದ್ದರೇ, ಸಾವನ್ನಪ್ಪುತ್ತಿರಲಿಲ್ಲ. ಕಾಡುಕೋಣ ಸಾವಿಗೆ ಪಶು ವೈದ್ಯರ ನಿರ್ಲಕ್ಷ್ಯವೇ ಕಾರಣವಾಗಿದೆ. ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

ವರದಿ: ವಸಂತ ಬಿ ಈಶ್ವರಗೆರೆ

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಕ್ಲ್ಯಾಂಡ್ ಆಯ್ತು, ಈಗ ವೆಲ್ಲಿಂಗ್ಟನ್‌ನಲ್ಲೂ ವರುಣನದ್ದೇ ಆರ್ಭಟ: ಎರಡನೇ ಏಕದಿನ ಪಂದ್ಯಕ್ಕೆ ಕಂಟಕವಾದ ಹವಾಮಾನ!ಸೇವೆಯಲ್ಲಿರುವ ಅಗ್ನಿವೀರರಿಗೆ ಮಾತ್ರ ಹೊಸ ಬದಲಾವಣೆ‘ರಾಮಾಯಣ’ ಸಿನಿಮಾ ನೋಡಿ ಭಾವುಕರಾದ ಅನುಪಮ್ ಖೇರ್: ಭಾರತೀಯ ಚಿತ್ರರಂಗದ ಸರ್ವಶ್ರೇಷ್ಠ ಸಿನಿಮಾ ಎಂದ ನಟ!ಮುಂಬೈ ಅಂತರ ಶಾಲಾ ಬಾಸ್ಕೆಟ್‌ಬಾಲ್ ಧಮಾಕಾ: ಡಾನ್ ಬೊಸ್ಕೊ ಮಣಿಸಿ ಟ್ರೋಫಿ ಎತ್ತಿಹಿಡಿದ ಅಂಡೇರಿಯಾ ಎಂಪಿಎಸ್!Motorola Signature 27 Snapdragon 8 Elite Extreme Gen 6 ಮತ್ತು 200MP ಟೆಲಿಫೋಟೋ ಲೆನ್ಸ್‌ನೊಂದಿಗೆ ಅನಾವರಣಬಾಲಿವುಡ್ ಅಂಗಳದಲ್ಲಿ ಹೊಸ ಲವ್ ಸ್ಟೋರಿ: ಗೆಳತಿ ಜೊತೆ ಮನೀಶ್ ಮಲ್ಹೋತ್ರಾ ಪಾರ್ಟಿಯಲ್ಲಿ ಮಾಧುರಿ ದೀಕ್ಷಿತ್ ಮಗ!ಬ್ಯಾಂಕ್ ಲಾಕರ್’ ನಲ್ಲಿ ಇಟ್ಟಿದ್ದ ₹47 ಲಕ್ಷದ ಚಿನ್ನಾಭರಣ ನಾಪತ್ತೆ! ಮಹಿಳೆಯ ಹೋರಾಟಕ್ಕೆ ಕೊನೆಗೂ ಸಿಕ್ತು ಜಯ!ರಾಮಾಯಣ’ದಲ್ಲಿ ರಾಮನಾಗಿ ರಣಬೀರ್, ರಾವಣನಾಗಿ ಯಶ್; ಇಬ್ಬರಲ್ಲಿ ಶ್ರೀಮಂತ ನಟ ಯಾರು?ಕೈ ಕೈ ಹಿಡಿದು ಬಂದ ಐಶ್ವರ್ಯಾ ರೈ–ಅಭಿಷೇಕ್ ಜೋಡಿ; ರೊಮ್ಯಾಂಟಿಕ್ ಕ್ಷಣ ವೈರಲ್! ವಿಚ್ಛೇದನದ ವದಂತಿಗಳಿಗೆ ಬ್ರೇಕ್?ಆಸೀಸ್ ಕ್ರಿಕೆಟರ್ ಗೆ ಕೊಕೇನ್ ಶಾಕ್: ತಪ್ಪು ಒಪ್ಪಿಕೊಂಡು ನಿಷೇಧ ಪೂರ್ಣಗೊಳಿಸಿದ ಕ್ರಿಸ್ ಲಿನ್!