LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕಬ್ಬು ಬೆಳೆಗಾರರ ವಿಚಾರದಲ್ಲಿ ಮುಖ್ಯಮಂತ್ರಿ ಕಪಟ ನಾಟಕ: ಬಿ.ವೈ.ವಿಜಯೇಂದ್ರ

ಬೆಂಗಳೂರು: ಕಬ್ಬು ಬೆಳೆಗಾರರ ವಿಚಾರದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕಪಟ ನಾಟಕ ಆಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಆಕ್ಷೇಪಿಸಿದ್ದಾರೆ.

ಮಾಧ್ಯಮಗಳ ಜೊತೆ ಇಂದು ಮಾತನಾಡಿದ ಅವರು, ಕಬ್ಬು ಬೆಳೆಗಾರರನ್ನು ಭೇಟಿ ಮಾಡಿ ಇದೆಲ್ಲವೂ ಕೇಂದ್ರ ಸರಕಾರದ ಜವಾಬ್ದಾರಿ; ರಾಜ್ಯ ಸರಕಾರದ ಹೊಣೆ ಏನೂ ಇಲ್ಲ ಎಂಬಂತೆ ವರ್ತಿಸಿದ್ದಾರೆ. ಸಕ್ಕರೆ ಕಾರ್ಖಾನೆಗಳಿಂದ ರಾಜ್ಯ ಸರಕಾರಕ್ಕೆ ಅತಿ ಹೆಚ್ಚು ಅನುಕೂಲ ಆಗುತ್ತಿದೆ ಎಂಬುದನ್ನು ಕಬ್ಬು ಬೆಳೆಗಾರರು ಅರ್ಥ ಮಾಡಿಕೊಳ್ಳಬೇಕು. ಕಬ್ಬು ಬೆಳೆಗಾರರ ಪರಿಶ್ರಮದಿಂದ ಸಾವಿರಾರು ಕೋಟಿ ಆದಾಯ ರಾಜ್ಯ ಸರಕಾರಕ್ಕೆ ಬರುತ್ತಿದೆ. ಹರ್ಯಾನ, ಬಿಹಾರ ಇತರ ರಾಜ್ಯಗಳು ಬೆಂಬಲ ಬೆಲೆ ನೀಡುತ್ತಿವೆ. ಕರ್ನಾಟಕ ಸರಕಾರವೂ ಕಬ್ಬು ಬೆಳೆಗಾರರಿಗೆ ಬೆಂಬಲ ಬೆಲೆ ಕೊಡಬೇಕು ಎಂದು ಆಗ್ರಹಿಸಿದರು.

ನರೇಂದ್ರ ಮೋದಿಯವರ ಸರಕಾರವು ಎಥೆನಾಲ್ ಉತ್ಪಾದನೆ ಮೊದಲಾದವುಗಳಿಂದ ಮೌಲ್ಯವರ್ಧನೆ ಮಾಡಿದೆ. ಇದರಿಂದ ರಾಜ್ಯದ ಆದಾಯ ಹೆಚ್ಚಾಗಿದೆ. ಆದರೆ, ರಾಜ್ಯ ಸರಕಾರವು ಕಬ್ಬು ಬೆಳೆಗಾರರ ರಕ್ಷಣೆಗೆ ಬರುತ್ತಿಲ್ಲ ಎಂದು ಟೀಕಿಸಿದರು. ಮುಖ್ಯಮಂತ್ರಿಯವರು ರಾಜಕಾರಣ ಮಾಡುವುದನ್ನು ಬಿಟ್ಟು ರಾಜ್ಯ ಸರಕಾರದ ಜವಾಬ್ದಾರಿ ನಿರ್ವಹಿಸಬೇಕೆಂದು ಒತ್ತಾಯಿಸಿದರು.

ಪಥಸಂಚಲನದಿಂದ ಎಲ್ಲೂ ಕೋಮುಗಲಭೆ ಆಗಿಲ್ಲ..

ನನ್ನ ಕ್ಷೇತ್ರದ ಪಥಸಂಚಲನದಲ್ಲಿ ಭಾಗವಹಿಸುತ್ತೇನೆ ಎಂದು ಅವರು ಪ್ರಶ್ನೆಗೆ ಉತ್ತರಿಸಿದರು. ಪ್ರಿಯಾಂಕ್ ಖರ್ಗೆ ಅವರೊಬ್ಬ ಗೃಹ ಸಚಿವರು. ಪಥಸಂಚಲನದಿಂದ ಎಲ್ಲೂ ಕೋಮುಗಲಭೆ ಆಗಿಲ್ಲ ಎಂದು ಗಮನ ಸೆಳೆದರು. ಕಾನೂನು ಸುವ್ಯವಸ್ಥೆ ಹದಗೆಡುವ ಘಟನೆಗಳೂ ನಡೆದಿಲ್ಲ ಎಂದರು. ಪ್ರಿಯಾಂಕ್ ಖರ್ಗೆ ಅವರು ತೆವಲಿಗಾಗಿ ಆರೆಸ್ಸೆಸ್ ಕುರಿತು ಮಾತನಾಡುವುದನ್ನು ಬಿಡಬೇಕು. ತಮ್ಮ ಇಲಾಖೆ ಬಗ್ಗೆ ಗಮನಿಸಲಿ ಎಂದು ತಿಳಿಸಿದರು.
ಪ್ರಿಯಾಂಕ್ ಖರ್ಗೆ ಅವರು ಉದ್ಧಟತನ ಬಿಟ್ಟು ಕಾನೂನು ಸುವ್ಯವಸ್ಥೆ ಹಾಳಾಗುತ್ತಿರುವುದು, ದಲಿತರ ಮೇಲಿನ ಅತ್ಯಾಚಾರ ನಡೆಯುತ್ತಿರುವುದರ ಕುರಿತು ಗಮನ ಹರಿಸಬೇಕು. ಉಡಾಫೆ ಮಾತು ಬೇಡ ಎಂದು ಇನ್ನೊಂದು ಪ್ರಶ್ನೆಗೆ ಉತ್ತರಿಸಿದರು.

ಪಾರದರ್ಶಕ ತನಿಖೆ ಮಾಡಬೇಕು..

ಸ್ಟಿಂಗ್ ಆಪರೇಷನ್ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಕಾಂಗ್ರೆಸ್ಸನ್ನು ಅಧಿಕಾರಕ್ಕೆ ತಂದ ಒಬ್ಬ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರ ವಿರುದ್ಧ ಸ್ಟಿಂಗ್ ಆಪರೇಷನ್ ನಡೆದಿದೆ. ನನ್ನ ಮೇಲೆ ಷಡ್ಯಂತ್ರ ಎಂದು ಸಿದ್ದರಾಮಯ್ಯನವರು ಹೇಳಿದರೂ ಕೂಡ ಮುಖ್ಯಮಂತ್ರಿಗಳು ಇದನ್ನು ಗಂಭೀರವಾಗಿ ಪರಿಗಣಿಸಿಲ್ಲ. ಮುಖ್ಯಮಂತ್ರಿ, ಗೃಹ ಸಚಿವರು ಈಗಲಾದರೂ ಎಚ್ಚತ್ತುಕೊಂಡು ಪಾರದರ್ಶಕ ತನಿಖೆ ಮಾಡಬೇಕು. ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು ಎಂದು ತಿಳಿಸಿದರು.

ರಾಜ್ಯದ ಖಜಾನೆ ಸಂಪೂರ್ಣ ಖಾಲಿಯಾಗಿದೆ..

ಭೀಕರ ಬರಗಾಲವಿದ್ದು ಒಂದು ರೈತ ಕುಟುಂಬಕ್ಕೆ 2500 ರೂ. ಭಿಕ್ಷೆಯಂತೆ ಪ್ರಕಟಿಸಿದ್ದಾರೆ. ಅದನ್ನೂ ನೀಡಿಲ್ಲ. ರಾಜ್ಯದ ಆರ್ಥಿಕ ಪರಿಸ್ಥಿತಿ ಎಲ್ಲಿಗೆ ಬಂದು ಮುಟ್ಟಿದೆ ಎಂದು ಕೇಳಿದರು. ರಾಜ್ಯದ ಖಜಾನೆ ಸಂಪೂರ್ಣ ಖಾಲಿಯಾಗಿದೆ. ದಿವಾಳಿ ಆಗಿದೆ ಎಂದು ಆರೋಪಿಸಿದರು. ಖಜಾನೆಯಲ್ಲಿ ದುಡ್ಡಿಲ್ಲ ಎಂಬುದು ಸತ್ಯ. ಗ್ಯಾರಂಟಿ ನೆಪ ಮಾಡಿ ಬಿಪಿಎಲ್ ಕಾರ್ಡ್ ಕಡಿತಗೊಳಿಸುತ್ತಿದ್ದಾರೆ. ರಾಜ್ಯದ ಆರ್ಥಿಕ ಪರಿಸ್ಥಿತಿ ಸಂಪೂರ್ಣ ಹದಗೆಟ್ಟಿದೆ ಎಂದು ದೂರಿದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಾಲಿವುಡ್ ಅಂಗಳದಲ್ಲಿ ಹೊಸ ಲವ್ ಸ್ಟೋರಿ: ಗೆಳತಿ ಜೊತೆ ಮನೀಶ್ ಮಲ್ಹೋತ್ರಾ ಪಾರ್ಟಿಯಲ್ಲಿ ಮಾಧುರಿ ದೀಕ್ಷಿತ್ ಮಗ!ಬ್ಯಾಂಕ್ ಲಾಕರ್’ ನಲ್ಲಿ ಇಟ್ಟಿದ್ದ ₹47 ಲಕ್ಷದ ಚಿನ್ನಾಭರಣ ನಾಪತ್ತೆ! ಮಹಿಳೆಯ ಹೋರಾಟಕ್ಕೆ ಕೊನೆಗೂ ಸಿಕ್ತು ಜಯ!ರಾಮಾಯಣ’ದಲ್ಲಿ ರಾಮನಾಗಿ ರಣಬೀರ್, ರಾವಣನಾಗಿ ಯಶ್; ಇಬ್ಬರಲ್ಲಿ ಶ್ರೀಮಂತ ನಟ ಯಾರು?ಕೈ ಕೈ ಹಿಡಿದು ಬಂದ ಐಶ್ವರ್ಯಾ ರೈ–ಅಭಿಷೇಕ್ ಜೋಡಿ; ರೊಮ್ಯಾಂಟಿಕ್ ಕ್ಷಣ ವೈರಲ್! ವಿಚ್ಛೇದನದ ವದಂತಿಗಳಿಗೆ ಬ್ರೇಕ್?ಆಸೀಸ್ ಕ್ರಿಕೆಟರ್ ಗೆ ಕೊಕೇನ್ ಶಾಕ್: ತಪ್ಪು ಒಪ್ಪಿಕೊಂಡು ನಿಷೇಧ ಪೂರ್ಣಗೊಳಿಸಿದ ಕ್ರಿಸ್ ಲಿನ್!ಧನ್ತೇರಸ್ 2026: ಚಿನ್ನ ಖರೀದಿಗೆ ಶುಭ ಮುಹೂರ್ತ ಯಾವಾಗ? ಬೆಂಗಳೂರು ಸೇರಿ ಪ್ರಮುಖ ನಗರಗಳ ಪೂಜಾ ಸಮಯ ಇಲ್ಲಿದೆಉತ್ತರ ಪ್ರದೇಶದಲ್ಲಿ ಮೂರನೇ ಅವಧಿಗಾಗಿ ಬಿಜೆಪಿಯ ತಂತ್ರ: ಕಲ್ಯಾಣ ಯೋಜನೆ, ಮಹಿಳಾ ಮತ ಮತ್ತು ಯೋಗಿ ವರ್ಚಸ್ಸಿನ ಮೇಲೆ ಭರವಸೆಭಾರತದಲ್ಲಿ ಅತಿ ಹೆಚ್ಚು ಸಕ್ಕರೆ ಉತ್ಪಾದಿಸುವ ಟಾಪ್ 5 ಕಂಪನಿಗಳು ಯಾವುದು ಗೊತ್ತಾ? ಇಲ್ಲಿದೆ ಮಾಹಿತಿ!ಮೊದಲ ದಿನವೇ ಬಾಕ್ಸಾಫೀಸ್‌ನಲ್ಲಿ ಧೂಳೆಬ್ಬಿಸಿದ ‘ರಾಮಾಯಣ ಮೊದಲ ದಿನವೇ ₹77.50 ಕೋಟಿ ಕಲೆಕ್ಷನ್ಕೊಹ್ಲಿ 38ನೇ ಜನ್ಮದಿನಕ್ಕೆ ಭರ್ಜರಿ ಎಂಟರ್‌ಟೇನ್‌ಮೆಂಟ್: ಸಿಂಗರ್ ಅವತಾರವೆತ್ತಿದ ಕಿಂಗ್ ವಿಡಿಯೋ ವೈರಲ್!