LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

OMG : ಚಿಕ್ಕಮಗಳೂರಲ್ಲಿ ಮಧ್ಯರಾತ್ರಿ 2 ಗಂಟೆಗೆ ಲೇಡೀಸ್ ಹಾಸ್ಟೆಲ್‌ಗೆ ನುಗ್ಗಿದ ಯುವಕ ; ವಿದ್ಯಾರ್ಥಿನಿಯರು ಮಾಡಿದ್ದೇನು ಗೊತ್ತಾ ?

ಚಿಕ್ಕಮಗಳೂರು  : ಮಹಿಳಾ ವಿದ್ಯಾರ್ಥಿನಿಯರ ಹಾಸ್ಟೆಲ್‌ಗೆ ಮಧ್ಯರಾತ್ರಿ ವೇಳೆ ನುಗ್ಗಿದ್ದ ಯುವಕನನ್ನು ವಿದ್ಯಾರ್ಥಿನಿಯರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಚಿಕ್ಕಮಗಳೂರು ಹೊರವಲಯದ ಸರ್ಕಾರಿ ಮೆಡಿಕಲ್ ಕಾಲೇಜಿನ ಹುಡುಗಿಯರ ಹಾಸ್ಟೆಲ್ ನಲ್ಲಿ  ನಡೆದಿದೆ.

ಚಿಕ್ಕಮಗಳೂರು ಹೊರವಲಯದ ಸರ್ಕಾರಿ ಮೆಡಿಕಲ್ ಕಾಲೇಜಿನ ಮಹಿಳಾ ವಿದ್ಯಾರ್ಥಿನಿಯರ ಹಾಸ್ಟೆಲ್‌ಗೆ ಮಧ್ಯರಾತ್ರಿ ನುಗ್ಗಿದ್ದ ಯುವಕನನ್ನು ವಿದ್ಯಾರ್ಥಿನಿಯರೇ ಧೈರ್ಯದಿಂದ ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ. ಉತ್ತರ ಪ್ರದೇಶ ಮೂಲದ ರಾಕೇಶ್ (30) ಎಂಬಾತ ರಾತ್ರಿ 2 ಗಂಟೆ ಸುಮಾರಿಗೆ ಹಾಸ್ಟೆಲ್ ಆವರಣಕ್ಕೆ ಅಕ್ರಮವಾಗಿ ಪ್ರವೇಶಿಸಿದ್ದು, ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಆತನನ್ನು ವಿದ್ಯಾರ್ಥಿನಿಯರು ಸೆರೆಹಿಡಿದು ಪೊಲೀಸರ ವಶಕ್ಕೆ ನೀಡಿದ್ದಾರೆ.

ಬಂಧಿತ ಯುವಕನನ್ನು ಉತ್ತರ ಪ್ರದೇಶ ಮೂಲದ ರಾಕೇಶ್ (30) ಎಂದು ಗುರುತಿಸಲಾಗಿದೆ. ಮಾಹಿತಿಯ ಪ್ರಕಾರ, ರಾಕೇಶ್  ರಾತ್ರಿ ಸುಮಾರು 2 ಗಂಟೆ ವೇಳೆಗೆ ಮಹಿಳಾ ಹಾಸ್ಟೆಲ್ ಆವರಣಕ್ಕೆ ಅಕ್ರಮವಾಗಿ ಪ್ರವೇಶಿಸಿದ್ದಾನೆ. ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಆತನನ್ನು ಗಮನಿಸಿದ ವಿದ್ಯಾರ್ಥಿನಿಯರು ಧೈರ್ಯದಿಂದ ಎದುರಿಸಿ ಹಿಡಿದುಕೊಂಡಿದ್ದಾರೆ. ಬಳಿಕ ಹಾಸ್ಟೆಲ್ ಸಿಬ್ಬಂದಿಗೆ ಮಾಹಿತಿ ನೀಡಿ, ಪೊಲೀಸರನ್ನು ಸ್ಥಳಕ್ಕೆ ಕರೆಸಿದ್ದಾರೆ.

ಸ್ಥಳಕ್ಕಾಗಮಿಸಿದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಆಗ ಆತ ತಾನು ಕಳ್ಳತನಕ್ಕೆ ಬಂದಿದ್ದೇನೆ ಎಂದು ಹೇಳಿದ್ದಾನೆ.ಆತ ಯಾವ ಉದ್ದೇಶದಿಂದ ಹಾಸ್ಟೆಲ್‌ಗೆ ನುಗ್ಗಿದ್ದ ಎಂಬುದರ ಕುರಿತು ತನಿಖೆ ಮುಂದುವರಿದಿದೆ. ವಿದ್ಯಾರ್ಥಿನಿಯರ ಸಮಯಪ್ರಜ್ಞೆ ಹಾಗೂ ಧೈರ್ಯದಿಂದ ಸಂಭವಿಸಬಹುದಾಗಿದ್ದ ಅನಾಹುತ ತಪ್ಪಿದೆ ಎಂದು ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ