LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

OTS ಯೋಜನೆ: ಸಾಲದ ಅಸಲು ಸಂಪೂರ್ಣ ಪಾವತಿಸಿದ ಫಲಾನುಭವಿಗಳಿಗೆ ಬಡ್ಡಿ ಮನ್ನಾ ಸೌಲಭ್ಯ

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ(ಕೆಎಂಡಿಸಿ) ವಿವಿಧ ಯೋಜನೆಗಳಡಿ 2013-14ರಿಂದ 2018-19ನೇ ಸಾಲಿನವರೆಗೆ ಸಾಲ ಪಡೆದಿರುವ ಫಲಾನುಭವಿಗಳಿಗೆ ಸುವರ್ಣಾವಕಾಶ ಕಲ್ಪಿಸಲಾಗಿದೆ.

ಸಾಲದ ಅಸಲು ಮೊತ್ತವನ್ನು ಸಂಪೂರ್ಣವಾಗಿ ಪಾವತಿಸುವ ಫಲಾನುಭವಿಗಳಿಗೆ ಸಾಲದ ಮೇಲಿನ ಬಡ್ಡಿಯನ್ನು ಮನ್ನಾ ಮಾಡುವ “ಒಂದಾವರ್ತಿ ತೀರುವಳಿ ಯೋಜನೆ (ಒನ್ ಟೈಮ್ ಸೆಟ್ಟಲ್‌ಮೆಂಟ್ ಸ್ಕೀಮ್-ಒಟಿಎಸ್)” ಯ ಅವಧಿಯನ್ನು ಸಾರ್ವಜನಿಕರ ಹಿತದೃಷ್ಟಿಯಿಂದ ವಿಸ್ತರಿಸಲಾಗಿದ್ದು, ಸಾಲದ ಖಾತೆಗಳನ್ನು ಮುಕ್ತಾಯಗೊಳಿಸಲು ಆಗಸ್ಟ್ 31 ರವರೆಗೆ ಅವಕಾಶ ನೀಡಲಾಗಿದೆ.

ಸಂಬಂಧಪಟ್ಟ ಫಲಾನುಭವಿಗಳು ಈ ಸುವರ್ಣಾವಕಾಶವನ್ನು ಸದುಪಯೋಗಪಡಿಸಿಕೊಂಡು ತಮ್ಮ ಸಾಲದ ಖಾತೆಗಳನ್ನು ಮುಕ್ತಾಯಗೊಳಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಮೌಲಾನಾ ಆಜಾದ್ ಭವನ, 1ನೇ ಮಹಡಿ, ಹೊಸಪೇಟೆ ರಸ್ತೆ, ಕೊಪ್ಪಳ ಜಿಲ್ಲಾ ಕಚೇರಿಯನ್ನು ಅಥವಾ ದೂರವಾಣಿ: 08539-225008ಗೆ ಸಂಪರ್ಕಿಸಬಹುದು ಎಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಕೊಪ್ಪಳ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

ಉಚಿತ ಸ್ವಯಂ ಉದ್ಯೋಗ ತರಬೇತಿ, ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ, ಕೊಪ್ಪಳ ಇವರ ವತಿಯಿಂದ ಜಿಲ್ಲೆಯ ಗ್ರಾಮೀಣ ಭಾಗದ ಆಸಕ್ತರಿಗಾಗಿ ಉಚಿತ ಸ್ವಯಂ ಉದ್ಯೋಗ ತರಬೇತಿ ಹಾಗೂ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

 ಸ್ವಯಂ ಉದ್ಯೋಗ ತರಬೇತಿಯಲ್ಲಿ 13 ದಿನಗಳ ಕುರಿ ಸಾಕಾಣಿಕೆ ಹಾಗೂ ಹೈನುಗಾರಿಕೆ ತರಬೇತಿ, 10 ದಿನಗಳ ಅಣಬೆ ಬೇಸಾಯ ತರಬೇತಿ, 13 ದಿನಗಳ ಜೂಟ್ ಬ್ಯಾಗ್ ತಯಾರಿಕೆ ತರಬೇತಿ ಹಾಗೂ 12 ದಿನಗಳ ಪಾಸ್ಟಪುಡ್ ಸ್ಟಾಲ್ ತರಬೇತಿ ನಡೆಯಲಿದ್ದು, ಆಗಸ್ಟ್ 24 ರಂದು ಸಂದರ್ಶನ ನಡೆಯಲಿದೆ ಮತ್ತು ಆಗಸ್ಟ್ 25 ರಿಂದ ತರಬೇತಿಯು ಪ್ರಾರಂಭವಾಗಲಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ತರಬೇತಿ ಅವಧಿಯಲ್ಲಿ ಉಚಿತ ಊಟ ಮತ್ತು ವಸತಿ ಸೌಲಭ್ಯ ಒದಗಿಸಲಾಗುವುದು. ಜೊತೆಗೆ ತರಬೇತಿ ಪೂರ್ಣಗೊಳಿಸಿದವರಿಗೆ ಬ್ಯಾಂಕಿನ ಮೂಲಕ ಸಾಲ ಸೌಲಭ್ಯ ಒದಗಿಸಲು ಪ್ರಯತ್ನಿಸಲಾಗುತ್ತದೆ.

 ಅರ್ಜಿ ಸಲ್ಲಿಸಲು ಅಭ್ಯರ್ಥಿಗಳ ವಯಸ್ಸು 18 ರಿಂದ 45 ವರ್ಷದೊಳಗಿರಬೇಕು. ಅಭ್ಯರ್ಥಿಗಳು ಕನಿಷ್ಠ ಎಂಟನೇ ತರಗತಿ ಪಾಸ್ ಆಗಿರಬೇಕು ಮತ್ತು ಕೊಪ್ಪಳ ಜಿಲ್ಲೆಯ ಗ್ರಾಮೀಣ ಭಾಗದ ನಿವಾಸಿಯಾಗಿರಬೇಕು. ಸ್ವಯಂ ಉದ್ಯೋಗದಲ್ಲಿ ಆಸಕ್ತಿ ಹೊಂದಿರಬೇಕು. ಆಸಕ್ತರು ತಮ್ಮ ಆಧಾರ ಕಾರ್ಡ್, ರೇಶನ್ ಕಾರ್ಡ್, ಪಾನ್ ಕಾರ್ಡ್, ಎಸ್‌ಬಿಐ ಬ್ಯಾಂಕ್ ಪಾಸ್‌ಬುಕ್ ಜೆರಾಕ್ಸ್, ವಿದ್ಯಾಭ್ಯಾಸ ದಾಖಲೆ ಹಾಗೂ 3 ಪಾಸ್‌ಪೋರ್ಟ್ ಸೈಜ್ ಭಾವಚಿತ್ರಗಳೊಂದಿಗೆ ನಿರ್ದೇಶಕರು, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ, ಜಿಲ್ಲಾ ಕೈಗಾರಿಕಾ ಕೇಂದ್ರ ಆವರಣ, ಅಶೋಕ ಸರ್ಕಲ್ ಹತ್ತಿರ, ಕೊಪ್ಪಳ ವಿಳಾಸಕ್ಕೆ ಅರ್ಜಿ ಸಲ್ಲಿಸಬೇಕು.

 ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ಕಚೇರಿ ಅಥವಾ ದೂ.ಸಂ.: 08539-231038, ಮೊ.ಸಂ: 9483618178, 7259073827, 9538096796, 9481085217 ಗೆ ಸಂಪರ್ಕಿಸಬಹುದು ಎಂದು ಕೊಪ್ಪಳ ಎಸ್‌ಬಿಐ ಆರ್‌ಸೆಟಿಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿಮಕ್ಕಳ ಮನಸ್ಸು, ಮೆದುಳಿನ ಶಕ್ತಿಗೆ ದಾರಿದೀಪ ಈ ಪುಸ್ತಕ: ತಪ್ಪದೇ ಖರೀದಿಸಿ, ನಿಮ್ಮ ಮಕ್ಕಳಿಗೆ ತಪ್ಪದೇ ಓದಿಸಿ!ಹಿಂದೂಗಳ ಆಚರಣೆಗೆ ಸರ್ಕಾರ ಅಡ್ಡಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಕಾಂಗ್ರೆಸ್ ಪಕ್ಷ ಸಂಘಟನೆ ಬಲವರ್ಧನೆಗೆ 'ಕೆಪಿಸಿಸಿ ಕನೆಕ್ಟ್ ಸೆಂಟರ್' ಸ್ಥಾಪನೆ: ಪದಾಧಿಕಾರಿಗಳ ನೇಮಕ