LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

PWD ಎಂಜಿನಿಯರ್ ಗೆ ಹಣಕ್ಕೆ ಬೇಡಿಕೆ ಇಟ್ಟ ನಕಲಿ ಲೋಕಾಯುಕ್ತ ಅಧಿಕಾರಿ ಅರೆಸ್ಟ್

ಶಿವಮೊಗ್ಗ: ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಹೇಳಿ ಲೋಕೋಪಯೋಗಿ ಇಲಾಖೆ ಎಂಜಿನಿಯರ್ ಗೆ ವಾಟ್ಸಾಪ್ ಕರೆ ಮಾಡಿ ಹಣಕ್ಕೆ ಬೇಡಿಕೆ ಇಟ್ಟು ವಂಚಿಸಲು ಯತ್ನಿಸಿದ್ದ ಆಂಧ್ರಪ್ರದೇಶ ಮೂಲದ ಆರೋಪಿಯನ್ನು ಶಿವಮೊಗ್ಗ ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ. ಆಂಧ್ರಪ್ರದೇಶದ ಸತ್ಯಸಾಯಿ ಜಿಲ್ಲೆಯ ಧನಂಜಯ ರೆಡ್ಡಿ(33) ಬಂಧಿತ ಆರೋಪಿ.

ಶಿವಮೊಗ್ಗ ಲೋಕೋಪಯೋಗಿ ಇಲಾಖೆ ವಿದ್ಯುತ್ ಉಪ ವಿಭಾಗ ಸಹಾಯಕ ಕಾರ್ಯಪಾಲಕ ಅಭಿಯಂತರ ತಿಪ್ಪೇಸ್ವಾಮಿ(59) ಈ ಕುರಿತಾಗಿ ದೂರು ನೀಡಿದ್ದರು.

ಅವರಿಗೆ ವಾಟ್ಸಾಪ್ ಕರೆ ಮಾಡಿ ತಾನು ಲೋಕಾಯುಕ್ತ ಬೆಂಗಳೂರು ಹೆಡ್ ಆಫೀಸ್ ನ ಲೋಕಾಯುಕ್ತ ಅಧಿಕಾರಿ ದಯಾನಂದ ಎಂದು ಪರಿಚಯ ಮಾಡಿಕೊಂಡು ನಿಮ್ಮ ಮೇಲೆ ಎಫ್ಐಆರ್ ದಾಖಲಾಗಿದ್ದು, ಈ ಕೇಸಿನಲ್ಲಿ ‘ಬಿ’ ರಿಪೋರ್ಟ್ ಮಾಡಲು ನೀವು ನಮಗೆ ಆನ್ ಲೈನ್ ಮೂಲಕ ಹಣವನ್ನು ಹಾಕಲು ರೆಡಿ ಇರಿ ಎಂದು ಹಣಕ್ಕೆ ಬೇಡಿಕೆ ಇಟ್ಟಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿರುತ್ತದೆ.

ಪ್ರಕರಣದಲ್ಲಿ ಆರೋಪಿ ಬಗ್ಗೆ ಎಸ್ಪಿ ನಿಖೀಲ್ ಬಿ., ಹೆಚ್ಚುವರಿ ಪೊಲೀಸ್ ಅಧಿಕ್ಷಕರು-1 ಕಾರಿಯಪ್ಪ ಎ.ಜಿ. ಮಾರ್ಗದರ್ಶನದಲ್ಲಿ, ಸೈಬರ್ ಕ್ರೈಂ ಪೊಲೀಸ್ ಠಾಣೆ ಪೊಲೀಸ್ ನಿರೀಕ್ಷಕ ಮಂಜುನಾಥ್ ಅವರ ನೇತೃತ್ವದಲ್ಲಿ ಎಎಸ್ಐ ಪ್ರಕಾಶ್ ಜೆ.ಕೆ., ಸಿಬ್ಬಂದಿಗಳಾದ ಕಿರಣ್ ಕುಮಾರ್, ಸಂಗಮೇಶ, ಶರತ್ ಕುಮಾರ್ ಅವರನ್ನೊಳಗೊಂಡ ತಂಡವನ್ನು ರಚಿಸಲಾಗಿರುತ್ತದೆ.

ಸದರಿ ತನಿಖಾ ತಂಡವು ಪ್ರಕರಣದ ಆರೋಪಿಯಾದ ಟಿ ಧನಂಜಯ ರೆಡ್ಡಿ ಬಿನ್ ಟಿ ಮಲ್ಲಿರೆಡ್ಡಿ 33 ವರ್ಷ, ಖಾಯಂ ವಾಸ: ನಲ್ಲಗುತ್ತಲಾ ಪಲ್ಲಿ ವೆಂಕಟಾಪುರಂ ಆನಂತಪುರ ಜಿಲ್ಲೆ ಆಂಧ್ರ ಪ್ರದೇಶ ರಾಜ್ಯ. ಹಾಲಿ ವಾಸ: ನಾಗಿರೆಡ್ಡಿಪಲ್ಲಿ ಮೇನ್ ರೋಡ್ ಭರತ್ ಪೆಟ್ರೋಲ್ ಬಂಕ್ ಹತ್ತಿರ ಕದಿರಿ, ಸತ್ಯಸಾಯಿ ಜಿಲ್ಲೆ ಆಂಧ್ರ ಪ್ರದೇಶ ರಾಜ್ಯ. ಈತನನ್ನು ಆಂಧ್ರ ಪ್ರದೇಶದ ಕದಿರಿ ನಗರದಿಂದ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿಮಕ್ಕಳ ಮನಸ್ಸು, ಮೆದುಳಿನ ಶಕ್ತಿಗೆ ದಾರಿದೀಪ ಈ ಪುಸ್ತಕ: ತಪ್ಪದೇ ಖರೀದಿಸಿ, ನಿಮ್ಮ ಮಕ್ಕಳಿಗೆ ತಪ್ಪದೇ ಓದಿಸಿ!ಹಿಂದೂಗಳ ಆಚರಣೆಗೆ ಸರ್ಕಾರ ಅಡ್ಡಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಕಾಂಗ್ರೆಸ್ ಪಕ್ಷ ಸಂಘಟನೆ ಬಲವರ್ಧನೆಗೆ 'ಕೆಪಿಸಿಸಿ ಕನೆಕ್ಟ್ ಸೆಂಟರ್' ಸ್ಥಾಪನೆ: ಪದಾಧಿಕಾರಿಗಳ ನೇಮಕ