LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

Rain alert : ರಾಜ್ಯದಲ್ಲಿ 1 ವಾರ ಭಾರಿ ಮಳೆ ಮುನ್ಸೂಚನೆ ; ರೆಡ್ ಅಲರ್ಟ್ ಘೋಷಣೆ- ಮುಂಜಾಗ್ರತಾ ಕ್ರಮಕ್ಕೆ ಸೂಚನೆ

ಬೆಂಗಳೂರು :    ಕರ್ನಾಟಕದಲ್ಲಿ ಮುಂಗಾರು ಮಳೆಯ ಅಬ್ಬರ ಜೋರಾಗಿದ್ದು, ಕರಾವಳಿ ಮತ್ತು ಮಲೆನಾಡು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 1 ವಾರ    ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ (IMD) ನೀಡಿದೆ. ಕೆಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಹಾಗೂ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ.  ಬೆಂಗಳೂರು, ಕೊಡಗು, ಧಾರವಾಡ, ಹಾವೇರಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣದಿಂದ ಗುಡುಗು ಸಹಿತ ಮಳೆಯಾಗುವ ಎಚ್ಚರಿಕೆಯನ್ನು ನೀಡಲಾಗಿದೆ.

ಕರ್ನಾಟಕದಲ್ಲಿ ಮುಂಗಾರು ಮಳೆಯ ಅಬ್ಬರ ಜೋರಾಗಿದ್ದು, ಕರಾವಳಿ ಮತ್ತು ಮಲೆನಾಡು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಜೂನ್ 8 ರಿಂದ 10 ರವರೆಗೆ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ (IMD) ನೀಡಿದೆ. ಕೆಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಹಾಗೂ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಮುನ್ನೆಚ್ಚರಿಕೆಗಳು

  • ಕರಾವಳಿ ತೀರದಲ್ಲಿ ಬಿರುಗಾಳಿ ಜೋರಾಗಿರುವ ಕಾರಣ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಹಾಗೂ ರೈತರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.

ಶಿವಮೊಗ್ಗ ರೆಡ್‌ ಅಲರ್ಟ್ ‌: ಮುಂಜಾಗ್ರತಾ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ಶಿವಮೊಗ್ಗ ಭಾರತೀಯ ಹವಾಮಾನ ಇಲಾಖೆಯು ಕರ್ನಾಟಕದ ಕರಾವಳಿ ಮತ್ತು ಮಲೆನಾಡಿನ ಶಿವಮೊಗ್ಗ ಜಿಲ್ಲೆ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಎಚ್ಚರಿಕೆ ಘೋಷಿಸಿದೆ. ಈಗಾಗಲೇ ರಾಜ್ಯಕ್ಕೆ ಮುಂಗಾರು ಪ್ರವೇಶಗೊಂಡಿದ್ದು, ನಾಳೆಯಿಂದ ಎರಡು ದಿನಗಳ ಕಾಲ ಶಿವಮೊಗ್ಗ ಜಿಲ್ಲೆಯಲ್ಲಿ ಸಾಮಾನ್ಯದಿಂದ ಭಾರೀ ಪ್ರಮಾಣದ ಮಳೆ ಬೀಳಬಹುದಾದ ಹಿನ್ನೆಲೆಯಲ್ಲಿ ಜಿಲ್ಲೆಯ ಜನರು ಸಾಂದರ್ಭಿಕವಾಗಿ ತಕ್ಷಣ ಕ್ರಮ ಕೈಗೊಳ್ಳಬೇಕಾದ ತುರ್ತು ಪರಿಸ್ಥಿತಿಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಸದಾ ಸಿದ್ಧರಿರುವಂತೆ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ಅವರು ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ಹವಾಮಾನ ತಜ್ಞರ ವರದಿಯನ್ನಾಧರಿಸಿ, ಭಾರೀ ಪ್ರಮಾಣದ ಮಳೆ ಬಂದಲ್ಲಿ ಸಂಭವಿಸಬಹುದಾದ ಅವಘಡಗಳ ಕುರಿತು ಏರ್ಪಡಿಸಲಾಗಿದ್ದ ಸಂಬಂಧಿಸಿದ ಇಲಾಖಾ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಇಂತಹ ತುರ್ತು ಸಂದರ್ಭದಲ್ಲಿ ಕಂದಾಯ, ಅರಣ್ಯ, ಅಗ್ನಿಶಾಮಕ, ಪಂಚಾಯತ್‌ರಾಜ್‌, ಲೋಕೋಪಯೋಗಿ, ಸ್ಥಳೀಯ ಸಂಸ್ಥೆಗಳು ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು, ರಜೆಯ ಮೇಲೆ ತೆರಳದಂತೆ ಹಾಗೂ ತಮ್ಮ ಕಾರ್ಯಕ್ಷೇತ್ರದಲ್ಲಿದ್ದು, ಸಕಾಲದಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ಅವರು ಸಲಹೆ ನೀಡಿದ ಅವರು, ಅಧಿಕಾರಿ-ಸಿಬ್ಬಂಧಿಗಳು ಕೇಂದ್ರಸ್ಥಾನದಿಂದ ಹೊರಹೋಗದಂತೆ ಅವರು ಸೂಚನೆ ನೀಡಿದ್ದಾರೆ.

ಈ ತುರ್ತು ಸಂದರ್ಭದಲ್ಲಿ ಪ್ರಾಣ ಮತ್ತು ಆಸ್ತಿಪಾಸ್ತಿ ರಕ್ಷಣೆಗೆ ಅಗತ್ಯವಿರುವ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವುದರ ಜೊತೆಗೆ ಟಾರ್ಚ್‌ಗಳು, ಬ್ಯಾಟರಿಗಳು, ಮೊಬೈಲ್ ಪವರ್ ಬ್ಯಾಂಕ್‌ಗಳು ಮತ್ತು ಹೆಚ್ಚುವರಿ ಬ್ಯಾಟರಿಗಳನ್ನು ಸಿದ್ಧವಾಗಿಟ್ಟುಕೊಳ್ಳುವುದರ ಜೊತೆಗೆ ತುರ್ತು ಬಳಕೆಗೆ ಅಗತ್ಯವಿರುವ ಕುಡಿಯುವ ನೀರು, ಒಣ ಆಹಾರ, ಪ್ರಥಮ ಚಿಕಿತ್ಸಾ ಪೆಟ್ಟಿಗೆ ಮತ್ತು ವೈದ್ಯಕೀಯ ಚೀಟಿಗಳನ್ನು ಜೊತೆಯಲ್ಲಿಟ್ಟುಕೊಳ್ಳುವಂತೆ ಅವರು ಸಲಹೆ ನೀಡಿದ್ದಾರೆ.

ಹವಾಮಾನ ಇಲಾಖೆ ಸೂಚನೆಗಳನ್ನು ನಿರಂತರವಾಗಿ ಗಮನಿಸುತ್ತಿರಬೇಕು. ಮನೆ ಅಥವಾ ಕಟ್ಟಡದ ಸೋರಿಕೆಯನ್ನು ತಡೆಗಟ್ಟಿ, ವಿದ್ಯುತ್ ವೈರಿಂಗ್ ಅನ್ನು ಸುರಕ್ಷಿತವಾಗಿರಿಸಿಕೊಳ್ಳಬೇಕು. ಬಲವಾದ ಗಾಳಿ ಮತ್ತು ಗುಡುಗು-ಸಿಡಿಲು ಇರುವಾಗ ಮನೆಯಲ್ಲೇ ಇರಿ, ಮರಗಳು ಅಥವಾ ವಿದ್ಯುತ್ ಕಂಬಗಳ ಕೆಳಗೆ ಹೋಗದಂತೆ ಸೂಚನೆ ನೀಡಿರುವ ಅವರು ತಗ್ಗು ಪ್ರದೇಶದಲ್ಲಿರುವವರು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಗೊಳ್ಳಲು ಹಾಗೂ ಪ್ರವಾಹ ಪೀಡಿತ ರಸ್ತೆಗಳು, ಜಲಾವೃತವಾದ ಸೇತುವೆಗಳು ಮತ್ತು ಮಲೆನಾಡಿನ ಕಣಿವೆ ಪ್ರದೇಶಗಳಲ್ಲಿ ವಾಹನಗಳನ್ನು ಚಲಾಯಿಸುವುದು ಬೇಡ ಎಂದವರು ಎಚ್ಚರಿಕೆ ನೀಡಿದ್ದಾರೆ.

ಈ ಅವಧಿಯಲ್ಲಿ ನಗರದಲ್ಲಿ ನಾಗರೀಕರಿಗೆ ಶುದ್ಧ ಕುಡಿಯುವ ನೀರು ಪೂರೈಸಲು, ಚರಂಡಿ ಮತ್ತು ರಾಜಾ ಕಾಲುವೆಗಳಲ್ಲಿ ನೀರು ನಿಲ್ಲದಂತೆ ಪಾಲಿಕೆ ಅಧಿಕಾರಿಗಳು ಗಮನಹರಿಸಬೇಕು. ಜಿಲ್ಲೆಯ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯಾಧಿಕಾರಿಗಳು ಉಪಸ್ಥಿತರಿದ್ದು, ಅಗತ್ಯ ಆರೋಗ್ಯ ನೀಡಬೇಕು. ಅಗತ್ಯವಾಗಿರುವ ಔಷಧಗಳನ್ನು ದಾಸ್ತಾನು ಮಾಡಿಟ್ಟುಕೊಳ್ಳಬೇಕು ಎಂದು ಸೂಚಿಸಿದ ಅವರು, ಈ ಸಂದರ್ಭದಲ್ಲಿ ಹಾವುಗಳ ಕಡಿತಕ್ಕೆ ಸೂಕ್ತ ಚಿಕಿತ್ಸೆ ನೀಡಲು ಸಿದ್ಧರಾಗಿರುವಂತೆ ಅವರು ಸೂಚಿಸಿದರು.

ಕಂದಾಯ ಇಲಾಖೆಯ ಅಧಿಕಾರಿಗಳು ಅಗತ್ಯವಿದ್ದಲ್ಲಿ ನಿರಾಶ್ರಿತರ ವಸತಿಗೆ ಸೂಕ್ತವಾದ ಸ್ಥಳಗಳನ್ನು ಗುರುತಿಸಿಕೊಂಡಿರಬೇಕು. ಅರಣ್ಯ ಇಲಾಖೆಯ ಅಧಿಕಾರಿಗಳು ದುರ್ಬಲ ಮತ್ತು ಒಣಗಿದ ಮರಗಳನ್ನು ತೆರವುಗೊಳಿಸಲು, ರೆಂಬೆ-ಕೊಂಬೆಗಳನ್ನು ಕತ್ತರಿಸಲು ಕ್ರಮ ಕೈಗೊಳ್ಳಬೇಕು. ಅಗ್ನಿಶಾಮಕದಳ, ಗ್ರಾಮ ಪಂಚಾಯಿತಿ, ಮೆಸ್ಕಾಂ ಸಿಬ್ಬಂಧಿಗಳು ಸನ್ನದ್ದ ಸ್ಥಿತಿಯಲ್ಲಿರಬೇಕು. ಅತೀವ ಮಳೆಯಿಂದ ಜನ-ಜಾನುವಾರುಗಳ ಸಾವು-ನೋವು, ಆಸ್ತಿ ಹಾನಿಯಾದಲ್ಲಿ, ಕೃಷಿ ಮತ್ತು ತೋಟಗಾರಿಕೆ ಬೆಳೆ ಹಾನಿಯಾದಲ್ಲಿ ತಕ್ಷಣದಲ್ಲಿ ಸರ್ವೇ ನಡೆಸಿ, ಸಕಾಲಿಕ ಪರಿಹಾರ ಕ್ರಮಗಳನ್ನು ಒದಗಿಸಲು ಸಿದ್ಧರಿರುವಂತೆ ಅವರು ಸೂಚಿಸಿದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
ಸಿದ್ಧರಾಮಯ್ಯ ಮುನಿಸಿನಿಂದ ಕೈತಪ್ಪಿದ ಸಚಿವ ಸ್ಥಾನ..? ಮನವೊಲಿಸಲು ಜಮೀರ್ ಅಹ್ಮದ್ ಕಸರತ್ತುಇಸ್ರೇಲ್, ಅಮೆರಿಕ ದಾಳಿಯಲ್ಲಿ ಮೃತಪಟ್ಟ 131 ದಿನಗಳ ನಂತರ ಜು. 9ರಂದು ಇರಾನ್ ಸುಪ್ರೀಂ ಲೀಡರ್ ಖಮೇನಿ ಅಂತ್ಯಕ್ರಿಯೆSHOCKING: ಅಕ್ರಮ ಕಲ್ಲಿದ್ದಲು ಗಣಿಯಲ್ಲಿ ವಿಷಕಾರಿ ಅನಿಲ ಸೇವಿಸಿ ನಾಲ್ವರು ಸಾವುವಿವಾಹಿತೆಗೆ ಮತ್ತು ಬರುವ ಪಾನೀಯ ಕುಡಿಸಿ ರೇಪ್, ಬೆತ್ತಲೆ ಚಿತ್ರ ಸೆರೆಹಿಡಿದು ಬ್ಲಾಕ್ ಮೇಲ್BREAKING: ಇನ್ನು ಯಾರೂ ಒಂದು ರೂಪಾಯಿ ಲಂಚ ಕೊಡಬೇಕಿಲ್ಲ: ಭ್ರಷ್ಟಾಚಾರ ಮುಕ್ತ ರಾಜ್ಯವಾಗಿಸಲು ಸಿಎಂ ಡಿಕೆ ಮಹತ್ವದ ಹೆಜ್ಜೆಶಿವಮೊಗ್ಗ: ಕೊಳೆತ ಸ್ಥಿತಿಯಲ್ಲಿ ಮಹಿಳೆ, ಸಾಕು ನಾಯಿ ಶವ ಪತ್ತೆಧರ್ಮಸ್ಥಳ ಬುರುಡೆ ಗ್ಯಾಂಗ್ ಪ್ರಕರಣ: ಚಿನ್ನಯ್ಯನ ಬ್ರೇನ್ ಮ್ಯಾಪಿಂಗ್ ಹಾಗೂ ರಿಟ್ ಅರ್ಜಿ ತನಿಖೆ ನಡೆಸುವಂತೆ SITಗೆ ಗಿರೀಶ್ ಮಟ್ಟಣ್ಣನವರ್ ದೂರುBREAKING: ಗೃಹಲಕ್ಷ್ಮಿ, ಗೃಹಜ್ಯೋತಿ ಫಲಾನುಭವಿಗಳಿಗೆ ಮುಖ್ಯ ಮಾಹಿತಿ: ಯೋಜನೆ ಸೌಲಭ್ಯ ಪಡೆಯಲು ಮತ್ತೆ ಅರ್ಜಿ ಸಲ್ಲಿಸಬೇಕು: ಸಿಎಂ ಡಿಕೆ ಮಾಹಿತಿದೇಶದಲ್ಲಿ ನಕ್ಸಲ್ ಚಟುವಟಿಕೆಗಳಿಗೆ ವಿದೇಶದಿಂದ ಕೋಟ್ಯಂತರ ರೂ ಅಕ್ರಮ ಫಂಡಿಂಗ್ ಆರೋಪ: ಕರ್ನಾಟಕದ ನಾಲ್ವರು ಸೇರಿ 7 ಜನರ ವಿರುದ್ಧ FIR ದಾಖಲುಸಂಬಳ ಪಡೆಯುವ ಪ್ರತಿಯೊಬ್ಬ ಉದ್ಯೋಗಿಯೂ  ತಿಳಿಯಲೇಬೇಕಾದ ಸೀಕ್ರೆಟ್ ಪಿಎಫ್ ಕಟ್ ಆದ್ರೆ ಸಿಗುತ್ತೆ ₹7 ಲಕ್ಷದ ಬಿಗ್ ಇನ್ಶೂರೆನ್ಸ್ ಬೆನಿಫಿಟ್