LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

RAIN ALERT: ಬೆಂಗಳೂರು ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಗುಡುಗು, ಸಿಡಿಲು ಸಹಿತ ಭಾರಿ ಮಳೆ ಎಚ್ಚರಿಕೆ

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಕಳೆದ ಮೂರು ದಿನಗಳಿಂದ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಂಜೆಯಾಗುತ್ತಿದ್ದಂತೆ ಬಿರುಗಾಳಿ, ಗುಡುಗು ಸಹಿತ ಭಾರಿ ಮಳೆಯಾಗುತ್ತಿದೆ. ಇದೀಗ ಮುಂದಿನ 48 ಗಂಟೆಗಳ ಕಾಲ ವರುಣಾರ್ಭಟ ಮತ್ತಷ್ಟು ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರಿ ಮಳೆಯೊಂದಿಗೆ ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸಲಿದ್ದು, ಬಿರುಗಾಳಿಯ ತೀವ್ರತೆಗೆ ಮರಗಳು ಹಾಗೂ ವಿದ್ಯುತ್ ಕಂಬಗಳು ಧರೆಗುರುಳುವ ಸಾಧ್ಯತೆ ಇದೆ. ಹಾಗಾಗಿ ಸಾರ್ವಜನಿಕರು ಎಚ್ಚರಿಕೆ ವಹಿಸಲು ಸೂಚಿಸಲಾಗಿದೆ.

ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಮೇ 30 ಮತ್ತು ಮೇ 31 ರಂದು ಮುನ್ನೆಚ್ಚರಿಕಾ ಕ್ರಮವಾಗಿ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್ ಘೋಷಿಸಿದೆ.

ದಕ್ಷಿಣ ಒಳನಾಡಿನ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಸಿಡಿಲು ಮತ್ತು ಬಿರುಗಾಳಿ ಸಹಿತ 64.5 ಮಿಲಿಮೀಟರ್‌ನಿಂದ 115.5 ಮಿಲಿಮೀಟರ್‌ ವರೆಗೆ ಭಾರೀ ಪ್ರಮಾಣದ ಮಳೆಯಾಗುವ ಸಾಧ್ಯತೆಗಳಿವೆ. ಹಠಾತ್ ಮಳೆಯಿಂದಾಗಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗುವ ಮತ್ತು ವಾಹನ ಸಂಚಾರಕ್ಕೆ ಅಡಚಣೆಯಾಗುವ ಆತಂಕವಿದೆ.

ಧಾರಾಕಾರ ಮಳೆಯ ಮುನ್ಸೂಚನೆ ಇರುವ ಕಾರಣ ಸಾರ್ವಜನಿಕರು ಹಾಗೂ ರೈತರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ವಿಶೇಷವಾಗಿ ಮಳೆ ಮತ್ತು ಗಾಳಿ ಇರುವ ಸಮಯದಲ್ಲಿ ಮರಗಳ ಕೆಳಗೆ ಹಾಗೂ ವಿದ್ಯುತ್ ಕಂಬಗಳ ಬಳಿ ನಿಲ್ಲದಂತೆ ಸಾರ್ವಜನಿಕರಲ್ಲಿ ಕೋರಲಾಗಿದೆ. ಹವಾಮಾನದ ಏರುಪೇರಿನ ಮೇಲೆ ನಿರಂತರ ನಿಗಾ ಇರಿಸಲಾಗಿದ್ದು, ಯಾವುದೇ ತುರ್ತು ಪರಿಸ್ಥಿತಿಗೆ ಸಜ್ಜಾಗಿರಲು ಸ್ಥಳೀಯ ಆಡಳಿತಗಳಿಗೆ ಸೂಚನೆ ನೀಡಲಾಗಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ