LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

Rain alert : ರಾಜ್ಯಾದ್ಯಂತ ಮುಂದಿನ 6 ದಿನ ಭಾರಿ ಮಳೆ ; ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಪ್ರವೇಶಿಸಿದ್ದು, ಮುಂದಿನ 6 ದಿನಗಳ ಕಾಲ ಅಂದರೆ ಜೂನ್ 13ರವರೆಗೆ ರಾಜ್ಯದ ಹಲವೆಡೆ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ (IMD) ನೀಡಿದೆ.

ಮುಂಬರುವ ದಿನಗಳಲ್ಲಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಜೂನ್ 13ರವರೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗದಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇಷ್ಟೇ ಅಲ್ಲದೆ, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಶಿವಮೊಗ್ಗ, ದಾವಣಗೆರೆ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲೂ ಸಹ ಜೂನ್ 11ರವರೆಗೆ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ.

ಬೆಳಗಾವಿ: ಸವದತ್ತಿ ಮತ್ತು ಬೈಲಹೊಂಗಲದಲ್ಲಿ ಭಾರಿ ಮಳೆಯಿಂದಾಗಿ ರಸ್ತೆಗಳಲ್ಲಿ ಮೊಳಕಾಲುದ್ದ ನೀರು ಹರಿದು ಅವಾಂತರ ಸೃಷ್ಟಿಯಾಗಿದೆ. ಮನೆಗಳಿಗೆ ನೀರು ನುಗ್ಗಿ ಸಾರ್ವಜನಿಕರು ಪರದಾಡುವಂತಾಗಿದೆ.

ರಾಯಚೂರು: ದೇವದುರ್ಗ ತಾಲೂಕಿನ ಗಬ್ಬೂರಿನಲ್ಲಿ ಮನೆಗಳಿಗೆ ಮಳೆನೀರು ಮತ್ತು ಚರಂಡಿ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತಗೊಂಡಿದೆ.ಗೋಕರ್ಣ ಮಹಾಬಲೇಶ್ವರ ದೇವಾಲಯದ ಗರ್ಭಗುಡಿಯಲ್ಲಿ ಕೊಳಚೆ ನೀರು ತುಂಬಿದ್ದು, ಭಕ್ತರಿಗೆ ಪೂಜೆ ಸಲ್ಲಿಸಲು ತೊಂದರೆಯಾಗಿದೆ.ಕರಾವಳಿ ಭಾಗದಲ್ಲಿ ಮುಂಗಾರು ಚುರುಕುಗೊಂಡಿದ್ದು, ಭಾರಿ ಮಳೆಯ ಎಚ್ಚರಿಕೆ ನೀಡಲಾಗಿದೆ. ಮಂಗಳೂರಿನಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಸಮಿತಿಯು ಸಭೆ ನಡೆಸಿ ಸಿದ್ಧತೆಗಳನ್ನು ಪರಿಶೀಲಿಸಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿಮಕ್ಕಳ ಮನಸ್ಸು, ಮೆದುಳಿನ ಶಕ್ತಿಗೆ ದಾರಿದೀಪ ಈ ಪುಸ್ತಕ: ತಪ್ಪದೇ ಖರೀದಿಸಿ, ನಿಮ್ಮ ಮಕ್ಕಳಿಗೆ ತಪ್ಪದೇ ಓದಿಸಿ!ಹಿಂದೂಗಳ ಆಚರಣೆಗೆ ಸರ್ಕಾರ ಅಡ್ಡಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಕಾಂಗ್ರೆಸ್ ಪಕ್ಷ ಸಂಘಟನೆ ಬಲವರ್ಧನೆಗೆ 'ಕೆಪಿಸಿಸಿ ಕನೆಕ್ಟ್ ಸೆಂಟರ್' ಸ್ಥಾಪನೆ: ಪದಾಧಿಕಾರಿಗಳ ನೇಮಕ