LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

SBI ಗ್ರಾಹಕರಿಗೆ ಭರ್ಜರಿ ಗುಡ್ ನ್ಯೂಸ್ : `ATM’ ವಹಿವಾಟು ಸಂಪೂರ್ಣ ಉಚಿತ, ಯಾವುದೇ ಶುಲ್ಕವಿಲ್ಲ!

ನವದೆಹಲಿ : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ತನ್ನ ಕೋಟ್ಯಂತರ ಗ್ರಾಹಕರಿಗೆ ಭರ್ಜರಿ ಸಿಹಿಸುದ್ದಿ ನೀಡಿದೆ. ಈ ತಿಂಗಳ 28 ರಿಂದ 30 ರವರೆಗೆ ಮೂರು ದಿನಗಳ ಕಾಲ ದೇಶಾದ್ಯಂತ ಬ್ಯಾಂಕ್ ನೌಕರರ ಸಂಘಟನೆಗಳು ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ, ಗ್ರಾಹಕರಿಗೆ ತೊಂದರೆಯಾಗದಂತೆ ಎಸ್‌ಬಿಐ ಈ ಮಹತ್ವದ ವಿನಾಯಿತಿ ಘೋಷಿಸಿದೆ. ಮುಷ್ಕರ ನಡೆಯುವ ಈ ಮೂರು ದಿನಗಳಲ್ಲಿ ಎಟಿಎಂಗಳ ಮೂಲಕ ಎಷ್ಟು ಬಾರಿಯಾದರೂ ಸಂಪೂರ್ಣ ಉಚಿತವಾಗಿ ವಹಿವಾಟು ನಡೆಸಬಹುದು ಎಂದು ಬ್ಯಾಂಕ್ ಸ್ಪಷ್ಟಪಡಿಸಿದೆ.

ತನ್ನ ಅಧಿಕೃತ ‘ಎಕ್ಸ್’ (ಹಿಂದಿನ ಟ್ವಿಟರ್) ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಎಸ್‌ಬಿಐ, ಈ ಮೂರು ದಿನಗಳ ಕಾಲ ತನ್ನ ಶಾಖೆಗಳು ತೆರೆದಿರಲಿವೆ ಎಂದು ತಿಳಿಸಿದೆ. ಮುಷ್ಕರದ ಅವಧಿಯಲ್ಲಿ ಎಸ್‌ಬಿಐ ಗ್ರಾಹಕರು ದೇಶದ ಯಾವುದೇ ಬ್ಯಾಂಕಿನ ಎಟಿಎಂ ಬಳಸಿದರೂ ಅದಕ್ಕೆ ಯಾವುದೇ ಶುಲ್ಕ ವಿಧಿಸದೆ ಸಂಪೂರ್ಣ ಮನ್ನಾ ಮಾಡಲಾಗುವುದು ಎಂದು ಭರವಸೆ ನೀಡಿದೆ. ಈ ಸೌಲಭ್ಯದ ನಿಖರ ನಿಯಮ ಮತ್ತು ಷರತ್ತುಗಳಿಗಾಗಿ ಬ್ಯಾಂಕಿನ ಅಧಿಕೃತ ಪ್ರಕಟಣೆಯನ್ನು ಗಮನಿಸುವಂತೆ ಕೋರಲಾಗಿದೆ.

ಮುಷ್ಕರದ ಕಾರಣದಿಂದ ಬ್ಯಾಂಕ್ ಶಾಖೆಗಳ ದೈನಂದಿನ ಕಾರ್ಯಚಟುವಟಿಕೆಗಳಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆಯಿರುವುದರಿಂದ ಗ್ರಾಹಕರು ಎಟಿಎಂ ಮತ್ತು ಡಿಜಿಟಲ್ ಸೇವೆಗಳನ್ನು ಹೆಚ್ಚಾಗಿ ಬಳಸಿಕೊಳ್ಳುವಂತೆ ಎಸ್‌ಬಿಐ ಮನವಿ ಮಾಡಿದೆ. ಶಾಖೆಗಳಿಗೆ ಸಂಬಂಧಿಸಿದ ತುರ್ತು ಕೆಲಸಗಳನ್ನು ಮುಷ್ಕರಕ್ಕೂ ಮುನ್ನವೇ ಮುಗಿಸಿಕೊಳ್ಳಲು ಸೂಚಿಸಲಾಗಿದ್ದು, ಇಂಟರ್ನೆಟ್ ಬ್ಯಾಂಕಿಂಗ್, ಮೊಬೈಲ್ ಬ್ಯಾಂಕಿಂಗ್, ವಾಟ್ಸಾಪ್ ಬ್ಯಾಂಕಿಂಗ್ ಜೊತೆಗೆ ಯುಪಿಐ, ನೆಫ್ಟ್ (NEFT), ಆರ್‌ಟಿಜಿಎಸ್ (RTGS) ಹಾಗೂ ಐಎಂಪಿಎಸ್ (IMPS) ಪಾವತಿ ವಿಧಾನಗಳನ್ನು ಬಳಸುವಂತೆ ಗ್ರಾಹಕರಿಗೆ ಸಲಹೆ ನೀಡಲಾಗಿದೆ.

ಮತ್ತೊಂದೆಡೆ, 27 ರ ಭಾನುವಾರದಂದು ಬ್ಯಾಂಕುಗಳನ್ನು ತೆರೆದಿಡುವ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ಬ್ಯಾಂಕ್ ನೌಕರರ ಸಂಘಟನೆಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿವೆ. ಭಾನುವಾರವನ್ನು ಕೆಲಸದ ದಿನವನ್ನಾಗಿ ಘೋಷಿಸಿ ಹೊರಡಿಸಿರುವ ಆದೇಶವನ್ನು ತಕ್ಷಣವೇ ಹಿಂಪಡೆಯಬೇಕೆಂದು ಸಂಘಟನೆಗಳು ಪಟ್ಟು ಹಿಡಿದಿವೆ. ಒಂದು ವೇಳೆ ಅಂದು ಕರ್ತವ್ಯಕ್ಕೆ ಹಾಜರಾದರೆ ನೌಕರರಿಗೆ ದುಪ್ಪಟ್ಟು ವೇತನ ಹಾಗೂ ಪರಿಹಾರ ರಜೆ ನೀಡಬೇಕೆಂದು ನೌಕರರ ಒಕ್ಕೂಟಗಳು ಒತ್ತಾಯಿಸುತ್ತಿದ್ದು, ಈ ಕುರಿತು ಹಣಕಾಸು ಸೇವೆಗಳ ಇಲಾಖೆಯ ಕಾರ್ಯದರ್ಶಿಯವರನ್ನು ಭೇಟಿಯಾಗಿ ಚರ್ಚಿಸಲು ನಿರ್ಧರಿಸಿವೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸೇವೆಯಲ್ಲಿರುವ ಅಗ್ನಿವೀರರಿಗೆ ಮಾತ್ರ ಹೊಸ ಬದಲಾವಣೆ‘ರಾಮಾಯಣ’ ಸಿನಿಮಾ ನೋಡಿ ಭಾವುಕರಾದ ಅನುಪಮ್ ಖೇರ್: ಭಾರತೀಯ ಚಿತ್ರರಂಗದ ಸರ್ವಶ್ರೇಷ್ಠ ಸಿನಿಮಾ ಎಂದ ನಟ!ಮುಂಬೈ ಅಂತರ ಶಾಲಾ ಬಾಸ್ಕೆಟ್‌ಬಾಲ್ ಧಮಾಕಾ: ಡಾನ್ ಬೊಸ್ಕೊ ಮಣಿಸಿ ಟ್ರೋಫಿ ಎತ್ತಿಹಿಡಿದ ಅಂಡೇರಿಯಾ ಎಂಪಿಎಸ್!Motorola Signature 27 Snapdragon 8 Elite Extreme Gen 6 ಮತ್ತು 200MP ಟೆಲಿಫೋಟೋ ಲೆನ್ಸ್‌ನೊಂದಿಗೆ ಅನಾವರಣಬಾಲಿವುಡ್ ಅಂಗಳದಲ್ಲಿ ಹೊಸ ಲವ್ ಸ್ಟೋರಿ: ಗೆಳತಿ ಜೊತೆ ಮನೀಶ್ ಮಲ್ಹೋತ್ರಾ ಪಾರ್ಟಿಯಲ್ಲಿ ಮಾಧುರಿ ದೀಕ್ಷಿತ್ ಮಗ!ಬ್ಯಾಂಕ್ ಲಾಕರ್’ ನಲ್ಲಿ ಇಟ್ಟಿದ್ದ ₹47 ಲಕ್ಷದ ಚಿನ್ನಾಭರಣ ನಾಪತ್ತೆ! ಮಹಿಳೆಯ ಹೋರಾಟಕ್ಕೆ ಕೊನೆಗೂ ಸಿಕ್ತು ಜಯ!ರಾಮಾಯಣ’ದಲ್ಲಿ ರಾಮನಾಗಿ ರಣಬೀರ್, ರಾವಣನಾಗಿ ಯಶ್; ಇಬ್ಬರಲ್ಲಿ ಶ್ರೀಮಂತ ನಟ ಯಾರು?ಕೈ ಕೈ ಹಿಡಿದು ಬಂದ ಐಶ್ವರ್ಯಾ ರೈ–ಅಭಿಷೇಕ್ ಜೋಡಿ; ರೊಮ್ಯಾಂಟಿಕ್ ಕ್ಷಣ ವೈರಲ್! ವಿಚ್ಛೇದನದ ವದಂತಿಗಳಿಗೆ ಬ್ರೇಕ್?ಆಸೀಸ್ ಕ್ರಿಕೆಟರ್ ಗೆ ಕೊಕೇನ್ ಶಾಕ್: ತಪ್ಪು ಒಪ್ಪಿಕೊಂಡು ನಿಷೇಧ ಪೂರ್ಣಗೊಳಿಸಿದ ಕ್ರಿಸ್ ಲಿನ್!ಧನ್ತೇರಸ್ 2026: ಚಿನ್ನ ಖರೀದಿಗೆ ಶುಭ ಮುಹೂರ್ತ ಯಾವಾಗ? ಬೆಂಗಳೂರು ಸೇರಿ ಪ್ರಮುಖ ನಗರಗಳ ಪೂಜಾ ಸಮಯ ಇಲ್ಲಿದೆ