LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

Scholarship : ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯಿಂದ 2026-27 ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದಲ್ಲಿ ಹಿಂದಿನ ಸಾಲಿನಲ್ಲಿ ವಿದ್ಯಾರ್ಥಿವೇತನ ಪಡೆದಿರುವ ವಿದ್ಯಾರ್ಥಿಗಳು ಪ್ರಸಕ್ತ ಸಾಲಿನಲ್ಲಿ ಅರ್ಜಿ ಸಲ್ಲಿಸುವಂತಿಲ್ಲ. ಹಿಂದಿನ ಶೈಕ್ಷಣಿಕ ಸಾಲಿನಲ್ಲಿ ಅರ್ಜಿಯು ತಿರಸ್ಕೃತಗೊಂಡು ವಿದ್ಯಾರ್ಥಿವೇತನ ಪಡೆಯದೇ ಇರುವಂತಹ ವಿದ್ಯಾರ್ಥಿಗಳು ಹಾಗೂ ಈ ಹಿಂದೆ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸದೇ ಇರುವಂತಹ ಮತ್ತು 2026-27 ನೇ ಸಾಲಿನ ನವೀನ ವಿದ್ಯಾರ್ಥಿಗಳು ಮಾತ್ರ ಅರ್ಜಿ ಸಲ್ಲಿಸತಕ್ಕದ್ದು.

ವೆಬ್‌ಸೈಟ್ Prematric Application Submission URL: http://ssp.postmatric.karnataka.gov.in/ssppre/ ನಲ್ಲಿ ಜೂ. 30 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಶಿವಮೊಗ್ಗ ತಾಲ್ಲೂಕು ಸಹಾಯಕ ನಿರ್ದೇಶಕರು(ಗ್ರೇಡ್-1) ತಿಳಿಸಿದ್ದಾರೆಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ ತಾಲ್ಲೂಕು ಸಹಾಯಕ ನಿರ್ದೇಶಕರ (ಗ್ರೇಡ್-1) ಕಚೇರಿ, ಸಮಾಜ ಕಲ್ಯಾಣ ಇಲಾಖೆ, ವಿದ್ಯಾನಗರ, ಬಿ ಹೆಚ್ ರಸ್ತೆ, ದೂ.ಸಂ: 08182-240512 ನ್ನು ಸಂಪರ್ಕಿಸುವುದು ಎಂದು ಪ್ರಕಟಣೆ ತಿಳಿಸಿದೆ.

ಮೈಸೂರು: ಬಿ.ವಿ.ಎ, ದೃಶ್ಯಕಲೆಯಲ್ಲಿ ಸ್ನಾತಕ ಪದವಿ ಪ್ರವೇಶಾತಿಗೆ ಅರ್ಜಿ ಆಹ್ವಾನ

ಶಿವಮೊಗ್ಗ: ಜೂನ್ 09:(ಕರ್ನಾಟಕ ವಾರ್ತೆ): ಮೈಸೂರು ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜಿನಲ್ಲಿ ಬ್ಯಾಚುರಲ್ ಆಫ್ ವಿಜ್ಯುಯಲ್ ಆರ್ಟ್ಸ್ ನಾಲ್ಕು ವರ್ಷದ ಎಂಟು ಸೆಮಿಸ್ಟರ್‌ಗಳ ರಾಜ್ಯ ಶಿಕ್ಷಣ ಪದ್ಧತಿಯಲ್ಲಿ 2026-27 ನೇ ಶೈಕ್ಷಣಿಕ ಸಾಲಿಗೆ ದ್ವಿತೀಯ ಪಿ.ಯು.ಸಿ. ಸಮಾನಾಂತರ ಕೋರ್ಸುಗಳಲ್ಲಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳಿಂದ ಪ್ರಥಮ ವರ್ಷದ ಬಿ.ವಿ.ಎ. ದೃಶ್ಯ ಕಲೆಯಲ್ಲಿ ಸ್ನಾತಕ ಪದವಿಗಳಾದ ಚಿತ್ರಕಲೆ, ಶಿಲ್ಪಕಲೆ, ಗ್ರಾಫಿಕ್ಸ್, ಅನ್ವಯಕಲೆ, ಕಲಾ ಇತಿಹಾಸ, ಛಾಯಾಚಿತ್ರ ಹಾಗೂ ಛಾಯಾಚಿತ್ರ ಪತ್ರಿಕೋಧ್ಯಮ ವಿಭಾಗಗಳಲ್ಲಿ ಪದವಿ ಪ್ರವೇಶಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು https;//uucms.karnataka.gov.in ಆನ್‌ಲೈನ್ ಮೂಲಕ ಜೂ. 12 ರೊಳಗಾಗಿ ಸಲ್ಲಿಸುವುದು. ಪ್ರವೇಶಾತಿ ಕೋರಿ ಅರ್ಜಿಸಲ್ಲಿಸಿದ ಅಭ್ಯರ್ಥಿಗಳನ್ನು ಆಯ್ಕೆಮಾಡಲು ಅರ್ಹತಾ ಪರೀಕ್ಷೆ ಮತ್ತು ವೈಯಕ್ತಿಕ ಸಂದರ್ಶನವನ್ನು ಜೂ.15 ರಂದು ನಡೆಸಲಾಗುವುದು ಎಂದು ಕಾಲೇಜಿನ ಡೀನ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಈ ಕಾರ್ಯಾಲಯದ ದೂರವಾಣಿ ಸಂಖ್ಯೆ 0821-2438931 ಯನ್ನು ಸಂಪರ್ಕಿಸಬಹುದು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ