LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

SHOCKING : ಮೈಸೂರಿನಲ್ಲಿ ಘೋರ ದುರಂತ : ‘ಪಾಗಲ್ ಪ್ರೇಮಿ’ ಕಿರುಕುಳಕ್ಕೆ ಮದುವೆಗೆ 1 ದಿನ ಬಾಕಿ ಇರುವಾಗಲೇ ತಂದೆ-ತಾಯಿ, ಮಗಳು ಆತ್ಮಹತ್ಯೆ!

ಮೈಸೂರು ಜಿಲ್ಲೆಯ ಟಿ. ನರಸೀಪುರ ತಾಲ್ಲೂಕಿನ ಕೆಂಪಯ್ಯನ ಹುಂಡಿಯಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಮದುವೆಗೆ ಸಿದ್ಧತೆಗಳು ನಡೆಯುತ್ತಿದ್ದ ಕುಟುಂಬದಲ್ಲಿ ತಂದೆ, ತಾಯಿ ಹಾಗೂ ಮಗಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.

ಹೌದು. ಮೈಸೂರು ಜಿಲ್ಲೆಯ ಟಿ. ನರಸೀಪುರ ತಾಲ್ಲೂಕಿನ ಕೆಂಪಯ್ಯನ ಹುಂಡಿಯಲ್ಲಿ ಮದುವೆಗೆ ಒಂದು ದಿನ ಬಾಕಿ ಇರುವಾಗಲೇ ಒಂದೇ ಕುಟುಂಬದ ಮೂವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ. ಮೃತ ಯುವತಿಗೆ ಮಾಜಿ ಪರಿಚಿತನಿಂದ ನಿರಂತರ ಕಿರುಕುಳ ಹಾಗೂ ಬೆದರಿಕೆ ಎದುರಾಗಿದ್ದ ಹಿನ್ನೆಲೆಯಲ್ಲಿ ತಂದೆ, ತಾಯಿ ಮತ್ತು ಮಗಳು ಈ ಕಠಿಣ ನಿರ್ಧಾರಕ್ಕೆ ಶರಣಾಗಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಸ್ಥಳದಲ್ಲಿ ಡೆತ್ ನೋಟ್ ಪತ್ತೆಯಾಗಿರುವುದರಿಂದ ಪ್ರಕರಣ ಮತ್ತಷ್ಟು ಗಂಭೀರ ಸ್ವರೂಪ ಪಡೆದುಕೊಂಡಿದೆ.

ಏನಿದು ಘಟನೆ

ಮೃತರನ್ನು ಶಿವಣ್ಣ, ನಾಗರತ್ನ ಹಾಗೂ ಅವರ ಪುತ್ರಿ ರಕ್ಷಿತಾ ಎಂದು ಗುರುತಿಸಲಾಗಿದೆ. ರಕ್ಷಿತಾಳ ಮದುವೆ ನಾಳೆ ನಡೆಯಬೇಕಿದ್ದು, ಈ ಹಿನ್ನೆಲೆಯಲ್ಲಿ ಕುಟುಂಬದಲ್ಲಿ ಸಂಭ್ರಮದ ವಾತಾವರಣ ಇತ್ತು. ಆದರೆ ಮದುವೆಗೆ ಮುನ್ನವೇ ಈ ದುರಂತ ಸಂಭವಿಸಿದೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ರಕ್ಷಿತಾಳಿಗೆ ಈ ಹಿಂದೆ ಪರಿಚಯವಿದ್ದ ಉಲ್ಲಾಸ್ ಗೌಡ ಎಂಬಾತ ಮದುವೆ ವಿಚಾರವಾಗಿ ನಿರಂತರ ಕಿರುಕುಳ ನೀಡುತ್ತಿದ್ದನೆಂದು ಆರೋಪಿಸಲಾಗಿದೆ. ರಕ್ಷಿತಾಳ ನಿಶ್ಚಿತಾರ್ಥ ಆಗಿದ್ದ ಯುವಕನಿಗೆ ಉಲ್ಲಾಸ್ ಸಂದೇಶಗಳನ್ನು ಕಳುಹಿಸಿ, “ನಾನು ರಕ್ಷಿತಾಳನ್ನು ಮದುವೆಯಾಗಬೇಕಿತ್ತು, ಆಕೆ ಬೇರೆ ವ್ಯಕ್ತಿಯನ್ನು ಹೇಗೆ ಮದುವೆಯಾಗುತ್ತಾಳೆ” ಎಂದು ಪ್ರಶ್ನಿಸುತ್ತಿದ್ದನೆನ್ನಲಾಗಿದೆ.

ಅಷ್ಟೇ ಅಲ್ಲದೆ, ಮದುವೆ ಮಂಟಪಕ್ಕೆ ಬಂದು ಮದುವೆ ನಿಲ್ಲಿಸುವುದಾಗಿ ಬೆದರಿಕೆ ಹಾಕಿದ್ದಾನೆ ಎಂಬ ಆರೋಪವೂ ಕೇಳಿಬಂದಿದೆ. ರಕ್ಷಿತಾಳ ಫೋಟೋಗಳು ಹಾಗೂ ಹಳೆಯ ಸಂದೇಶಗಳನ್ನು ಬಳಸಿಕೊಂಡು ಮಾನಸಿಕ ಕಿರುಕುಳ ನೀಡುತ್ತಿದ್ದನೆಂದು ಕುಟುಂಬದವರು ಡೆತ್ ನೋಟ್‌ನಲ್ಲಿ ಉಲ್ಲೇಖಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಘಟನಾ ಸ್ಥಳದಲ್ಲಿ ಡೆತ್ ನೋಟ್ ಪತ್ತೆಯಾಗಿದ್ದು, ಪೊಲೀಸರು ಅದನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸುತ್ತಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣವೇನು ಎಂಬುದರ ಬಗ್ಗೆ ತನಿಖೆ ಮುಂದುವರಿದಿದೆ. ಆರೋಪಿ ಉಲ್ಲಾಸ್ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.ಈ ಘಟನೆ ಇಡೀ ಗ್ರಾಮವನ್ನು ಬೆಚ್ಚಿಬೀಳಿಸಿದ್ದು, ಮದುವೆಯ ಸಂಭ್ರಮದಲ್ಲಿರಬೇಕಿದ್ದ ಕುಟುಂಬದ ಅಂತ್ಯ ಕಂಡು ಸ್ಥಳೀಯರು ಕಂಬನಿ ಮಿಡಿದಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
CWRC ನೀಡಿರುವ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಲಾಗುವುದು: ರಾಜ್ಯದ ರೈತರ ಹಿತ ಕಾಯಲು ಸರ್ಕರ ಬದ್ಧ: ಸಚಿವ ರಾಮಲಿಂಗಾರೆಡ್ಡಿBIG NEWS: ಮೇಕೆದಾಟು ಯೋಜನೆಗೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ; ಆದರೂ ಡಿ.ಕೆ.ಶಿವಕುಮಾರ್ ತಮಿಳುನಾಡು ಸಿಎಂ ಅವರನ್ನು ಸಂಧಾನಕ್ಕೆ ಆಹ್ವಾನಿಸಿದ್ದೇಕೆ? ಆರ್.ಅಶೋಕ್ ಪ್ರಶ್ನೆಮಾಜಿ ಸಿಎಂ ಜೆ.ಹೆಚ್. ಪಟೇಲ್ ಬೆಂಬಲಿಗರಾಗಿದ್ದ ಪಿ. ಶೇಖರಪ್ಪ ನಿಧನSHOCKING : ಲವರ್ ಜೊತೆ ಮಾತನಾಡಲು ಅಡ್ಡಿ ; ಅಳುತ್ತಿದ್ದ 3 ವರ್ಷದ ಮಗನನ್ನೇ ಕೊಂದ ಪಾಪಿ ತಾಯಿ.!ಸ್ವಾತಂತ್ರೋತ್ಸವ ಫಲಪುಷ್ಪ ಪ್ರದರ್ಶನ : ಲಾಲ್‌ಬಾಗ್‌ನಲ್ಲಿ ವಿವಿಧ ಸ್ಪರ್ಧೆ, ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನಅಕ್ರಮ ಬಾಂಗ್ಲಾ ವಲಸಿಗರ ಬಗ್ಗೆ ಮಾಹಿತಿ ನೀಡಿದವರೇ ಅರೆಸ್ಟ್: ಹೈಕೋರ್ಟ್ ತರಾಟೆಜಲಾಶಯದ ನೀರನ್ನು ಕುಡಿಯುವ ನೀರಿಗಾಗಿ ಮಾತ್ರ ಬಳಸಿBIG NEWS : ಸೈಬರ್ ಅಪರಾಧಗಳಿಗೆ ಮರಣದಂಡನೆ ; ಸಂಸತ್ತಿನಲ್ಲಿ ಮಹತ್ವದ ಮಸೂದೆ ಅಂಗೀಕಾರBREAKING : ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಉದ್ವಿಗ್ನತೆ ; ಭದ್ರತಾ ಪಡೆಗಳ ಗುಂಡಿನ ದಾಳಿಯಲ್ಲಿ 20 ಮಂದಿ ಸಾವುಪೊಲೀಸ್ ನೇಮಕಾತಿ ಪರೀಕ್ಷೆ: ವಸ್ತ್ರಸಂಹಿತೆ, ನಿಷೇಧಿತ ವಸ್ತುಗಳು ಸೇರಿ ಅಭ್ಯರ್ಥಿಗಳಿಗೆ ಇಲ್ಲಿದೆ ಮಹತ್ವದ ಸೂಚನೆ