LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

SHOCKING : ಬೀದರ್‌ನಲ್ಲಿ ದಾರುಣ ಘಟನೆ : ವಿದ್ಯುತ್ ತಂತಿ ತುಳಿದು 8 ವರ್ಷದ ಬಾಲಕ ಸಾವು.!

ಬೀದರ್ : ಬೀದರ್ ಜಿಲ್ಲೆಯ ಹುಲಸೂರು ಪಟ್ಟಣದಲ್ಲಿ ಭಾರೀ ಮಳೆಯ ಕಾರಣದಿಂದ ನೆಲಕ್ಕೆ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ 8 ವರ್ಷದ ಬಾಲಕನೊಬ್ಬ ಸಾವನ್ನಪ್ಪಿದ್ದಾನೆ.

ಮೃತ ಬಾಲಕನನ್ನು ಅಲಿ ಮೊಮಿನ್ ಎಂದು ಗುರುತಿಸಲಾಗಿದೆ.ಜಿಲ್ಲೆಯಲ್ಲಿ ಸುರಿದ ಬಿರುಗಾಳಿ ಸಹಿತ ಭಾರೀ ಮಳೆಗೆ ವಿದ್ಯುತ್ ಕಂಬದಿಂದ ಮನೆಗೆ ಸಂಪರ್ಕ ಕಲ್ಪಿಸಿದ್ದ ವೈರ್ ತುಂಡಾಗಿ ನೆಲಕ್ಕೆ ಬಿದ್ದಿತ್ತು.ಆಟವಾಡುತ್ತಿದ್ದ ಬಾಲಕ ಅರಿವಿಲ್ಲದೆ ಆ ವೈರ್ ಅನ್ನು ಮುಟ್ಟಿದ್ದರಿಂದ, ವಿದ್ಯುತ್ ಆಘಾತಕ್ಕೊಳಗಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ.ಕೂಡಲೇ ಬಾಲಕನನ್ನು ಆಸ್ಪತ್ರೆಗೆ ಸಾಗಿಸಿದರೂ ಚಿಕಿತ್ಸೆ ಫಲಕಾರಿಯಾಗಲಿಲ್ಲ.

ಈ ಘಟನೆಯು ಹುಲಸೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಜೆಸ್ಕಾಂ (GESCOM) ಅಧಿಕಾರಿಗಳ ನಿರ್ಲಕ್ಷ್ಯವೇ ಮಗುವಿನ ಸಾವಿಗೆ ಕಾರಣವೆಂದು ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ