LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

SHOCKING : ‘ಡೆಲಿವರಿ ಬಾಯ್’ ಮೇಲೆ ಚಿರತೆ ದಾಳಿ ; ಬೈಕ್ ಮೇಲೆ ಹಾರಿದ ಭಯಾನಕ ದೃಶ್ಯ ‘CCTVಯಲ್ಲಿ ಸೆರೆ |WATCH VIDEO

ಮಧ್ಯಪ್ರದೇಶದ ಇಂದೋರ್ ನಗರದ ಬಿಚೋಲಿ ಮರ್ಧಾನಾ ಪ್ರದೇಶದಲ್ಲಿ ಚಿರತೆಯೊಂದು ವಸತಿ ಪ್ರದೇಶಕ್ಕೆ ನುಗ್ಗಿ ಡೆಲಿವರಿ ಬಾಯ್ ಮೇಲೆ ದಾಳಿ ನಡೆಸಿದ ಘಟನೆ ಭಾರೀ ಆತಂಕಕ್ಕೆ ಕಾರಣವಾಗಿದೆ. ಈ ಭಯಾನಕ ಘಟನೆ ಸಮೀಪದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಅದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಸಿಸಿಟಿವಿ ದೃಶ್ಯಗಳಲ್ಲಿ, ಡೆಲಿವರಿ ಬಾಯ್ ಬೈಕ್‌ನಲ್ಲಿ ರಸ್ತೆಯಲ್ಲಿ ಸಾಗುತ್ತಿದ್ದಾಗ ಕತ್ತಲೆಯಿಂದ ಏಕಾಏಕಿ ಹೊರಬಂದ ಚಿರತೆ ಬೈಕ್ ಮೇಲೆಯೇ ಹಾರಿ ದಾಳಿ ನಡೆಸಿರುವುದು ಕಾಣಿಸುತ್ತದೆ. ದಾಳಿಯ ತೀವ್ರತೆಗೆ ಬೈಕ್ ನೆಲಕ್ಕುರುಳಿದರೂ, ಯುವಕ ಸಮಯಪ್ರಜ್ಞೆಯಿಂದ ಎದ್ದು ಓಡಿ ತನ್ನ ಪ್ರಾಣವನ್ನು ಉಳಿಸಿಕೊಂಡಿದ್ದಾನೆ. ಇದರಿಂದ ದೊಡ್ಡ ಅನಾಹುತ ತಪ್ಪಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳೀಯರು ಪೊಲೀಸ್ ಇಲಾಖೆ ಹಾಗೂ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಪೊಲೀಸರು ಮತ್ತು ಅರಣ್ಯ ಇಲಾಖೆ ಸಿಬ್ಬಂದಿ ಜಂಟಿಯಾಗಿ ಸ್ಥಳಕ್ಕೆ ಧಾವಿಸಿ, ಸುತ್ತಮುತ್ತಲಿನ ಪೊದೆಗಳು, ಹೊಲಗಳು ಹಾಗೂ ಚಿರತೆ ಅಡಗಿರಬಹುದಾದ ಪ್ರದೇಶಗಳಲ್ಲಿ ಹಲವು ಗಂಟೆಗಳ ಕಾಲ ಶೋಧ ಕಾರ್ಯಾಚರಣೆ ನಡೆಸಿದರು.ಆದರೆ, ಇದುವರೆಗೆ ಚಿರತೆ ಪತ್ತೆಯಾಗಿಲ್ಲ. ಅದು ಸಮೀಪದ ಅರಣ್ಯ ಪ್ರದೇಶಕ್ಕೆ ಮರಳಿರುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸ್ಥಳೀಯರಿಗೆ ಎಚ್ಚರಿಕೆ

ಶೋಧ ಕಾರ್ಯಾಚರಣೆ ಮುಂದುವರಿದಿರುವ ಹಿನ್ನೆಲೆಯಲ್ಲಿ ಆಡಳಿತವು ಸ್ಥಳೀಯ ನಿವಾಸಿಗಳಿಗೆ ಎಚ್ಚರಿಕೆ ಸೂಚನೆ ನೀಡಿದೆ. ರಾತ್ರಿ ವೇಳೆ ಅನಗತ್ಯವಾಗಿ ಒಬ್ಬರೇ ಹೊರಗೆ ತೆರಳದಂತೆ, ಚಿರತೆ ಕಂಡುಬಂದರೆ ಅಥವಾ ಅದರ ಹೆಜ್ಜೆ ಗುರುತುಗಳು ಕಂಡುಬಂದರೆ ಕೂಡಲೇ ಅರಣ್ಯ ಇಲಾಖೆ ಅಥವಾ ಪೊಲೀಸರಿಗೆ ಮಾಹಿತಿ ನೀಡುವಂತೆ ಮನವಿ ಮಾಡಲಾಗಿದೆ.

ಚಿರತೆಯ ಈ ದಾಳಿಯ ವಿಡಿಯೋ ವೈರಲ್ ಆದ ನಂತರ ಪ್ರದೇಶದ ನಿವಾಸಿಗಳಲ್ಲಿ ಭಯದ ವಾತಾವರಣ ನಿರ್ಮಾಣವಾಗಿದ್ದು, ಅರಣ್ಯ ಇಲಾಖೆ ಚಿರತೆಯನ್ನು ಸುರಕ್ಷಿತವಾಗಿ ಸೆರೆಹಿಡಿಯಲು ಕಾರ್ಯಾಚರಣೆಯನ್ನು ತೀವ್ರಗೊಳಿಸಿದೆ.


Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ