LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕುಡಿದು ವಾಹನ ಚಾಲನೆ ಮಾಡಿದ ಸ್ಟಾರ್ ಕ್ರಿಕೆಟಿಗ ಡೇವಿಡ್ ವಾರ್ನರ್ ಅರೆಸ್ಟ್

ಸಿಡ್ನಿ: ಆಸ್ಟ್ರೇಲಿಯಾದ ಮಾಜಿ ಸ್ಟಾರ್ ಕ್ರಿಕೆಟಿಗ ಡೇವಿಡ್ ವಾರ್ನರ್ ಅವರನ್ನು ಡ್ರಿಂಕ್ ಅಂಡ್ ಡ್ರೈವ್ ಕೇಸ್ ನಲ್ಲಿ ಬಂಧಿಸಲಾಗಿದೆ.

ಸಿಡ್ನಿಯ ಮರೂಬ್ರಾದಲ್ಲಿ ಪೊಲೀಸ್ ಅಧಿಕಾರಿಗಳು ಡ್ರಿಂಕ್ ಅಂಡ್ ಡ್ರೈವ್ ಪರೀಕ್ಷೆ ನಡೆಸಿದಾಗ ಡೇವಿಡ್ ವಾರ್ನರ್ ಮದ್ಯ ಸೇವನೆ ಮಾಡಿರುವುದು ದೃಢಪಟ್ಟಿದೆ. ಕೂಡಲೇ ಅವರನ್ನು ಬಂಧಿಸಿ ಪ್ರಕರಣ ದಾಖಲಿಸಿದ ಪೊಲೀಸರು ವಿಚಾರಣೆ ನಡೆಸಿ ಬಿಟ್ಟು ಕಳುಹಿಸಿದ್ದಾರೆ. ಮೇ 7ರಂದು ಅವರು ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಬೇಕಿದೆ.

ಕಳೆದ ವಾರ ಪಾಕಿಸ್ತಾನ ಸೂಪರ್ ಲೀಗ್ ನಲ್ಲಿ ಕರಾಚಿ ಕಿಂಗ್ಸ್ ಪರ ಡೇವಿಡ್ ವಾರ್ನರ್ ಆಟವಾಡಿದ್ದರು. ಲೀಗ್ ಆರಂಭವಾದ ಬಳಿಕ ಆಟಗಾರರು ಸಾಮಾನ್ಯವಾಗಿ ಸ್ವದೇಶಕ್ಕೆ ತೆರಳುವುದಿಲ್ಲ. ಆದರೆ ವಾರ್ನರ್ ಲೀಗ್ ನಡೆಯುವಾಗಲೇ ಸ್ವದೇಶಕ್ಕೆ ಹೋಗಿದ್ದರು. ಲೀಗ್ ನಿಂದ ಹೊರ ಬರುವ ಉದ್ದೇಶದಿಂದಲೇ ಮದ್ಯ ಸೇವಿಸಿ ಕಾರ್ ಚಾಲನೆ ಮಾಡಿದ್ದಾರೆ ಎಂದು ಹೇಳಲಾಗಿದೆ.

ಸಿಡ್ನಿಯ ಮರೂಬ್ರಾದಲ್ಲಿ ಭಾನುವಾರ ತಡರಾತ್ರಿ ಉಸಿರಾಟದ ಪರೀಕ್ಷೆಯಲ್ಲಿ ವಿಫಲವಾದ ನಂತರ ಅವರು ಕಾನೂನುಬದ್ಧ ಮದ್ಯದ ಮಿತಿಗಿಂತ ಎರಡು ಪಟ್ಟು ಹೆಚ್ಚು ಮದ್ಯ ಸೇವಿಸಿರುವುದು ಕಂಡುಬಂದಿದೆ. ವಾರ್ನರ್ ಪರೀಕ್ಷಾ ಸ್ಥಳವನ್ನು ತಲುಪುವ ಮೊದಲು ತನ್ನ ವಾಹನವನ್ನು ನಿಲ್ಲಿಸಿದ್ದರು, ನಂತರ ಅಧಿಕಾರಿಗಳು ಅವರನ್ನು ಸಂಪರ್ಕಿಸಿ ಉಸಿರಾಟದ ಪರೀಕ್ಷೆಯನ್ನು ನಡೆಸಿದ್ದು ಸಕಾರಾತ್ಮಕ ಫಲಿತಾಂಶವನ್ನು ನೀಡಿದೆ ಎಂದು NSW ಪೊಲೀಸರು ತಿಳಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
‘ರಾಮಾಯಣ’ ಸಿನಿಮಾ ನೋಡಿ ಭಾವುಕರಾದ ಅನುಪಮ್ ಖೇರ್: ಭಾರತೀಯ ಚಿತ್ರರಂಗದ ಸರ್ವಶ್ರೇಷ್ಠ ಸಿನಿಮಾ ಎಂದ ನಟ!ಮುಂಬೈ ಅಂತರ ಶಾಲಾ ಬಾಸ್ಕೆಟ್‌ಬಾಲ್ ಧಮಾಕಾ: ಡಾನ್ ಬೊಸ್ಕೊ ಮಣಿಸಿ ಟ್ರೋಫಿ ಎತ್ತಿಹಿಡಿದ ಅಂಡೇರಿಯಾ ಎಂಪಿಎಸ್!Motorola Signature 27 Snapdragon 8 Elite Extreme Gen 6 ಮತ್ತು 200MP ಟೆಲಿಫೋಟೋ ಲೆನ್ಸ್‌ನೊಂದಿಗೆ ಅನಾವರಣಬಾಲಿವುಡ್ ಅಂಗಳದಲ್ಲಿ ಹೊಸ ಲವ್ ಸ್ಟೋರಿ: ಗೆಳತಿ ಜೊತೆ ಮನೀಶ್ ಮಲ್ಹೋತ್ರಾ ಪಾರ್ಟಿಯಲ್ಲಿ ಮಾಧುರಿ ದೀಕ್ಷಿತ್ ಮಗ!ಬ್ಯಾಂಕ್ ಲಾಕರ್’ ನಲ್ಲಿ ಇಟ್ಟಿದ್ದ ₹47 ಲಕ್ಷದ ಚಿನ್ನಾಭರಣ ನಾಪತ್ತೆ! ಮಹಿಳೆಯ ಹೋರಾಟಕ್ಕೆ ಕೊನೆಗೂ ಸಿಕ್ತು ಜಯ!ರಾಮಾಯಣ’ದಲ್ಲಿ ರಾಮನಾಗಿ ರಣಬೀರ್, ರಾವಣನಾಗಿ ಯಶ್; ಇಬ್ಬರಲ್ಲಿ ಶ್ರೀಮಂತ ನಟ ಯಾರು?ಕೈ ಕೈ ಹಿಡಿದು ಬಂದ ಐಶ್ವರ್ಯಾ ರೈ–ಅಭಿಷೇಕ್ ಜೋಡಿ; ರೊಮ್ಯಾಂಟಿಕ್ ಕ್ಷಣ ವೈರಲ್! ವಿಚ್ಛೇದನದ ವದಂತಿಗಳಿಗೆ ಬ್ರೇಕ್?ಆಸೀಸ್ ಕ್ರಿಕೆಟರ್ ಗೆ ಕೊಕೇನ್ ಶಾಕ್: ತಪ್ಪು ಒಪ್ಪಿಕೊಂಡು ನಿಷೇಧ ಪೂರ್ಣಗೊಳಿಸಿದ ಕ್ರಿಸ್ ಲಿನ್!ಧನ್ತೇರಸ್ 2026: ಚಿನ್ನ ಖರೀದಿಗೆ ಶುಭ ಮುಹೂರ್ತ ಯಾವಾಗ? ಬೆಂಗಳೂರು ಸೇರಿ ಪ್ರಮುಖ ನಗರಗಳ ಪೂಜಾ ಸಮಯ ಇಲ್ಲಿದೆಉತ್ತರ ಪ್ರದೇಶದಲ್ಲಿ ಮೂರನೇ ಅವಧಿಗಾಗಿ ಬಿಜೆಪಿಯ ತಂತ್ರ: ಕಲ್ಯಾಣ ಯೋಜನೆ, ಮಹಿಳಾ ಮತ ಮತ್ತು ಯೋಗಿ ವರ್ಚಸ್ಸಿನ ಮೇಲೆ ಭರವಸೆ