LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

TB ಡ್ಯಾಂನಿಂದ ನ.20ರವರೆಗೆ ಕಾಲುವೆಗೆ ನೀರು‌ ಹರಿಸಲು ನಿರ್ಧಾರ: ಸಚಿವ ಶಿವರಾಜ್ ತಂಗಡಗಿ

ಬೆಂಗಳೂರು : ತುಂಗಭದ್ರಾ ಅಣೆಕಟ್ಟೆಯಿಂದ‌ ರಾಯಚೂರು, ಕೊಪ್ಪಳ, ಬಳ್ಳಾರಿ ‌ಹಾಗೂ ವಿಜಯನಗರ ಜಿಲ್ಲೆಗಳಿಗೆ ಕುಡಿಯಲು ಮತ್ತು ನಿಂತ ಬೆಳೆಗಳಿಗೆ ನ.20ರವರೆಗೆ ನೀರು ಒದಗಿಸಲು ತೀರ್ಮಾನಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರೂ ಆದ ನೀರಾವರಿ ಸಲಹಾ ಸಮಿತಿ ಅಧ್ಯಕ್ಷರು ಶಿವರಾಜ್. ಎಸ್. ತಂಗಡಗಿ ಅವರು ಹೇಳಿದ್ದಾರೆ.

ವಿಕಾಸಸೌಧದಲ್ಲಿ ಸೋಮವಾರ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ತುಂಗಭದ್ರಾ ನೀರಾವರಿ ಸಲಹಾ ಸಮಿತಿ ಸಭೆ ಬಳಿಕ ಮಾತನಾಡಿದ ಸಚಿವರು, ಪ್ರಸ್ತುತ ಜಲಾಶಯದಲ್ಲಿ ನೀರಿನ 53 ಟಿಎಂಸಿ ಇದ್ದು, ಇದರಲ್ಲಿ ಇದರಲ್ಲಿ ಡೆಟ್ ಸ್ಟೋರೆಜ್ 2 ಟಿಎಂಸಿ, ಅವಿಯಾಗುವಿಕೆ 3.50 ಟಿಎಂಸಿ, ಈ ಪೈಕಿ ರಾಜ್ಯದ ಪಾಲು 25.25 ಟಿಎಂಸಿ, ಆಂಧ್ರಪ್ರದೇಶ 18.50 ಟಿಎಂಸಿ, ತೆಲಂಗಾಣದ ಪಾಲು   1.50 ಟಿಎಂಸಿ‌ ಇದೆ. ಈ ಹಿನ್ನೆಲೆಯಲ್ಲಿ ಜಲಾಶಯದಲ್ಲಿನ ನೀರಿನ ಲಭ್ಯತೆ ಆಧಾರಿಸಿ ನಾಲ್ಕು ಜಿಲ್ಲೆಗಳಿಗೆ ಕುಡಿಯುವ ನೀರು ಹಾಗೂ ನಿಂತ ಬೆಳೆಗಳಿಗೆ ನೀರನ್ನು ಹಂಚಿಕೆ ಮಾಡಲಾಗಿದೆ ಎಂದು ತಿಳಿಸಿದರು.

ತುಂಗಭದ್ರಾ ಎಡದಂಡೆ ಮುಖ್ಯಕಾಲುವೆ ಮೂಲಕ ಅ.21ರಿಂದ ನ.20ರವರೆಗೆ 3800 ಕ್ಯೂಸೆಕ್ಸ್ ನಂತೆ ಪ್ರತಿ ವಿಭಾಗದಿಂದ 200 ಕ್ಯೂಸೆಕ್ಸ್ ನಂತೆ ಉಳಿತಾಯ ಮಾಡಿ ಗಣೇಕಲ್ ಜಲಾಶಯಕ್ಕೆ ನೀರು ಒದಗಿಸುವುದು. ತುಂಗಭದ್ರಾ ಬಲದಂಡೆ ಮೇಲ್ಮಟ್ಟದ ಕಾಲುವೆಗೆ ಅ.21ರಿಂದ ಅ.24ರವರೆಗೆ 1000 ಕ್ಯೂಸೆಕ್ಸ್ ನಂತೆ, ಅ.25ರಿಂದ ಅ.31ರವರೆಗೆ ನೀರು ನಿಲುಗಡೆ, ನ.1ರಿಂದ ನ.20ರವರೆಗೆ 20 ದಿನಗಳಿಗೆ 1280 ಕ್ಯೂಸೆಕ್ಸ್ ನಂತೆ ನೀರು ಹರಿಸಲಾಗುವುದು ಎಂದು ತಿಳಿಸಿದರು.‌

ತುಂಗಭದ್ರಾ ಬಲದಂಡೆ ಕೆಳಮಟ್ಟದ ಕಾಲುವೆಗೆ ಅ.21ರಿಂದ ನ.20ರವರೆಗೆ 650 ಕ್ಯೂಸೆಕ್ಸ್ ನಂತೆ, ರಾಯವಸವಣ್ಣ ಕಾಲುವೆಗೆ 2026, ಅ.21ರಿಂದ 2027ರ ಮೇ 31ರವರೆಗೆ 180 ಕ್ಯೂಸೆಕ್ಸ್ ನಂತೆ ತಿಂಗಳಲ್ಲಿ 10 ದಿನ ನಿಲುಗಡೆ ಮಾಡಿ ಹತ್ತು ದಿನ ನೀರು ಹರಿಸಲಾಗುವುದು. ಎಡದಂಡೆ ವಿಜಯನಗರ ಕಾಲುವೆಗೆ ಅ.21ರಿಂದ 2027 ಮೇ 05ರವರೆಗೆ 60 ಕ್ಯೂಸೆಕ್ಸ್ ನಂತೆ ನೀರಿನ‌ ಲಭ್ಯತೆ‌ ಆಧಾರದ ಮೇಲೆ‌ ನೀರು ಹರಿಸಲಾಗುವುದು ಎಂದು ವಿವರಿಸಿದರು.

ರಾಜ್ಯದಲ್ಲಿ ಬರಗಾಲ ಎದುರಾಗಿದ್ದು, ಜನ-ಜಾನುವಾರುಗಳಿಗೆ ಕುಡಿಯುವ ನೀರು ನೀಡುವುದು ಸರ್ಕಾರದ ಮೊದಲ ಆದ್ಯತೆಯಾಗಿದೆ. ಈ ಹಿನ್ನೆಲೆಯಲ್ಲಿ ಮುಂದಿನ ಬೇಸಿಗೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ನಾಲ್ಕು ಜಿಲ್ಲೆಗಳಿಗೆ ನೀರು ಹಂಚಿಕೆ‌ ಮಾಡಲಾಗಿದೆ ಎಂದು ತಿಳಿಸಿದರು.‌ 

ಸಭೆಯಲ್ಲಿ ಮಾಜಿ ಸಚಿವರಾದ‌ ಬೋಸರಾಜ್,  ಬಿ.ನಾಗೇಂದ್ರ, ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ್, ಶಿವರಾಜ್ ಪಾಟೀಲ್, ನಾಗರಾಜ್, ಹಂಪನಗೌಡ ಬಾದರ್ಲಿ, ಗಣೇಶ್,  ಬಸವರಾಜ್ ತೂರ್ವಿಹಾಳ್, ಬಸನಗೌಡ ಬಾದರ್ಲಿ, ನಾಲ್ಕು ಜಿಲ್ಲೆ ಜಿಲ್ಲಾಧಿಕಾರಿಗಳು ಹಾಗೂ ನೀರಾವರಿ ಇಲಾಖೆ ಅಧಿಕಾರಿಗಳು ಹಾಜರಿದ್ದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಂಬೈ ಅಂತರ ಶಾಲಾ ಬಾಸ್ಕೆಟ್‌ಬಾಲ್ ಧಮಾಕಾ: ಡಾನ್ ಬೊಸ್ಕೊ ಮಣಿಸಿ ಟ್ರೋಫಿ ಎತ್ತಿಹಿಡಿದ ಅಂಡೇರಿಯಾ ಎಂಪಿಎಸ್!Motorola Signature 27 Snapdragon 8 Elite Extreme Gen 6 ಮತ್ತು 200MP ಟೆಲಿಫೋಟೋ ಲೆನ್ಸ್‌ನೊಂದಿಗೆ ಅನಾವರಣಬಾಲಿವುಡ್ ಅಂಗಳದಲ್ಲಿ ಹೊಸ ಲವ್ ಸ್ಟೋರಿ: ಗೆಳತಿ ಜೊತೆ ಮನೀಶ್ ಮಲ್ಹೋತ್ರಾ ಪಾರ್ಟಿಯಲ್ಲಿ ಮಾಧುರಿ ದೀಕ್ಷಿತ್ ಮಗ!ಬ್ಯಾಂಕ್ ಲಾಕರ್’ ನಲ್ಲಿ ಇಟ್ಟಿದ್ದ ₹47 ಲಕ್ಷದ ಚಿನ್ನಾಭರಣ ನಾಪತ್ತೆ! ಮಹಿಳೆಯ ಹೋರಾಟಕ್ಕೆ ಕೊನೆಗೂ ಸಿಕ್ತು ಜಯ!ರಾಮಾಯಣ’ದಲ್ಲಿ ರಾಮನಾಗಿ ರಣಬೀರ್, ರಾವಣನಾಗಿ ಯಶ್; ಇಬ್ಬರಲ್ಲಿ ಶ್ರೀಮಂತ ನಟ ಯಾರು?ಕೈ ಕೈ ಹಿಡಿದು ಬಂದ ಐಶ್ವರ್ಯಾ ರೈ–ಅಭಿಷೇಕ್ ಜೋಡಿ; ರೊಮ್ಯಾಂಟಿಕ್ ಕ್ಷಣ ವೈರಲ್! ವಿಚ್ಛೇದನದ ವದಂತಿಗಳಿಗೆ ಬ್ರೇಕ್?ಆಸೀಸ್ ಕ್ರಿಕೆಟರ್ ಗೆ ಕೊಕೇನ್ ಶಾಕ್: ತಪ್ಪು ಒಪ್ಪಿಕೊಂಡು ನಿಷೇಧ ಪೂರ್ಣಗೊಳಿಸಿದ ಕ್ರಿಸ್ ಲಿನ್!ಧನ್ತೇರಸ್ 2026: ಚಿನ್ನ ಖರೀದಿಗೆ ಶುಭ ಮುಹೂರ್ತ ಯಾವಾಗ? ಬೆಂಗಳೂರು ಸೇರಿ ಪ್ರಮುಖ ನಗರಗಳ ಪೂಜಾ ಸಮಯ ಇಲ್ಲಿದೆಉತ್ತರ ಪ್ರದೇಶದಲ್ಲಿ ಮೂರನೇ ಅವಧಿಗಾಗಿ ಬಿಜೆಪಿಯ ತಂತ್ರ: ಕಲ್ಯಾಣ ಯೋಜನೆ, ಮಹಿಳಾ ಮತ ಮತ್ತು ಯೋಗಿ ವರ್ಚಸ್ಸಿನ ಮೇಲೆ ಭರವಸೆಭಾರತದಲ್ಲಿ ಅತಿ ಹೆಚ್ಚು ಸಕ್ಕರೆ ಉತ್ಪಾದಿಸುವ ಟಾಪ್ 5 ಕಂಪನಿಗಳು ಯಾವುದು ಗೊತ್ತಾ? ಇಲ್ಲಿದೆ ಮಾಹಿತಿ!