LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರವಾಸೋದ್ಯಮದ ಅಭಿವೃದ್ದಿ ಹಾಗೂ ಹೊಸ ಸಾಧ್ಯತೆಗಳ ಆವಿಷ್ಕಾರಕ್ಕೆ ‘Tourism Startup Promotion Policy’: ಸಚಿವ ಕೆ.ಜೆ. ಜಾರ್ಜ್

ಬೆಂಗಳೂರು: ಕರ್ನಾಟಕದ ಪ್ರವಾಸೋದ್ಯಮ ಅಭಿವೃದ್ಧಿಗೆ ಹೊಸ ತಂತ್ರಜ್ಞಾನ, ಉತ್ಪನ್ನಗಳು ಮತ್ತು ನವೀನ ಪರಿಹಾರಗಳನ್ನು ರೂಪಿಸಲು ಸ್ಟಾರ್ಟ್‌ಅಪ್‌ಗಳ ಸಾಮರ್ಥ್ಯವನ್ನು ಬಳಸಿಕೊಳ್ಳುವ ಉದ್ದೇಶದಿಂದ ರಾಜ್ಯ ಪ್ರವಾಸೋದ್ಯಮ ಇಲಾಖೆ ‘Tourism Startup Promotion Policy’ ರೂಪಿಸಲಿದೆ ಎಂದು ಇಂಧನ ಮತ್ತು ಪ್ರವಾಸೋದ್ಯಮ ಸಚಿವ ಕೆ.ಜೆ. ಜಾರ್ಜ್ ತಿಳಿಸಿದ್ದಾರೆ.

ಪ್ರವಾಸೋದ್ಯಮ ಕ್ಷೇತ್ರದ ನೈಜ ಸಮಸ್ಯೆಗಳು ಮತ್ತು ಅಗತ್ಯಗಳನ್ನು ಗುರುತಿಸಿ, ಅವುಗಳಿಗೆ ಪರಿಹಾರಗಳನ್ನು ಅಭಿವೃದ್ಧಿಪಡಿಸಲು ಸ್ಟಾರ್ಟ್‌ಅಪ್‌ಗಳು, ಯುವ ಉದ್ಯಮಿಗಳು ಮತ್ತು ನವೋದ್ಯಮಿಗಳಿಗೆ ಅವಕಾಶ ಕಲ್ಪಿಸುವುದು ಉದ್ದೇಶಿತ ನೀತಿಯ ಪ್ರಮುಖ ಆಶಯವಾಗಿದೆ.

ಪ್ರವಾಸಿಗರ ಅನುಭವ, ಡಿಜಿಟಲ್ ಸೇವೆಗಳು, ಪ್ರವಾಸಿ ತಾಣಗಳ ನಿರ್ವಹಣೆ, ಸುಸ್ಥಿರ ಪ್ರವಾಸೋದ್ಯಮ, ಸ್ವಚ್ಛತೆ, ಸಂಚಾರ, ಸುರಕ್ಷತೆ, ಪ್ರವೇಶಸೌಲಭ್ಯ, ಪ್ರವಾಸಿ ಮಾಹಿತಿ ಹಾಗೂ ಸ್ಥಳೀಯ ಅನುಭವಗಳ ಅಭಿವೃದ್ಧಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಹೊಸ ಪರಿಹಾರಗಳನ್ನು ರೂಪಿಸಲು ನೀತಿಯಡಿ ಅವಕಾಶ ಕಲ್ಪಿಸುವ ಕುರಿತು ಪರಿಶೀಲಿಸಲಾಗುವುದು.

“ಕರ್ನಾಟಕವು ದೇಶದ ಪ್ರಮುಖ ಸ್ಟಾರ್ಟ್‌ಅಪ್ ಕೇಂದ್ರವಾಗಿದೆ. ಈ ನಾವಿನ್ಯತೆಯ ಶಕ್ತಿಯನ್ನು ಪ್ರವಾಸೋದ್ಯಮದೊಂದಿಗೆ ಜೋಡಿಸಬೇಕು. ಪ್ರವಾಸೋದ್ಯಮ ಇಲಾಖೆಯ ಅಗತ್ಯಗಳು ಮತ್ತು ಸವಾಲುಗಳನ್ನು ಸ್ಟಾರ್ಟ್‌ಅಪ್‌ಗಳ ಮುಂದೆ ಇಟ್ಟು, ಅವರು ಹೊಸ ಪರಿಹಾರ, ಉತ್ಪನ್ನ ಮತ್ತು ಸೇವೆಗಳನ್ನು ಅಭಿವೃದ್ಧಿಪಡಿಸಲು ಅವಕಾಶ ನೀಡುವುದು ನಮ್ಮ ಉದ್ದೇಶ. ಉತ್ತಮ ಆಲೋಚನೆಗಳನ್ನು ಪ್ರಾಯೋಗಿಕವಾಗಿ ಪರೀಕ್ಷಿಸಿ, ಫಲಿತಾಂಶ ನೀಡುವ ಪರಿಹಾರಗಳನ್ನು ಪ್ರವಾಸೋದ್ಯಮ ವ್ಯವಸ್ಥೆಯಲ್ಲಿ ಬಳಸಿಕೊಳ್ಳುವಂತಹ ವಾತಾವರಣವನ್ನು ರೂಪಿಸಲು ಈ ನೀತಿ ನೆರವಾಗಲಿದೆ,” ಎಂದು ಸಚಿವ ಕೆ.ಜೆ. ಜಾರ್ಜ್ ಹೇಳಿದರು.

“ಪ್ರವಾಸೋದ್ಯಮದ ಅಭಿವೃದ್ಧಿ ಎಂದರೆ ಕೇವಲ ಹೊಸ ತಾಣಗಳು ಅಥವಾ ಮೂಲಸೌಕರ್ಯ ನಿರ್ಮಾಣವಲ್ಲ. ಪ್ರವಾಸಿಗರ ಪ್ರಯಾಣವನ್ನು ಸುಲಭ, ಸುರಕ್ಷಿತ ಮತ್ತು ಸ್ಮರಣೀಯವಾಗಿಸುವ ಹೊಸ ಪರಿಹಾರಗಳೂ ಅಗತ್ಯ. ಸ್ಟಾರ್ಟ್‌ಅಪ್‌ಗಳಿಗೆ ಕರ್ನಾಟಕದ ಪ್ರವಾಸೋದ್ಯಮ ಕ್ಷೇತ್ರವೇ ಹೊಸ ಆವಿಷ್ಕಾರಗಳನ್ನು ಅಭಿವೃದ್ಧಿಪಡಿಸಿ ಪರೀಕ್ಷಿಸುವ ವೇದಿಕೆಯಾಗಬೇಕು,” ಎಂದು ಅವರು ತಿಳಿಸಿದರು.

ಪ್ರವಾಸೋದ್ಯಮ ಇಲಾಖೆಯ ಕಾರ್ಯದರ್ಶಿ ಡಾ. ರಾಮ್ ಪ್ರಸಾತ್ ಮನೋಹರ್ ಮಾತನಾಡಿ, “ಉದ್ದೇಶಿತ ನೀತಿಯಡಿ ಪ್ರವಾಸೋದ್ಯಮ ಕ್ಷೇತ್ರದ ನಿರ್ದಿಷ್ಟ ಸಮಸ್ಯೆಗಳು ಮತ್ತು ಅಗತ್ಯಗಳನ್ನು ಗುರುತಿಸಿ, ಅವುಗಳಿಗೆ ಸ್ಟಾರ್ಟ್‌ಅಪ್‌ಗಳಿಂದ ಪರಿಹಾರಗಳನ್ನು ಆಹ್ವಾನಿಸುವ ವ್ಯವಸ್ಥೆ ರೂಪಿಸುವ ಬಗ್ಗೆ ಪರಿಶೀಲಿಸಲಾಗುವುದು. ಆಯ್ದ ಪರಿಹಾರಗಳನ್ನು ನಿರ್ದಿಷ್ಟ ಪ್ರವಾಸಿ ತಾಣಗಳಲ್ಲಿ ಪ್ರಾಯೋಗಿಕವಾಗಿ ಜಾರಿಗೊಳಿಸಿ, ಅವುಗಳ ಪರಿಣಾಮಕಾರಿತ್ವವನ್ನು ಮೌಲ್ಯಮಾಪನ ಮಾಡುವ ಮೂಲಕ ಯಶಸ್ವಿ ಮಾದರಿಗಳನ್ನು ದೊಡ್ಡ ಪ್ರಮಾಣದಲ್ಲಿ ವಿಸ್ತರಿಸಬಹುದು. ಇದರಿಂದ ಸ್ಟಾರ್ಟ್‌ಅಪ್‌ಗಳಿಗೆ ನೈಜ ಮಾರುಕಟ್ಟೆ ಮತ್ತು ಪರೀಕ್ಷಾ ವೇದಿಕೆ ದೊರೆಯುವುದರ ಜೊತೆಗೆ ಪ್ರವಾಸೋದ್ಯಮ ಇಲಾಖೆಗೆ ಹೊಸ ತಂತ್ರಜ್ಞಾನ ಮತ್ತು ಆವಿಷ್ಕಾರಗಳನ್ನು ವೇಗವಾಗಿ ಅಳವಡಿಸಿಕೊಳ್ಳಲು ಸಾಧ್ಯವಾಗಲಿದೆ,” ಎಂದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
‘ರಾಮಾಯಣ’ ಸಿನಿಮಾ ನೋಡಿ ಭಾವುಕರಾದ ಅನುಪಮ್ ಖೇರ್: ಭಾರತೀಯ ಚಿತ್ರರಂಗದ ಸರ್ವಶ್ರೇಷ್ಠ ಸಿನಿಮಾ ಎಂದ ನಟ!ಮುಂಬೈ ಅಂತರ ಶಾಲಾ ಬಾಸ್ಕೆಟ್‌ಬಾಲ್ ಧಮಾಕಾ: ಡಾನ್ ಬೊಸ್ಕೊ ಮಣಿಸಿ ಟ್ರೋಫಿ ಎತ್ತಿಹಿಡಿದ ಅಂಡೇರಿಯಾ ಎಂಪಿಎಸ್!Motorola Signature 27 Snapdragon 8 Elite Extreme Gen 6 ಮತ್ತು 200MP ಟೆಲಿಫೋಟೋ ಲೆನ್ಸ್‌ನೊಂದಿಗೆ ಅನಾವರಣಬಾಲಿವುಡ್ ಅಂಗಳದಲ್ಲಿ ಹೊಸ ಲವ್ ಸ್ಟೋರಿ: ಗೆಳತಿ ಜೊತೆ ಮನೀಶ್ ಮಲ್ಹೋತ್ರಾ ಪಾರ್ಟಿಯಲ್ಲಿ ಮಾಧುರಿ ದೀಕ್ಷಿತ್ ಮಗ!ಬ್ಯಾಂಕ್ ಲಾಕರ್’ ನಲ್ಲಿ ಇಟ್ಟಿದ್ದ ₹47 ಲಕ್ಷದ ಚಿನ್ನಾಭರಣ ನಾಪತ್ತೆ! ಮಹಿಳೆಯ ಹೋರಾಟಕ್ಕೆ ಕೊನೆಗೂ ಸಿಕ್ತು ಜಯ!ರಾಮಾಯಣ’ದಲ್ಲಿ ರಾಮನಾಗಿ ರಣಬೀರ್, ರಾವಣನಾಗಿ ಯಶ್; ಇಬ್ಬರಲ್ಲಿ ಶ್ರೀಮಂತ ನಟ ಯಾರು?ಕೈ ಕೈ ಹಿಡಿದು ಬಂದ ಐಶ್ವರ್ಯಾ ರೈ–ಅಭಿಷೇಕ್ ಜೋಡಿ; ರೊಮ್ಯಾಂಟಿಕ್ ಕ್ಷಣ ವೈರಲ್! ವಿಚ್ಛೇದನದ ವದಂತಿಗಳಿಗೆ ಬ್ರೇಕ್?ಆಸೀಸ್ ಕ್ರಿಕೆಟರ್ ಗೆ ಕೊಕೇನ್ ಶಾಕ್: ತಪ್ಪು ಒಪ್ಪಿಕೊಂಡು ನಿಷೇಧ ಪೂರ್ಣಗೊಳಿಸಿದ ಕ್ರಿಸ್ ಲಿನ್!ಧನ್ತೇರಸ್ 2026: ಚಿನ್ನ ಖರೀದಿಗೆ ಶುಭ ಮುಹೂರ್ತ ಯಾವಾಗ? ಬೆಂಗಳೂರು ಸೇರಿ ಪ್ರಮುಖ ನಗರಗಳ ಪೂಜಾ ಸಮಯ ಇಲ್ಲಿದೆಉತ್ತರ ಪ್ರದೇಶದಲ್ಲಿ ಮೂರನೇ ಅವಧಿಗಾಗಿ ಬಿಜೆಪಿಯ ತಂತ್ರ: ಕಲ್ಯಾಣ ಯೋಜನೆ, ಮಹಿಳಾ ಮತ ಮತ್ತು ಯೋಗಿ ವರ್ಚಸ್ಸಿನ ಮೇಲೆ ಭರವಸೆ