LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಎಲ್ಲಾ ಡಿಜಿಟಲ್ ವಹಿವಾಟುಗಳಿಗೆ ಎರಡು ಹಂತದ ದೃಢೀಕರಣ ಜಾರಿ

ನವದೆಹಲಿ: ಯುಪಿಐ ವಹಿವಾಟು ಸೇರಿದಂತೆ ಎಲ್ಲಾ ಡಿಜಿಟಲ್ ವಹಿವಾಟುಗಳಿಗೆ ಎರಡು ಹಂತದ ದೃಢೀಕರಣ ಏಪ್ರಿಲ್ 1ರಿಂದ ಜಾರಿಗೆ ಬಂದಿದೆ.

ಆನ್ಲೈನ್ ಮೂಲಕ ನಡೆಯುವ ಹಣಕಾಸಿನ ವಂಚನೆಗಳನ್ನು ತಡೆಯಲು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ(ಆರ್‌ಬಿಐ) ಈ ಕ್ರಮ ಜಾರಿಗೆ ತಂದಿದೆ. ಬಳಕೆದಾರರು ಈ ಎರಡು ಹಂತಗಳನ್ನು ಪೂರ್ಣಗೊಳಿಸಿದಲ್ಲಿ ಮಾತ್ರ ವಹಿವಾಟು ನಡೆಸಬಹುದಾಗಿದೆ.

 ಯಾರಾದರೂ ನಿಮ್ಮ ಪಿನ್ ನೋಡಿದರೂ ಅನಧಿಕೃತ ಪಾವತಿ ಮಾಡಲು ಸಾಧ್ಯವಾಗುವುದಿಲ್ಲ. ಬ್ಯಾಂಕುಗಳು ಮತ್ತು ಬ್ಯಾಂಕೇತರ ಸಂಸ್ಥೆಗಳು ಸೇರಿದಂತೆ ಪಾವತಿ ಸೇವೆ ಒದಗಿಸುವ ಪೂರೈಕೆದಾರರು ಎರಡು ಹಂತದ ದೃಢೀಕರಣ ಜಾರಿ ನಿರ್ದೇಶನ ಪಾಲಿಸುವಂತೆ ಆರ್‌ಬಿಐ ಸೂಚಿಸಿದೆ.

ಇದರಿಂದ ಬಳಕೆದಾರರು ಯುಪಿಐ ಪಿನ್ ಅಷ್ಟೇ ನಮೂದಿಸುವ ಮೂಲಕ ವಹಿವಾಟು ನಡೆಸಲು ಸಾಧ್ಯವಾಗುವುದಿಲ್ಲ. ಒಟಿಪಿ, ಬೆರಳಚ್ಚು, ದೃಢೀಕರಣ ಅಥವಾ ಮುಖಚಹರೆ ಗುರುತಿಸುವ ಮೂಲಕ ವಹಿವಾಟು ನಡೆಸಬೇಕಿದೆ. ಅಲ್ಲದೆ ಬ್ಯಾಂಕಿಂಗ್ ಆ್ಯಪ್ ನಲ್ಲಿ ಬಳಕೆದಾರರು ಸ್ಕ್ರೀನ್ ಶಾಟ್ ಅಥವಾ ಸ್ಕ್ರೀನ್ ರೆಕಾರ್ಡ್ ಮಾಡಲು ಬರುವುದಿಲ್ಲ ಎಂದು ಹೇಳಲಾಗಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿಮಕ್ಕಳ ಮನಸ್ಸು, ಮೆದುಳಿನ ಶಕ್ತಿಗೆ ದಾರಿದೀಪ ಈ ಪುಸ್ತಕ: ತಪ್ಪದೇ ಖರೀದಿಸಿ, ನಿಮ್ಮ ಮಕ್ಕಳಿಗೆ ತಪ್ಪದೇ ಓದಿಸಿ!ಹಿಂದೂಗಳ ಆಚರಣೆಗೆ ಸರ್ಕಾರ ಅಡ್ಡಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಕಾಂಗ್ರೆಸ್ ಪಕ್ಷ ಸಂಘಟನೆ ಬಲವರ್ಧನೆಗೆ 'ಕೆಪಿಸಿಸಿ ಕನೆಕ್ಟ್ ಸೆಂಟರ್' ಸ್ಥಾಪನೆ: ಪದಾಧಿಕಾರಿಗಳ ನೇಮಕ