LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

YOGA Day: ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ: ಯೋಗಾಭ್ಯಾಸದಲ್ಲಿ ಭಾಗಿಯಾದ ನಟ ದರ್ಶನ್

ಬೆಂಗಳೂರು: ಇಂದು 12ನೇ ಅಂತರಾಷ್ಟ್ರೀಯ ಯೋಗ ದಿನ ಹಿನ್ನೆಲೆಯಲ್ಲಿ ದೇಶಾದ್ಯಂತ ಯೋಗ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಕೋಲ್ಕತ್ತಾದ ರೆಡ್ ರೋಡ್ ನಲ್ಲಿ 30 ಸಾವಿರ ಜನರೊಂದಿಗೆ ಯೋಗಾಸನಗಳನ್ನು ಮಾಡುವ ಮೂಲಕ ಗಮನಸೆಳೆದರು.

ಅಂತರಾಷ್ಟ್ರೀಯ ಯೋಗ ದಿನ ಹಿನ್ನೆಲೆಯಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗ್ರ‍ಹದಲ್ಲಿಯೂ ಯೋಗ ದಿನ ಆಚರಿಸಲಾಯಿತು. ಜೈಲಿನಲ್ಲಿರುವ ಕಿಅದಿಗಳು, ವಿಚಾರಣಾದೀನ ಕೈದಿಗಳು ಯೋಗಾಸನಗಳನ್ನು ಮಾಡುವ ಮೂಲಕ ಕಾರ್ಯಕ್ರಮದಲ್ಲಿ ಭಾಗಿಯಾದರು. ರೇಣುಕಾಸ್ವಾಮಿ ಹತ್ಯೆ ಕೇಸ್ ನಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್ ಕೂಡ ಯೋಗ ದಿನಾಚರಣೆಯಲ್ಲಿ ಪಾಲ್ಗೊಂಡು ಯೋಗಾಭ್ಯಾಸ ಮಾಡಿದರು.

ಮತ್ತೊಂದೆಡೆ ಅದೇ ಜೈಲಿನಲ್ಲಿರುವ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಎ೧ ಆರೋಪಿ ಪವಿತ್ರಾ ಗೌಡ ಹಾಗೂ ಇತರ ಆರೋಪಿಗಳು ಕೂಡ ಯೋಗ ದಿನಾಚರಣೆಯಲ್ಲಿ ಭಾಗವಹಿಸಿ ಯೋಗಾಭ್ಯಾಸ ಮಾಡಿದ್ದಾರೆ.

ಆರಂಭದಲ್ಲಿ ನಟ ದರ್ಶನ್ ಯೋಗ ದಿನಾಚರಣೆಯಲ್ಲಿ ಭಾಗಿಯಾಗಲ್ಲ. ತನಗೆ ಬೆನ್ನು ನೋವಿದೆ ಎಂದು ತಿಳಿಸಿದ್ದರು. ಆದರೆ ಎಡಿಜಿಪಿ ಅಲೋಕ್ ಕುಮಾರ್ ಅವರು ದರ್ಶನ್ ಅವರಿಗೆ ಯೋಗಾಭ್ಯಾಸದ ಮಹತ್ವ ಹಾಗೂ ಜೈಲಿನಲ್ಲಿರುವ ಎಲ್ಲಾ ಕೈದಿಗಳು ಯೋಗದಿನದಲ್ಲಿ ಭಾಗಿಯಾಗುವಂತೆ ತಿಳಿಸಿದ್ದರು. ಅಲ್ಲದೇ ಯೋಗಾಸನದಿಂದ ಬೆನ್ನು ನೋವು ಕಡಿಮೆಯಾಗಲಿದೆ ಎಂದು ತಿಳಿ ಹೇಳಿದ್ದರು. ಅಲೋಕ್ ಕುಮಾರ್ ಸೂಚನೆ ಮೇರೆಗೆ ದರ್ಶನ್ ಇಂದಿನ ಯೋಗ ದಿನಾಚರಣೆಯಲ್ಲಿ ಭಾಗಿಯಾಗಿದ್ದಾರೆ ಎಂದು ತಿಳಿದುಬಂದಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿಮಕ್ಕಳ ಮನಸ್ಸು, ಮೆದುಳಿನ ಶಕ್ತಿಗೆ ದಾರಿದೀಪ ಈ ಪುಸ್ತಕ: ತಪ್ಪದೇ ಖರೀದಿಸಿ, ನಿಮ್ಮ ಮಕ್ಕಳಿಗೆ ತಪ್ಪದೇ ಓದಿಸಿ!ಹಿಂದೂಗಳ ಆಚರಣೆಗೆ ಸರ್ಕಾರ ಅಡ್ಡಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಕಾಂಗ್ರೆಸ್ ಪಕ್ಷ ಸಂಘಟನೆ ಬಲವರ್ಧನೆಗೆ 'ಕೆಪಿಸಿಸಿ ಕನೆಕ್ಟ್ ಸೆಂಟರ್' ಸ್ಥಾಪನೆ: ಪದಾಧಿಕಾರಿಗಳ ನೇಮಕ