Sports News

ನಿತಿನ್ ಗಡ್ಕರಿ ಭೇಟಿ ಮಾಡಿ ಸಿಎಂ

ನಿತಿನ್ ಗಡ್ಕರಿ ಭೇಟಿ ಮಾಡಿ ಸಿಎಂ

ದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ದೆಹಲಿಯಲ್ಲಿ ಕೇಂದ್ರ ಭೂ ಸಾರಿಗೆ ಸಚಿವರಾದ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ಚರ್ಚಿಸಿದರು. ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಉಂಟಾಗಿರುವ ಸಮಸ್ಯೆಗಳ ಬಗ್ಗೆಯೂ ಸಿದ್ದರಾಮಯ್ಯ ಅವರು ಗಡ್ಕರಿ ಅವರ ಗಮನ ಸೆಳೆದರು.‌ ಹೆದ್ದಾರಿಯಲ್ಲಿ ಅಪಘಾತಗಳ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆಯೂ ಚರ್ಚಿಸಿದರು. ಅಧಿಕಾರಿಗಳು ಹಾಗೂ ತಜ್ಞರ ತಂಡವೊಂದನ್ನು ಹೆದ್ದಾರಿ ವೀಕ್ಷಣೆಗೆ ಕಳುಹಿಸಿ ಲೋಪ ದೋಷ ಸರಿಪಡಿಸುವುದಾಗಿ ಗಡ್ಕರಿ ಅವರು ತಿಳಿಸಿದರು. ಶಿರಾಡಿ ಘಾಟ ಸುರಂಗ ಮಾರ್ಗ ಕುರಿತಾಗಿಯೂ ಮುಖ್ಯಮಂತ್ರಿಗಳು ಸಚಿವರೊಂದಿಗೆ ಮಾತುಕತೆ