Please assign a menu to the primary menu location under menu

State

PUC ವಿದ್ಯಾರ್ಥಿಗಳಿಗೆ 25 ಸಾವಿರ, ಪದವಿಗೆ 30, ಪಿಜಿ ವಿದ್ಯಾರ್ಥಿಗಳಿಗೆ 35 ಸಾವಿರ ರೂ. ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

PUC ವಿದ್ಯಾರ್ಥಿಗಳಿಗೆ 25 ಸಾವಿರ, ಪದವಿಗೆ 30, ಪಿಜಿ ವಿದ್ಯಾರ್ಥಿಗಳಿಗೆ 35 ಸಾವಿರ ರೂ. ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

ಮೈಸೂರು: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ 2020-21ನೇ ಸಾಲಿನ ಮೆಟ್ರಿಕ್ ನಂತರದ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದ ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ Read more…

ಮೈಸೂರು: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ 2020-21ನೇ ಸಾಲಿನ ಮೆಟ್ರಿಕ್ ನಂತರದ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದ ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಮಂಜೂರು ಮಾಡಲು ಆನ್‍ಲೈನ್ ಮೂಲಕ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಪಿಯುಸಿ ವಿದ್ಯಾರ್ಥಿಗಳಿಗೆ 20,000 ರೂ., ಪದವಿ ವಿದ್ಯಾರ್ಥಿಗಳಿಗೆ 25,000 ರೂ. ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ 35,000 ರೂ. ಪ್ರೋತ್ಸಾಹಧನವನ್ನು ಮಂಜೂರು ಮಾಡಲಾಗುವುದು. ಅರ್ಹ ಅಭ್ಯರ್ಥಿಗಳು ಸಮಾಜ ಕಲ್ಯಾಣ ಇಲಾಖಾ ವೆಬ್‍ಸೈಟ್ www.sw.kar.nic.in ನಲ್ಲಿ ಅಕ್ಟೋಬರ್ 31ರೊಳಗೆ ಅರ್ಜಿ ಸಲ್ಲಿಸಿ, ಅರ್ಜಿ ಸಲ್ಲಿಸಿದ 4 ದಿನದೊಳಗೆ ಡೌನ್‍ಲೋಡ್ ಮಾಡಿದ ಅರ್ಜಿಯೊಂದಿಗೆ ಜಾತಿ ಪ್ರಮಾಣ ಪತ್ರದ ದೃಢೀಕೃತ ಜೆರಾಕ್ಸ್ ಪ್ರತಿ, ಆಧಾರ್ ಕಾರ್ಡ್ ಜೆರಾಕ್ಸ್, ಎಲ್ಲಾ ಸೆಮಿಸ್ಟರ್‍ಗಳ ಮೂಲ ಅಂಕಪಟ್ಟಿಗಳ ದೃಢೀಕೃತ ಜೆರಾಕ್ಸ್ ಪ್ರತಿ, ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್ ಪ್ರತಿ, ಆನ್‍ಲೈನ್ ಮೂಲಕ ಸಲ್ಲಿಸಲಾದ ಅರ್ಜಿಯನ್ನು ಡೌನ್‍ಲೋಡ್ ಮಾಡಿ ಕಾಲೇಜು ಪ್ರಾಂಶುಪಾಲರ ಸಹಿ ಹಾಗೂ ಮೊಹರಿನೊಂದಿಗೆ ಅರ್ಜಿ ಸಲ್ಲಿಸಬೇಕು ಎಂದು ಪಿರಿಯಾಪಟ್ಟಣ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.


Leave a Reply

error: Content is protected !!