Please assign a menu to the primary menu location under menu

National

ಅ. 30ಕ್ಕೆ ಗೋವಾಗೆ ರಾಹುಲ್ ಗಾಂಧಿ ಭೇಟಿ

ಅ. 30ಕ್ಕೆ ಗೋವಾಗೆ ರಾಹುಲ್ ಗಾಂಧಿ ಭೇಟಿ

ಪಣಜಿ: ಕಾಂಗ್ರೆಸ್ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಅಕ್ಟೋಬರ್ 30 ರಂದು ಗೋವಾಕ್ಕೆ ಆಗಮಿಸಲಿದ್ದು ಪಕ್ಷದ ಪರ ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ರಾಜ್ಯದಲ್ಲಿ ಗಣಿಗಾರಿಕೆ ಅವಲಂಬಿತ ಕುಟುಂಬಗಳ ಹಾಗೂ ಮೀನುಗಾರನ್ನು ಭೇಟಿ ಮಾಡಿ ಸಮಸ್ಯೆಯನ್ನು ಆಲಿಸಲಿದ್ದಾರೆ ಎಂದು ಕಾಂಗ್ರೆಸ್ ಮಾಹಿತಿ ನೀಡಿದೆ.
ಕೆಲವೇ ತಿಂಗಳುಗಳಲ್ಲಿ ಗೋವಾ, ಮಣಿಪುರ, ಪಂಜಾಬ್, ಉತ್ತರಾಖಂಡ, ಉತ್ತರಪ್ರದೇಶ ರಾಜ್ಯ ವಿಧಾನಸಭಾ ಚುನಾವಣೆ ನಡೆಯಲಿದೆ. ಗೋವಾ ವಿಧಾನಸಭಾ ಚುನಾವಣೆಯಲ್ಲಿ ಜಯಭೇರಿ ಬಾರಿಸಲು ಕಾಂಗ್ರೆಸ್ ಪಕ್ಷವು ರಾಜ್ಯದಲ್ಲಿ ಭರ್ಜರಿ ಪ್ರಚಾರ ನಡೆಸುತ್ತಿದೆ. ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರು ಗೋವಾಕ್ಕೆ ಭೇಟಿ ನೀಡಿ ಈಗಾಗಲೇ ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಂಡಿದ್ದಾರೆ.
ಇದನ್ನೂ ಓದಿ: ಮಿಮ್ಸ್‌ನ ಹೆರಿಗೆ ವಾರ್ಡ್‌ನಲ್ಲಿ ಹಾಸಿಗೆ ಹೆಚ್ಚಳ
ಗೋವಾದಲ್ಲಿ ಪ್ರಸಕ್ತ ವಿಧಾನಸಭಾ ಚುನಾವಣೆಯಲ್ಲಿ ಪೂರ್ಣ ಬಹುಮತದೊಂದಿಗೆ ಸರ್ಕಾರ ರಚಿಸಲು ಕಾಂಗ್ರೆಸ್ ಪಕ್ಷವು ಭರ್ಜರಿ ಪ್ರಚಾರ ಸಭೆಗಳನ್ನು ನಡೆಸುತ್ತಿದೆ.
.


Leave a Reply

error: Content is protected !!