Please assign a menu to the primary menu location under menu

State

BIG NEWS: ಹಾನಗಲ್ ಉಪಚುನಾವಣೆ; ಗೆಲುವಿನತ್ತ ಹೆಜ್ಜೆ ಹಾಕಿದ ಕಾಂಗ್ರೆಸ್ ಅಭ್ಯರ್ಥಿ; ಮಾನವೀಯತೆಗೆ ಮತ ನೀಡಿದ ಜನತೆ ಎಂದ ಶ್ರೀನಿವಾಸ್ ಮಾನೆ

BIG NEWS: ಹಾನಗಲ್ ಉಪಚುನಾವಣೆ; ಗೆಲುವಿನತ್ತ ಹೆಜ್ಜೆ ಹಾಕಿದ ಕಾಂಗ್ರೆಸ್ ಅಭ್ಯರ್ಥಿ; ಮಾನವೀಯತೆಗೆ ಮತ ನೀಡಿದ ಜನತೆ ಎಂದ ಶ್ರೀನಿವಾಸ್ ಮಾನೆ

ಹಾವೇರಿ: ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ಜಿದ್ದಾಜಿದ್ದಿನ ಅಖಾಡವಾಗಿರುವ ಹಾನಗಲ್ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ್ ಮಾನೆ ಗೆಲುವು ಬಹುತೇಕ ಖಚಿತವಾಗಿದೆ. ಸಿಎಂ ಬೊಮ್ಮಾಯಿ ತವರು ಜಿಲ್ಲೆಯಲ್ಲಿಯೇ ಬಿಜೆಪಿ ಅಭ್ಯರ್ಥಿ ಶಿವರಾಜ್ ಸಜ್ಜನ್ ಭಾರಿ ಮುಖಭಂಗ ಅನುಭವಿಸಿದ್ದಾರೆ.

ಹಾನಗಲ್ ನಲ್ಲಿ 13ನೇ ಸುತ್ತಿನ ಮತ ಎಣಿಕೆಯಲ್ಲಿಯೂ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ್ ಮಾನೆ ಮುನ್ನಡೆ ಸಾಧಿಸಿದ್ದು, ಗೆಲುವಿನತ್ತ ದಾಪುಗಾಲಿಟ್ಟಿದ್ದಾರೆ. ಶ್ರೀನಿವಾಸ್ ಮಾನೆ 59,985 ಮತಗಳಿಂದ ಮುನ್ನಡೆಯಲ್ಲಿದ್ದರೆ, ಬಿಜೆಪಿ ಅಭ್ಯರ್ಥಿ ಶಿವರಾಜ್ ಸಜ್ಜನ್ 52,922 ಮತಗಳನ್ನು ಪಡೆದಿದ್ದಾರೆ. ಜೆಡಿಎಸ್ ಅಭ್ಯರ್ಥಿ ನಿಯಾಜ್ ಶೇಖ್ 629 ಮತಗಳನ್ನು ಪಡೆದು ತೀವ್ರ ಹಿನ್ನಡೆ ಅನುಭವಿಸಿದ್ದಾರೆ.

ಹಾನಗಲ್ ನಲ್ಲಿ ತಮ್ಮ ಗೆಲುವಿನ ಕುರಿತು ಸಂತಸ ಹಂಚಿಕೊಂಡಿರುವ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ್ ಮಾನೆ, ಇಂದು ಹಾನಗಲ್ ನಲ್ಲಿ ಹಣಬಲ ಸೋತಿದೆ. ಜನಬಲ ಗೆದ್ದಿದೆ. ಮಾನವೀಯತೆಗೆ ಮತ ನೀಡಿದ್ದು, ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಿದ್ದಾರೆ, ಬಿಜೆಪಿ ವಿರುದ್ಧ ಕಾಂಗ್ರೆಸ್ ಗೆದ್ದಿದೆ ಎಂದು ಹೇಳಿದರು.


Leave a Reply

error: Content is protected !!