Entertainment News

ಕಾವೇರಿ ವಿಚಾರ, ಶಾಶ್ವತ ಪರಿಹಾರಕ್ಕೆ ಮನವಿ ಮಾಡಿದ್ದೇನೆ: ಸುಮಲತಾ

ಕಾವೇರಿ ವಿಚಾರ, ಶಾಶ್ವತ ಪರಿಹಾರಕ್ಕೆ ಮನವಿ ಮಾಡಿದ್ದೇನೆ: ಸುಮಲತಾ

ಬೆಂಗಳರಾಜ್ಯದಲ್ಲಿ ತಮಿಳುನಾಡಿಗೆ ನೀರು ಬಿಡುವುದರ ಬಗ್ಗೆ ದಿನೇ ದಿನೇ ವಿರೋಧ ವ್ಯಕ್ತವಾಗುತ್ತಿರುವುದರಿಂದ ಇಂದು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸರ್ವ ಪಕ್ಷದ ಸಭೆ ನಡೆಯಿತು.

ಇನ್ನು ತಮಿಳುನಾಡಿಗೆ ಕೆಆರ್​ಎಸ್ ಡ್ಯಾಂನಿಂದ ಕಾವೇರಿ ನೀರು ಹರಿಸುವ ವಿಚಾರದಲ್ಲಿಆಡಳಿತ ಪಕ್ಷ ಕಾಂಗ್ರೆಸ್ ಮತ್ತು ಪ್ರತಿಪಕ್ಷ ಬಿಜೆಪಿ ನಡುವೆ ಆರೋಪ ಪ್ರತ್ಯಾರೋಪಗಳು ನಡೆಯುತ್ತಿವೆ. ರಾಜ್ಯದ ಹಲವೆಡೆ ಈ ವಿಚಾರಕ್ಕೆ ಪ್ರತಿಭಟನೆಗಳು ಕೂಡ ನಡೆಯುತ್ತಿವೆ. ಇನ್ನು ಕಾವೇರಿ ವಿಚಾರವಾಗಿ ಇಂದು ನಡೆದ ಸರ್ವಪಕ್ಷ ಸಭೆಯಲ್ಲಿ ಭಾಗಿಯಾಗಿದ್ದ ಮಂಡ್ಯ ಸಂಸದೆ ಸುಮಲತಾ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

ರಾಜ್ಯದ ಜಲ ವಿವಾದಗಳ ಶಾಶ್ವತ ಪರಿಹಾರಕ್ಕೆ ಮನವಿ ಮಾಡಿದ್ದೇನೆ. ಸಮಸ್ಯೆಯನ್ನು ಸಮರ್ಥವಾಗಿ ಮಂಡಿಸುವ ಬಗ್ಗೆ ಸಲಹೆ ನೀಡಿದ್ದೇವೆ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಹಾಗೂ ಸುಪ್ರೀಂಕೋರ್ಟ್ ಮುಂದೆ ನಮ್ಮ ಸಮಸ್ಯೆಯನ್ನು ಸಮರ್ಥವಾಗಿ ಮಂಡಿಸುವ ಬಗ್ಗೆ ಸಲಹೆ ನೀಡಿದ್ದೇವೆ ಎಂದು ಸಿಎಂ ನೇತೃತ್ವದ ಸಭೆ ಬಳಿಕ ಮಂಡ್ಯ ಸಂಸದೆ ಸುಮಲತಾ ಹೇಳಿದರು.

Disclaimer: This Story is auto-aggregated by a Syndicated Feed and has not been Created or Edited By City Big News Staff.