
ಬೆಂಗಳೂರು: ಆಗಸ್ಟ್ 23 ರಂದು ಚಂದ್ರಯಾನ 3 ಯಶಸ್ವಿಯಾಗಿ ಲ್ಯಾಂಡ್ ಆಗಿದ್ದರಿಂದ ಆ ದಿನವನ್ನು ಇನ್ಮುಂದೆ ರಾಷ್ಟ್ರೀಯ ಬಾಹ್ಯಾಕಾಶದ ದಿನವೆಂದು ಮೋದಿ ಅವರು ಘೋಷಣೆ ಮಾಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರು ಇಂದು ಬೆಂಗಳೂರಿನಲ್ಲಿರುವ ಇಸ್ರೋ ಸಂಸ್ಥೆಗೆ ಭೇಟಿ ನೀಡಿ ಇಸ್ರೋ ವಿಜ್ಞಾನಿಗಳಿಗೆ ಅಭಿನಂದನೆ ಸಲ್ಲಿಸಿದರು. ಇನ್ನು ಈ ವೇಳೆ ಮಾತನಾಡಿದ ಅವರು, ಇನ್ಮುಂದೆ ಆಗಸ್ಟ್ 23 ರನ್ನು ದೇಶದಾದ್ಯಂತ ಬಾಹ್ಯಾಕಾಶ ದಿನವೆಂದು ಆಚರಿಸಲಾಗುತ್ತದೆ ಎಂದು ತಿಳಿಸಿದರು.
ಚಂದ್ರಯಾನ-3ರ ಯಶಸ್ಸಿನಿಂದಾಗಿ ಸ್ಥಳೀಯ ಉತ್ಪಾದನೆಗಳ ಶಕ್ತಿ ಪ್ರದರ್ಶನವಾಗಿದೆ. ಇದರಿಂದ ಮೇಕ್ ಇನ್ ಇಂಡಿಯಾ ಕಾರ್ಯಕ್ರಮವನ್ನು ಉತ್ತೇಜಿಸಲು ಸಹಕಾರಿಯಾಗಿದೆ. ಅಲ್ಲದೇ ಮಹಿಳಾ ವಿಜ್ಞಾನಿಗಳು ಚಂದ್ರಯಾನ-3 ರಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಶ್ಲಾಘಿಸಿದ್ದಾರೆ.
Disclaimer: This Story is auto-aggregated by a Syndicated Feed and has not been Created or Edited By City Big News Staff.