Please assign a menu to the primary menu location under menu

National

ರಾಜ್ಯದಲ್ಲಿ ಮುಂದಿನ ಐದು ದಿನಗಳವರೆಗೆ ಅಕಾಲಿಕ  ಮಳೆ ಸಾಧ್ಯತೆ

ರಾಜ್ಯದಲ್ಲಿ ಮುಂದಿನ ಐದು ದಿನಗಳವರೆಗೆ ಅಕಾಲಿಕ  ಮಳೆ ಸಾಧ್ಯತೆ

ಮುಂಬಯಿ: ದೀಪಾವಳಿ ಹಬ್ಬದ ಮುನ್ನಾದಿನದಂದು ರಾಜ್ಯದಲ್ಲಿ ಅಕಾಲಿಕ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಪ್ರಕಾರ, ಮಹಾರಾಷ್ಟ್ರದ  ದಕ್ಷಿಣ ಕೊಂಕಣ, ಪುಣೆ, ಮಧ್ಯ ಮಹಾರಾಷ್ಟ್ರ ಮತ್ತು ಮರಾಠವಾಡದ ಕೆಲವು ಭಾಗಗಳಲ್ಲಿ ಮುಂದಿನ ಐದು ದಿನಗಳ ವರೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಮುಂದಿನ ದಿನಗಳಲ್ಲಿ ರಾಜ್ಯದ ವಿವಿಧೆಡೆ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಅಧಿಕಾರಿ ಕೆ. ಎಸ್‌. ಹೊಸಳಿಕರ್‌ ಮಾಹಿತಿ ನೀಡಿದ್ದಾರೆ. ಹಾಗಾಗಿ ರಾಜ್ಯದಲ್ಲಿ  ದೀಪಾವಳಿಯಲ್ಲಿ ಮಳೆಯಾಗಲಿದೆ. ಅಕಾಲಿಕ ಮಳೆ ಹಾಗೂ ಅತಿವೃಷ್ಟಿಯಿಂದ ರಾಜ್ಯದ ರೈತರು ಈಗಾಗಲೇ ಅಪಾರ ನಷ್ಟ ಅನುಭವಿಸಿದ್ದಾರೆ. ಆದರೆ ಈಗ ದೀಪಾವಳಿಯಲ್ಲೂ ಮಳೆಯಾಗುವ ಸಂಭವವಿದ್ದು, ಎಚ್ಚರಿಕೆ ವಹಿಸಬೇಕಿದೆ.


Leave a Reply

error: Content is protected !!